Homeಮುಖಪುಟಕಚೇರಿ ಆವರಣದಲ್ಲಿ ಪೂಜಾ ಸ್ಥಳದ ನಿರ್ಮಾಣ ಸಲ್ಲದು: ರಾಜಸ್ಥಾನ ಪೊಲೀಸರಿಗೆ ಸೂಚನೆ

ಕಚೇರಿ ಆವರಣದಲ್ಲಿ ಪೂಜಾ ಸ್ಥಳದ ನಿರ್ಮಾಣ ಸಲ್ಲದು: ರಾಜಸ್ಥಾನ ಪೊಲೀಸರಿಗೆ ಸೂಚನೆ

- Advertisement -
- Advertisement -

ಪೊಲೀಸ್‌ ಕಚೇರಿಗಳ ಆವರಣದಲ್ಲಿ ಯಾವುದೇ ಧರ್ಮದ ಪೂಜಾ ಸ್ಥಳಗಳನ್ನೂ ನಿರ್ಮಾಣ ಮಾಡಬಾರದು ಎಂಬ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜಸ್ಥಾನ ಪೊಲೀಸರಿಗೆ ಸೂಚಿಸಲಾಗಿದೆ. ರಾಜಸ್ಥಾನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಪೊಲೀಸ್ ವಸತಿ) ಎ ಪೊನ್ನುಚಾಮಿ ಅವರು ಸೋಮವಾರ ಈ ಆದೇಶ ಹೊರಡಿಸಿದ್ದಾರೆ.

ರಾಜಸ್ಥಾನ ಧಾರ್ಮಿಕ ಕಟ್ಟಡಗಳು ಮತ್ತು ಸ್ಥಳಗಳ ಕಾಯ್ದೆ 1954 ರ ಅಡಿಯಲ್ಲಿ ಸಾರ್ವಜನಿಕ ಕಟ್ಟಡದಲ್ಲಿ ಯಾವುದೇ ಧಾರ್ಮಿಕ ಸ್ಥಳ ಇರುವಂತಿಲ್ಲ ಎಂದು ಅವರು ಹೇಳಿದ್ದಾರೆ. ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನೈತಿಕತೆ ಮತ್ತು ಪೊಲೀಸ್‌ಗಿರಿ ಕೂಡಿಕೊಂಡರೆ ಅದು ಅನೈತಿಕ ಮನಸ್ಥಿತಿಗಳ ವಿಕೃತಿ

ಪೊನ್ನುಚಾಮಿ ಅವರು ಆದೇಶದಲ್ಲಿ, ಕಳೆದ ವರ್ಷಗಳಲ್ಲಿ, ನಂಬಿಕೆಯ ಹೆಸರಿನಲ್ಲಿ ಪೊಲೀಸ್ ಇಲಾಖೆಯ ವಿವಿಧ ರೀತಿಯ ಕಚೇರಿ, ಸಂಕೀರ್ಣಗಳು/ಪೊಲೀಸ್ ಠಾಣೆಗಳಲ್ಲಿ ಪೂಜಾ ಸ್ಥಳಗಳನ್ನು ನಿರ್ಮಿಸುವ ಪ್ರವೃತ್ತಿ ‘ಹೆಚ್ಚಾಗಿರುವುದು’ ಕಂಡುಬಂದಿದ್ದು, ಇದು ಕಾನೂನಿಗೆ ವಿರುದ್ದವಾಗಿದೆ. ಅಲ್ಲದೆ, ಪೊಲೀಸ್ ಠಾಣೆಗಳ ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಸಿದ್ಧಪಡಿಸಿ ಅನುಮೋದನೆ ನೀಡಿರುವ ನಕ್ಷೆಯಲ್ಲಿ ಪೂಜಾಸ್ಥಳ ನಿರ್ಮಾಣಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ ಪೊಲೀಸ್ ಮಹಾನಿರ್ದೇಶಕರ ಈ ಆದೇಶವನ್ನು ಖಂಡಿಸಿರುವ ಬಿಜೆಪಿ, ರಾಜ್ಯದ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಎಂದು ಹೇಳಿದೆ. ಜೊತೆಗೆ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿದೆ.

ಪೊಲೀಸರು ಹದಗೆಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸುವ ಬದಲು ಇಂತಹ ತರ್ಕಬದ್ಧವಲ್ಲದ ಆದೇಶ ಹೊರಡಿಸುವಲ್ಲಿ ತಮ್ಮ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಇದನ್ನೂ ಓದಿ: ಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...