Homeರಾಷ್ಟ್ರೀಯಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

ಮುಸ್ಲಿಂ ಎಂದು ಶಂಕಿಸಿ ಹಲ್ಲೆಗೊಳಗಾದ ವ್ಯಕ್ತಿ ಶವವಾಗಿ ಪತ್ತೆ; ಬಿಜೆಪಿಯ ಮಾಜಿ ಕಾರ್ಪೋರೇಟ್‌ ಪತಿ ಆರೋಪಿ

- Advertisement -
- Advertisement -

ಬಿಜೆಪಿ ಮಾಜಿ ಕಾರ್ಪೋರೇಟರೊಬ್ಬರ ಪತಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಮುಸ್ಲಿಂ ಎಂದು ಶಂಕಿಸಿ ನಿರಂತವಾಗಿ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದೀಗ ವ್ಯಕ್ತಿಯು ಶವವಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ.

ವ್ಯಕ್ತಿಯನ್ನು ಭವರ್‌ ಲಾಲ್‌ ಜೈನ್ ಎಂದು ಗುರುತಿಸಲಾಗಿದ್ದು, ಅವರು ಜೈನ ಸಮುದಾಯಕ್ಕೆ ಸೇರಿದವರಾಗಿದ್ದಾರೆ. 65 ವರ್ಷದ ಭವರ್‌ ಲಾಲ್‌ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಐದು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರಿಗೆ ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ಭವರ್‌ ಲಾಲ್‌ಗೆ ಪದೇ ಪದೇ ಕಪಾಳಮೋಕ್ಷ ಮಾಡುವುದನ್ನು ಕಾಣಬಹುದು. ದುಷ್ಕರ್ಮಿಯು ಭವರ್‌ ಲಾಲ್‌ ಅವರ ಗುರುತನ್ನು ಕೇಳುವುದನ್ನು ಕಾಣಬಹುದಾಗಿದೆ. ಜೊತೆಗೆ ಕಪಾಳಮೋಕ್ಷ ಮಾಡುತ್ತಲೆ, ‘ನಿನ್ನ ಹೆಸರು ಮೊಹಮ್ಮದ್’ ಎಂದು ಕೇಳುತ್ತಾ ಆಧಾರ್ ಕಾರ್ಡ್‌ ತೋರಿಸಲು ಒತ್ತಾಯಿಸುತ್ತಿರುವುದು ಕಂಡುಬಂದಿದೆ.

ಭವರ್‌‌ ಲಾಲ್‌ ಅವರಿಗೆ ಕಪಾಳಮೋಕ್ಷ ಮಾಡುತ್ತಿದ್ದ ವ್ಯಕ್ತಿಯನ್ನು ದಿನೇಶ್ ಕುಶವಾಹ ಎಂದು ಗುರುತಿಸಲಾಗಿದೆ ಎಂದು ಜಿಲ್ಲೆಯ ಮಾನಸ ಪೊಲೀಸ್ ಠಾಣೆಯ ಉಸ್ತುವಾರಿ ಕೆ.ಎಲ್.ಡಂಗಿ ತಿಳಿಸಿದ್ದಾರೆ. ಆರೋಪಿ ಕುಶ್ವಾಹಾ ಬಿಜೆಪಿಯ ಮಾಜಿ ಕಾರ್ಪೊರೇಟರ್ ಪತಿ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಹಸ್ಯ ಕಾರ್ಯಸೂಚಿಗಳನ್ನು ಒಳಗೊಂಡ ನೂತನ ಪಠ್ಯಪುಸ್ತಕಗಳು ಬೇಕೆ?

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 304 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನವಭಾರತ್ ಟೈಮ್ಸ್ ಪ್ರಕಾರ ಭವರ್‌ ಲಾ‌ಲ್‌ ಅವರು ರತ್ಲಂ ಜಿಲ್ಲೆಯ ಸರ್ಸಿ ಗ್ರಾಮದ ನಿವಾಸಿಯಾಗಿದ್ದರು. ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬಳಿಕ ಅವರು ನಾಪತ್ತೆಯಾಗಿದ್ದರು.

ಇದರ ನಂತರ ಮಾನಸ ಪೊಲೀಸ್ ಠಾಣೆಯು ಅವರು ಕಾಣೆಯಾಗಿರುವ ಬಗ್ಗೆ ನೋಟಿಸ್‌ ಅನ್ನು ಬಿಡುಗಡೆ ಮಾಡಿತ್ತು. ಭವರ್‌ ಲಾಲ್ ಅವರ ಮೃತದೇಹವು ನೀಮುಚ್‌ನ ರಾಂಪುರ ರಸ್ತೆಯಲ್ಲಿರುವ ಕಾರ್ ಶೋ ರೂಂ ಎದುರು ಪತ್ತೆಯಾಗಿದೆ.

ಭವರ್‌‌ ಲಾಲ್‌ ಅವರ ಮೃತದೇಹ ಪತ್ತೆಯಾದ ನಂತರ, ಅವರ ಕುಟುಂಬ ಸದಸ್ಯರು, ಅವರ ಗ್ರಾಮದ ನಿವಾಸಿಗಳು ಮತ್ತು ಜೈನ ಸಮುದಾಯದ ಸದಸ್ಯರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಆಯ್ಕೆಯ ಮಾನದಂಡಗಳೇನು?: ಬಹಿರಂಗ ಪತ್ರ ಬರೆದ ಶಿಕ್ಷಣ ತಜ್ಞರು

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಕಮಲ್ ನಾಥ್, “ಮಧ್ಯಪ್ರದೇಶದ ಅಪರಾಧಿಗಳು ಅಷ್ಟೊಂದು ಧೈರ್ಯ ಯಾಕೆ ಹೊಂದಿದ್ದಾರೆ” ಎಂದು ಪ್ರಶ್ನಿಸಿದ್ದಾರೆ. “ರಾಜ್ಯ ಸರ್ಕಾರವು ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಮಾತ್ರ ಆಸಕ್ತಿ ಹೊಂದಿದೆ” ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಲ್ಲಿದೆ?” ಎಂದು ಕೇಳಿರುವ ಅವರು, “ಎಲ್ಲಿಯವರೆಗೆ ಜನರು ಈ ರೀತಿ ಕೊಲ್ಲಲ್ಪಡುತ್ತಾರೆ?” ಎಂದು ಪ್ರಶ್ನಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಕಾರ್ಯದರ್ಶಿ ರಜನೀಶ್ ಅಗರವಾಲ್, “ಘಟನೆಯು ದುರದೃಷ್ಟಕರ” ಎಂದು  ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

“ಆರೋಪಿಯು ಆರೋಪಿಯಾಗಿದ್ದು, ಅದಕ್ಕೂ ಪಕ್ಷ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಅವರು ಹೇಳಿದ್ದು, ಇಂತಹ ಕೃತ್ಯದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿಯನ್ನು ರಾಜ್ಯ ಸರ್ಕಾರ ಬಿಡುವುದಿಲ್ಲ, ನಮ್ಮ ಪಕ್ಷವು ಕಾನೂನಿನ ಆಳ್ವಿಕೆಯಲ್ಲಿ ನಂಬಿಕೆ ಹೊಂದಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಅಪರಾಧಿಗಳನ್ನು ರಕ್ಷಿಸುವಲ್ಲಿ ನಿರತವಾಗಿದ್ದವು ಎಂದು ಅಗರವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...