Homeಚಳವಳಿವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

ವಿದ್ಯಾರ್ಥಿ ಹೋರಾಟಗಾರರ ಪ್ರಕರಣ: ಜಾಮೀನು ತಡೆಗೆ ನಿರಾಕರಿಸಿದ ಸುಪ್ರೀಂಕೋರ್ಟ್‌

- Advertisement -
- Advertisement -

ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂಕೋರ್ಟ್‌ ಶುಕ್ರವಾರ ನೋಟಿಸ್ ನೀಡಿದೆ. ಈ ಹಂತದಲ್ಲಿ ಹೈಕೋರ್ಟ್‌ನ ಆದೇಶಕ್ಕೆ ತಾನು ಹಸ್ತಕ್ಷೇಪ ಮಾಡುವುತ್ತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಆದರೆ ಈ ತೀರ್ಪನ್ನು ಒಂದು ಪೂರ್ವನಿದರ್ಶನದಂತೆ ಪರಿಗಣಿಸಬಾರದು ಮತ್ತು ಯಾವುದೇ ನ್ಯಾಯಾಲಯವು ಈ ತೀರ್ಪನ್ನು ಅವಲಂಬಿಸಬಾರದು ಎಂದು ಹೇಳಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠವು ಯುಎಪಿಎಯನ್ನು ಹೈಕೋರ್ಟ್ ವ್ಯಾಖ್ಯಾನಿಸಿದ ರೀತಿಯ ಬಗ್ಗೆ ಬಹುಶಃ ಸುಪ್ರೀಂಕೋರ್ಟ್‌ ಪರಿಶೀಲಿಸುವ ಅಗತ್ಯವಿರುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜೈಲನ್ನು ತೋರಿಸಿ ನಮ್ಮನ್ನು ಬೆದರಿಸಲಾಗದು’ – ಬಿಡುಗಡೆಗೊಂಡ ವಿದ್ಯಾರ್ಥಿ ಹೋರಾಟಗಾರರ ಘೋಷಣೆಗಳಿವು!

ಜಾಮೀನು ಅರ್ಜಿಗೆ ಪ್ರತಿಕ್ರಿಯೆಯಾಗಿ ಹೈಕೋರ್ಟ್‌ ನೀಡಿರುವ 100 ಪುಟಗಳ ತೀರ್ಪಿನ ಕುರಿತು ಸುಪ್ರೀಂ ಆಶ್ಚರ್ಯ ವ್ಯಕ್ತಪಡಿಸಿದೆ.

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಹೈಕೋರ್ಟ್ ಜಾಮೀನು ನೀಡಿದ ಒಂದು ದಿನದ ನಂತರ, ದೆಹಲಿ ಪೊಲೀಸರು ಜಾಮೀನಿಗೆ ತಡೆ ನೀಡಬೇಕು ಎಂದು ಅರ್ಜಿ ಹಾಕಿದ್ದರು.

ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA)ಯಡಿ ಆರೋಪ ಹೊರಿಸಲ್ಪಟ್ಟ ಈ ಮೂವರು ಒಂದು ವರ್ಷದಿಂದ ಜೈಲಿನಲ್ಲಿದ್ದರು.

ಸುಪ್ರೀಂಕೋರ್ಟ್‌ ಅವರಿಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಜೈಲಿನಿಂದ ಬಿಡುಗಡೆಗೊಂಡ ವಿದ್ಯಾರ್ಥಿಗಳು, ‘‘ಜೈಲನ್ನು ತೋರಿಸಿ ನಮ್ಮನ್ನು ಹೆದರಿಸಬೇಡಿ. ಅನ್ಯಾಯದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ. ಇದು ಸರ್ಕಾರದ ಹತಾಶೆಯನ್ನು ತೋರಿಸುತ್ತದೆ. ನಾವು ಅವರಿಗೆ ಹೆದರದ ಮಹಿಳೆಯರು. ನಮ್ಮನ್ನು ಜೈಲಿನಲ್ಲಿರಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ’’ ಎಂದು ಹೇಳಿದ್ದಾರೆ.

ಕಳೆದ ವರ್ಷ ನಡೆದ ದೆಹಲಿ ಗಲಭೆಯಲ್ಲಿ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್‌ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನತಾಶಾ ನರ್ವಾಲ್ ಮತ್ತು ದೇವಂಗನಾ ಕಾಳಿತಾ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ಪಿಂಜ್ರಾ ತೋಡ್ ಎಂಬ ಸಂಘಟನೆಯ ಸದಸ್ಯರಾದ ಇವರು ಮೇ 2020 ರಿಂದಲೂ ಬಂಧನದಲ್ಲಿದ್ದಾರೆ. ಆಸಿಫ್ ಇಕ್ಬಾಲ್ ತನ್ಹಾ ಅವರು ಬಿ.ಎ. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿದ್ದಾಗಲೂ ಅವಳು ಹೋರಾಟ ಮಾಡುತ್ತಲೇ ಇದ್ದಳು, ಆಕೆಯ ಬಗ್ಗೆ ಹೆಮ್ಮೆಯಿದೆ: ದೇವಂಗನಾ ಬಗ್ಗೆ ತಾಯಿಯ ಮಾತುಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...