Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...