Homeಮುಖಪುಟಬಿಜೆಪಿ ರಾಜ್ಯದ ಜನತೆಗೆ ಸ್ಪಂದಿಸಿದ್ದಕ್ಕೆ ಉಪಚುನಾವಣೆಯಲ್ಲಿ ಗೆದ್ದಿದೆ: ಎಚ್.ಡಿ ಕುಮಾರಸ್ವಾಮಿ

ಬಿಜೆಪಿ ರಾಜ್ಯದ ಜನತೆಗೆ ಸ್ಪಂದಿಸಿದ್ದಕ್ಕೆ ಉಪಚುನಾವಣೆಯಲ್ಲಿ ಗೆದ್ದಿದೆ: ಎಚ್.ಡಿ ಕುಮಾರಸ್ವಾಮಿ

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ.

- Advertisement -
- Advertisement -

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಚ್ಚರಿ ಮೂಡಿಸಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡು ಕಡೆ ಜೆಡಿಎಸ್‌ ಅಭ್ಯರ್ಥಿಗಳಿಗೆ ಹೀನಾಯ ಸೋಲುಂಟಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು “ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ” ಎಂದಿದ್ದಾರೆ.

ಈ ಫಲಿತಾಂಶದ ಹಿನ್ನಡೆಯಿಂದ ಧೃತಿಗೆಡಬೇಕಾದ ಅಗತ್ಯವಿಲ್ಲ. ರಾಜಕೀಯ ಪಕ್ಷಗಳಿಗೆ ಉಪಚುನಾವಣೆ ಫಲಿತಾಂಶ ಭವಿಷ್ಯದ ಮಂತ್ರದಂಡ ಅಲ್ಲ. ಉಪಚುನಾವಣೆಗಳು ಹೇಗೆ ನಡೆದವು ಎಂಬ ಪರಾಮರ್ಶೆಗೆ ಹೋಗುವುದಿಲ್ಲ. ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹಿಂದೊಮ್ಮೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆಯಲ್ಲಿ ಜನತೆ ಮನ್ನಣೆ ನೀಡಿರಲಿಲ್ಲ. ಕೇವಲ 2 ಸೀಟು ಪಕ್ಷಕ್ಕೆ ಬಂದಿದ್ದ ಕಾಲವೊಂದಿತ್ತು. ಆನಂತರ ಇದೇ ಜನತೆ ಮುಖ್ಯಮಂತ್ರಿ ಮಾಡಿದರು, ಜನಾಶೀರ್ವಾದದಿಂದ ಪ್ರಧಾನಿಯಾದರು. ಉಪಚುನಾವಣೆ ಫಲಿತಾಂಶದಿಂದ ಕುಗ್ಗಿ ಹೋಗದೆ, ಪಕ್ಷವನ್ನು ಸಂಘಟಿಸಿ ಬಲಪಡಿಸುವತ್ತ ಗಮನಹರಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ತಡರಾತ್ರಿಯವರೆಗೆ ಎಣಿಕೆ ಮುಂದುವರಿಯುತ್ತದೆ. ಸರ್ಕಾರ ನಮ್ಮದೆ: RJD ವಿಶ್ವಾಸ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...