Homeಮುಖಪುಟಕೇಂದ್ರದ 'ಐಟಿ ನಿಯಮಗಳ ತಿದ್ದುಪಡಿ'ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಕೇಂದ್ರದ ‘ಐಟಿ ನಿಯಮಗಳ ತಿದ್ದುಪಡಿ’ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಮತ್ತು ಸುಳ್ಳು ವಿಷಯವನ್ನು ಗುರುತಿಸುವ ಮತ್ತು ನಿಯಂತ್ರಿಸುವ ಉದ್ದೇಶದಿಂದ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬಾಂಬೆ ಹೈಕೋರ್ಟ್ ಗುರುವಾರ ಅಧಿಕೃತವಾಗಿ ರದ್ದುಗೊಳಿಸಿದ್ದು, ಅವುಗಳನ್ನು “ಅಸಂವಿಧಾನಿಕ” ಎಂದು ಬಣ್ಣಿಸಿದೆ.

ನ್ಯಾಯಮೂರ್ತಿ ಎಎಸ್ ಚಂದೂರ್ಕರ್ ಅವರ ಏಕ ಪೀಠವು ಸೆಪ್ಟೆಂಬರ್ 20 ರಂದು, ತಿದ್ದುಪಡಿ ಮಾಡಿದ ನಿಯಮಗಳು ಅಸ್ಪಷ್ಟ ಮತ್ತು ವಿಶಾಲವಾಗಿದ್ದು, ವ್ಯಕ್ತಿಯ ಮೇಲೆ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮದ ಮಧ್ಯವರ್ತಿಗಳ ಮೇಲೂ ಪ್ರತಿಕೂಲ ಪರಿಣಾಮವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಗಮನಿಸಿತು.

ಈ ವರ್ಷದ ಆರಂಭದಲ್ಲಿ ವಿಭಾಗೀಯ ಪೀಠವು ಈ ವಿಷಯದ ಕುರಿತು ತೀರ್ಪು ನೀಡಿದ ಬಳಿಕ ನ್ಯಾಯಮೂರ್ತಿ ಚಂದೂರ್ಕರ್ ಅವರು ಟೈ ಬ್ರೇಕರ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ಮೂರನೇ ನ್ಯಾಯಾಧೀಶರ ತೀರ್ಪಿನ ಬಳಿಕ, ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಗುರುವಾರ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ನ್ಯೂಸ್ ಬ್ರಾಡ್‌ಕಾಸ್ಟ್ ಮತ್ತು ಡಿಜಿಟಲ್ ಅಸೋಸಿಯೇಷನ್, ಅಸೋಸಿಯೇಷನ್ ​​​​ಆಫ್ ಇಂಡಿಯನ್ ಸಲ್ಲಿಸಿದ ಅರ್ಜಿಗಳ ಗುಂಪಿಗೆ ಔಪಚಾರಿಕವಾಗಿ ತೀರ್ಪು ಪ್ರಕಟಿಸಿತು.

“ಬಹುಮತದ ಅಭಿಪ್ರಾಯದ ದೃಷ್ಟಿಯಿಂದ, ನಿಯಮ 3 (1) (ವಿ) ಅನ್ನು ಅಸಂವಿಧಾನಿಕ ಎಂದು ಘೋಷಿಸಿ, ಅದನ್ನು ರದ್ದುಗೊಳಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವನ್ನು ಆರಂಭದಲ್ಲಿ ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ (ಈಗ ನಿವೃತ್ತ) ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಪರಿಶೀಲಿಸಿತ್ತು, ಅವರು ಜನವರಿಯಲ್ಲಿ ವಿಭಜಿತ ತೀರ್ಪು ನೀಡಿದ್ದರು.

ನಿಯಮಗಳು ಸಾಮಾಜಿಕ ಜಾಳತಾಣದಲ್ಲಿ ಸೆನ್ಸಾರ್‌ಶಿಪ್‌ ಅನ್ನು ರೂಪಿಸುತ್ತವೆ ಎಂದು ನ್ಯಾಯಮೂರ್ತಿ ಪಟೇಲ್ ವಾದಿಸಿದರು. ಆದರೆ, ನ್ಯಾಯಮೂರ್ತಿ ಗೋಖಲೆ ಅವರು ವಾಕ್ ಸ್ವಾತಂತ್ರ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರದ ನಿಯಮಗಳನ್ನು ಸಮರ್ಥಿಸಿಕೊಂಡರು.

ನ್ಯಾಯಮೂರ್ತಿ ಚಂದೂರ್ಕರ್ ಅವರು ತಮ್ಮ ಅಭಿಪ್ರಾಯವನ್ನು ನ್ಯಾಯಮೂರ್ತಿ ಪಟೇಲ್ ಅವರ ಅಭಿಪ್ರಾಯದೊಂದಿಗೆ ಜೋಡಿಸಿದರು, ಮುಕ್ತ ಅಭಿವ್ಯಕ್ತಿಗೆ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ವಿವಾದದ ಕೇಂದ್ರವು ಫ್ಯಾಕ್ಟ್ ಚೆಕಿಂಗ್ ಯುನಿಟ್ (ಎಫ್‌ಸಿಯು) ಸ್ಥಾಪನೆಯಾಗಿದೆ. ಇದು ಸರ್ಕಾರಕ್ಕೆ ಸಂಬಂಧಿಸಿದಂತೆ ತಪ್ಪುದಾರಿಗೆಳೆಯುವ ಅಥವಾ ತಪ್ಪು ಎಂದು ಪರಿಗಣಿಸಲಾದ ಆನ್‌ಲೈನ್ ವಿಷಯವನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ನಿಯಮಗಳು ಮೂಲಭೂತ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತವೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿತು.

ಐಟಿ ನಿಯಮಗಳಿಗೆ ವಿವಾದಾತ್ಮಕ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರವು ಏಪ್ರಿಲ್ 6, 2023 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ರ ಭಾಗವಾಗಿ ಪರಿಚಯಿಸಿತು.

ಸರ್ಕಾರಿ ಚಟುವಟಿಕೆಗಳಿಗೆ ಸಂಬಂಧಿಸಿದ ನಕಲಿ ಅಥವಾ ತಪ್ಪುದಾರಿಗೆಳೆಯುವ ಯಾವುದೇ ವಿಷಯವನ್ನು ಮೇಲ್ವಿಚಾರಣೆ ಮಾಡಲು ನಿಯಮಗಳು ‘ಎಫ್‌ಯುಸಿ’ ಅನ್ನು ಕಡ್ಡಾಯಗೊಳಿಸಿದೆ.

ಇದನ್ನೂ ಓದಿ; ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...