Homeಕರ್ನಾಟಕಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ತೀವ್ರಗೊಳಿಸುವ ಬಜೆಟ್: SFI

- Advertisement -
- Advertisement -

2018 ರ ಹಣಕಾಸು ವರ್ಶದಲ್ಲಿ ಶಿಕ್ಷಣ, ಆರೋಗ್ಯ ಒಳಗೊಂಡಂತೆ 42 ಸೆಸ್‌ಗಳನ್ನು ಹಾಕಿದ್ದ ಮೋದಿ ಸರಕಾರ ಆ ಮೂಲಕ 2.5 ಲಕ್ಷ ಕೋಟಿಯನ್ನು ಸಂಗ್ರಹ ಮಾಡಿತ್ತು. ಆದರೆ ಆ ಮೊತ್ತವನ್ನು ಮರಳಿ ಸಂಬಂಧಪಟ್ಟ ಇಲಾಖೆಗಳ ಅಬಿವೃದ್ದಿಗೆ ವೆಚ್ಚ ಮಾಡದೆ ಕೇಂದ್ರ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (SFI) ಕರ್ನಾಟಕ ರಾಜ್ಯ ಸಮಿತಿ ಪತ್ರಿಕಾ ಹೇಳಿಕೆ ನೀಡಿದೆ.

“ಯುಜಿಸಿ ರದ್ದುಗೊಳಿಸಿ ‘ಉನ್ನತ ಶಿಕ್ಷಣ ಆಯೋಗ’ (HEC) ರಚಿಸಲು ಈ ವರ್ಷ ಚಾಲನೆ. ಶಿಕ್ಷಣದ ಕೇಂದ್ರೀಕರಣಕ್ಕೂ ಚಾಲನೆ. ಇನ್ನು ವಿಶ್ವವಿದ್ಯಾಲಯಗಳ ಧನ ಸಹಾಯ ಮತ್ತು ಅನುದಾನವು ನೇರವಾಗಿ ಕೇಂದ್ರ ಶಿಕ್ಷಣ ಇಲಾಖೆಯ ಸುಪರ್ದಿಗೆ ಹೋಗುತ್ತದೆ. ಅಲ್ಲಿಗೆ ಶಿಕ್ಷಣದ ಕತೆ ಮುಗೀತು” ಎಂದು SFI ಹೇಳಿದೆ.

ಇದನ್ನೂ ಓದಿ: ರಾಮನಗರ: ಪರೀಕ್ಷೆಗಳನ್ನು ಮುಂದೂಡುವಂತೆ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ

“ಮುಂದಿನ 6 ವರ್ಷಗಳಲ್ಲಿ ದಲಿತ ಸಮುದಾಯದ ವಿದ್ಯಾರ್ಥಿಗಳಿಗಾಗಿ 35,219 ಕೋಟಿ ಹಣ ವೆಚ್ಚ ಮಾಡಲಾಗುವುದು ಎಂದು ಬಜೆಟ್ ಘೋಷಣೆ ಮಾಡಿದ್ದಾರೆ. ಇದು ವಂಚನೆ ಹಾಗೂ ಮೋಸವಾಗಿದೆ. ಇದು 1944 ರಿಂದ ಜಾರಿಯಲ್ಲಿರುವ ಪ.ಜಾತಿ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆ. ಇದರಲ್ಲಿ ಹೊಸದೇನೂ ಇಲ್ಲ ದೇಶದಾದ್ಯಂತ ಸುಮಾರು 57 ಲಕ್ಷ ಪ.ಜಾತಿ ವಿದ್ಯಾರ್ಥಿಗಳಿದ್ದಾರೆ ಎಂದು ಅಂದಾಜಿಸಿದರೆ ಒಬ್ಬ ವಿದ್ಯಾರ್ಥಿಗೆ ಪ್ರತಿ ವರ್ಷ 10,000 ರೂ, ಪ್ರತಿ ತಿಂಗಳು 858 ರೂ. ದೊರಕುತ್ತದೆ. ಈ ಹಣದಿಂದ ವಿದ್ಯಾರ್ಥಿಗಳಿಗೆ ಯಾವ ಆರ್ಥಿಕ ಅನುಕೂಲವೂ ದೊರಕುವುದಿಲ್ಲ” ಎಂದು ಹೇಳಿದೆ.

ಈ ಹಣವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಕೊಡಬೇಕು. ರಾಜ್ಯ ಎಂದಿಗೂ ಕೊಡುವುದಿಲ್ಲ, ಹಾಗಾಗಿ ಕೇಂದ್ರವೂ ಕೊಡುವುದಿಲ್ಲ. ಇದು ಬಡ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚನೆ ಮಾಡುವ ಶಿಕ್ಷಣ ವಿರೋಧಿ ಬಜೆಟ್ ಆಗಿದೆ” ಎಂದು SFI ಆಕ್ರೋಶ ವ್ಯಕ್ತಪಡಿಸಿದೆ.

“ದೇಶದ ಸಮಗ್ರ ಶಿಕ್ಷಣ ಅಭಿವೃದ್ಧಿಗಾಗಿ ಕೇಂದ್ರ ಬಜೆಟ್‌ನಲ್ಲಿ ಕನಿಷ್ಠ 10% ಮೀಸಲಿಡಬೇಕು ಎಂಬ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡದಿರುವುದು ಅನಿರೀಕ್ಷಿತವೇನಲ್ಲ. ದುಡ್ಡಿದ್ದವರಿಗೆ ಶಿಕ್ಷಣವನ್ನು ಮಾರಾಟ ಮಾಡುವ ಶಿಕ್ಷಣದ ಖಾಸಗೀಕರಣ ಕೇಂದ್ರೀಕರಣ ತೀವ್ರಗೊಳಿಸುವ ಉದ್ದೇಶಗಳು ಎದ್ದು ಕಾಣುತ್ತಿವೆ” ಎಂದು SFI ಅಸಮಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಬಂಗಾಳದ 9.5 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 10 ಸಾವಿರ ಜಮೆ- ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...