Homeಕರ್ನಾಟಕಬ್ರಾಹ್ಮಣರ ಒಡೆತನದ ಪತ್ರಿಕೆಗೆಳಿಗೆ ಜಾಹಿರಾತು ನೀಡುವಂತೆ ಆದೇಶಿಸಿದ ಬಿಜೆಪಿ ಸರ್ಕಾರ

ಬ್ರಾಹ್ಮಣರ ಒಡೆತನದ ಪತ್ರಿಕೆಗೆಳಿಗೆ ಜಾಹಿರಾತು ನೀಡುವಂತೆ ಆದೇಶಿಸಿದ ಬಿಜೆಪಿ ಸರ್ಕಾರ

- Advertisement -
- Advertisement -

ಬ್ರಾಹ್ಮಣ ಸಮುದಾಯದ ವ್ಯಕ್ತಿಗಳ ಒಡೆತನದಲ್ಲಿ ಇರುವ ಪತ್ರಿಕೆಗಳಿಗೆ ಪ್ರತಿ ತಿಂಗಳು ಜಾಹಿರಾತು ನೀಡುವ ಬಗ್ಗೆ ರಾಜ್ಯ ವಾರ್ತಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು, ‘ಮುಖ್ಯಮಂತ್ರಿ ಬೊಮ್ಮಾಯಿ ಅವರು ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಿಷ್ಠಾವಂತ ನೌಕರ’ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನವರಿ 24 ರ ಮಂಗಳವಾರ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ, “ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಬ್ರಾಹ್ಮಣ ಸಮುದಾಯದ ಒಡೆತನದ ಪತ್ರಿಕೆಗಳಿಗೆ ಪ್ರತೀ ತಿಂಗಳು ಎರಡು ಪುಟಗಳ ಜಾಹಿರಾತು ಬಿಡುಗಡೆ ಮಾಡಲು ಸರ್ಕಾರದ ಮಂಜುರಾತಿ ಆದೇಶ ಹೊರಡಿಸಲಾಗಿದೆ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬ್ರಾಹ್ಮಣದ ಒಡೆತನೆ ಪತ್ರಿಕೆಗಳಿಗೆ ಜಾಹಿರಾತು ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಗೆ ಜನವರಿ 13ರ ಶುಕ್ರವಾರ ಆದೇಶ ನೀಡಿದೆ ಎಂದು ಸುತ್ತೋಲೆಯಲ್ಲಿ ವಾರ್ತಾ ಇಲಾಖೆ ಉಲ್ಲೇಖಿಸಿದೆ. ಈ ಬಗ್ಗೆ 2022-23ರ ಸಾಲಿನ ಬಜೆಟ್‌‌ನಲ್ಲಿ ಘೋಷಿಸಲಾಗಿದೆ ಎಂದು ಕೂಡಾ ಸುತ್ತೋಲೆಯು ವಿಷಯ ಸೂಚಿಯಲ್ಲಿ ತಿಳಿಸಿದೆ.

ಬ್ರಾಹ್ಮಣ ಸಮುದಾಯದ ಒಡೆತನದಲ್ಲಿ ಇರುವ ನಾಲ್ಕು ಪುಟಗಳಲ್ಲಿ ಪ್ರಕಟವಾಗುತ್ತಿರುವ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಸರ್ಕಾರದ ಆದೇಶದಲ್ಲಿ ತಿಳಿಸಿರುವ ಷರತ್ತಿಗೊಳಪಟ್ಟು ಜಾಹೀರಾತು ಬಿಡುಗಡೆ ಮಾಡಲು ಅರ್ಹ ಪತ್ರಿಕೆಗಳ ಮಾಹಿತಿ ನೀಡುವಂತೆ ಸುತ್ತೋಲೆಯು ವಾರ್ತಾ ಇಲಾಖೆಯು ಕೇಳಿದೆ.

ಸುತ್ತೋಲೆಯು ಸರ್ಕಾರದ ಆದೇಶದಂತೆ ಹೊರಡಿಸಲಾಗಿದ್ದು, ವಾರ್ತಾ ಇಲಾಖೆಯ ಆಯುಕ್ತರ ಪರವಾಗಿ ಉಪನಿರ್ದೇಶಕರಾದ ಕೆ.ಪಿ. ಪುಟ್ಟಸ್ವಾಮಯ್ಯ ಅವರ ಸಹಿಯಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ, “ಬಿಜೆಪಿ ಸರ್ಕಾರ ಪತ್ರಿಕೆಗಳ ಜಾತಿ ಮೂಲ ಹುಡುಕಿ ಜಾಹಿರಾತು ನೀಡಲು ಹೊರಟಿದೆ. ಪ್ರತಿ ತಿಂಗಳು 2 ಪುಟಗಳ ಸರ್ಕಾರದ ಜಾಹಿರಾತು ಬ್ರಾಹ್ಮಣರ ಮಾಲೀಕತ್ವದ ಪತ್ರಿಕೆಗಳಿಗೆ ಮಾತ್ರವಂತೆ! ಉಳಿದ ಜಾತಿಯವರದ್ದು ಪತ್ರಿಕೆಗಳಲ್ಲವೇ ಮುಖ್ಯಮಂತ್ರಿ ಬೊಮ್ಮಾಯಿ ಅವರೇ? ಮುಖ್ಯಮಂತ್ರಿ ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಾಗಪುರದ ನಿಷ್ಠಾವಂತ ನೌಕರರಾಗಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: EWS: ದಲಿತ-ಶೂದ್ರರ ಮೀಸಲಾತಿಯ ಕ್ರಾಂತಿಗೆ ಬ್ರಾಹ್ಮಣ್ಯದ ಪ್ರತಿಕ್ರಾಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...