Homeಚಳವಳಿ’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

’ನಮ್ಮ ಮೇಲಿನ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ’- ರೈತ ಮುಖಂಡರು

ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಇದನ್ನು ನಾವು ಬಲಪಡಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಜನವರಿ 26 ರ ರೈತರ ಟ್ರಾಕ್ಟರ್‌ ರ್‍ಯಾಲಿಯಲ್ಲಿನ ಸಂಧರ್ಭದ ಅಹಿತಕರ ಘಟನೆಯ ನಂತರ ನಡೆದ ಬೆಳವಣಿಗೆಯಲ್ಲಿ ಕೇಂದ್ರ ಮತ್ತು ರೈತ ಮುಖಂಡರ ನಡುವಿನ ಮಾತುಕತೆಗಳು ಸಂಪೂರ್ಣವಾಗಿ ನಿಂತು ಹೋಗಿದೆ. ಜನವರಿ 22 ರಿಂದ ನಡುವೆ ಯಾವುದೇ ಸಭೆಗಳು ನಡೆದಿಲ್ಲ. ಇದುವರೆಗೂ ಹನ್ನೊಂದನೇ ಸುತ್ತಿನ ಮಾತುಕತೆಗಳನ್ನು ನಡೆದಿದ್ದು, ಎಲ್ಲವೂ ಮುರಿದು ಬಿದ್ದಿದೆ.

ಈ ಸಮಯದಲ್ಲಿ ಕೇಂದ್ರವು ಕೃಷಿ ಕಾನೂನುಗಳನ್ನು ಒಂದೂವರೆ ವರ್ಷಗಳು ಅಥವಾ ಸರ್ಕಾರಿ ಅಧಿಕಾರಿಗಳು ಮತ್ತು ರೈತ ಪ್ರತಿನಿಧಿಗಳ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ತಡೆಹಿಡಿಯುವುದಾಗಿ ಹೇಳಿತ್ತು. ಆದರೆ ಕೇಂದ್ರದ ಈ ಪ್ರಸ್ತಾಪವನ್ನು ತಿರಸ್ಕರಿಸಿರುವ ರೈತರು ಮೂರು ಕಾನೂನುಗಳನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?

ಸರ್ಕಾರ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿದ ನಂತರ ಮುಂದಿನ ಸುತ್ತಿನ ಮಾತುಕತೆಗೆ ಸಿದ್ಧವಾಗುವುದಾಗಿ ಕೃಷಿ ಮುಖಂಡರು ಹೇಳಿದ್ದಾರೆ. “ನಮ್ಮ ಕೊನೆಯ ಸುತ್ತಿನ ಮಾತುಕತೆಯಲ್ಲಿ, ಸರ್ಕಾರಿ ಪ್ರತಿನಿಧಿಗಳು ಎಂಎಸ್ಪಿ ಪ್ರಶ್ನೆಯನ್ನು ಚರ್ಚಿಸಲು ಸಿದ್ಧರಿರಲಿಲ್ಲ. ನಮ್ಮ ಬೇಡಿಕೆಯು ಕೃಷಿ ಕಾನೂನನ್ನು ರದ್ದುಪಡಿಸ ಬೇಕು ಎಂಬುವುದಾಗಿದೆಯೆ ಹೊರತು ಅಮಾನತುಗೊಳಿಸುವುದಲ್ಲ. ಅವರು ಬೇರೆ ಪ್ರಸ್ತಾಪವನ್ನು ರೂಪಿಸಿ ನಮಗೆ ಅಧಿಕೃತ ಆಹ್ವಾನವನ್ನು ಕಳುಹಿಸಿದರೆ, ಮರುದಿನವೆ ನಾವು ಚರ್ಚಿಸಲು ಹೋಗುತ್ತೇವೆ” ಎಂದು ಬಿಕೆಯು ಏಕ್ತಾ (ಡಕೌಂಡಾ) ಪ್ರಧಾನ ಕಾರ್ಯದರ್ಶಿ ಜಗ್ಮೋಹನ್ ಸಿಂಗ್ ಹೇಳಿದ್ದಾರೆ.

ಕೃಷಿ ಮುಖಂಡರು ಮತ್ತು ಪ್ರತಿಭಟನಾಕಾರರ ಮೇಲೆ ದಾಖಲಾಗಿರುವ ಪ್ರಕರಣದಿಂದಾಗಿ ಮಾತುಕತೆ ನಡೆಯುತ್ತಿಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿರುವ, ಲೋಕ ಭಲೈ ಇನ್ಸಾಫ್ ವೆಲ್ಫೇರ್‌ ಸೊಸಟಿಯ ಅಧ್ಯಕ್ಷ ಬಾಲ್ದೇವ್ ಸಿಂಗ್ ಸಿರ್ಸಾ, “ನಮಗೆ ಎಫ್‌ಐಆರ್‌ ಮತ್ತು ಕಾನೂನು ನೋಟಿಸ್‌ಗಳ ಬಗ್ಗೆ ಚಿಂತೆಯಿಲ್ಲ, ಯಾಕೆಂದರೆ ಅದು ಯಾವುದೆ ಆಂದೋಲನದ ಭಾಗವಾಗಿದ್ದು ಅದಕ್ಕೆ ನಾವು ಸಿದ್ದರಾಗಿಯೆ ಇದ್ದೇವೆ. ಈ ಕೇಸುಗಳು ನಾವು ಹೋರಾಟ ನಡೆಸದಂತೆ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ನಾವು ಮಾತುಕತೆಗಾಗಿ ಹೋದಾಗ ನಮ್ಮ ಹೋರಾಟದ ಎಲ್ಲಾ ಬೇಡಿಕೆಗಳು ಈಡೇರಿದ ನಂತರ, ನಮ್ಮ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತನಾಡುತ್ತೇವೆ. ಹೋರಾಟದಲ್ಲಿ ಅವುಗಳ ಬಗ್ಗೆ ನಾವು ಚಿಂತಿತರಾಗಿಲ್ಲ” ಎಂದು ರೈತ ಮುಖಂಡ ಜಗಮೋಹನ್ ಹೇಳುತ್ತಾರೆ.

ಇದನ್ನೂ ಓದಿ: ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

“ಸಾರ್ವಜನಿಕರ ಭಾಗವಹಿಸುವಿಕೆ ಉತ್ತೇಜಿಸಲು ಭಾನುವಾರದಂದು ಕ್ಯಾಂಡಲ್ ಮಾರ್ಚ್‌‌ನಂತಹ ಹಲವಾರು ಕಾರ್ಯಕ್ರಮಗಳನ್ನು ನಾವು ಸಂಘಟಿಸುತ್ತಿದ್ದೇವೆ. ಮಂಗಳವಾರ ರೈತ ಚಳವಳಿಗೆ ಸರ್ ಚೋಟೂ ರಾಮ್ ಅವರ ಕೊಡುಗೆಗಳನ್ನು ಸ್ಮರಿಸಲಿದ್ದೇವೆ. ಫೆಬ್ರವರಿ 18 ರಂದು ರೈಲ್ ರೋಕೊ ಚಳುವಳಿ ನಡೆಸುತ್ತಿದ್ದೇವೆ. ಆದರೆ ಅದಕ್ಕಿಂತ ಹೆಚ್ಚಾಗಿ, ನಿಯಮಿತವಾಗಿ ನಡೆಯುತ್ತಿರುವ ದೊಡ್ಡ ಮಹಾಪಂಚಾಯತ್‌ಗಳನ್ನು ನಡೆಸಿ ನಮ್ಮ ಹೋರಾಟದವನ್ನು ಇನ್ನಷ್ಟು ಹುರಿಗೊಳಿಸುತ್ತೇವೆ” ಎಂದು ಮಹಿಲಾ ಕಿಸಾನ್ ಅಧಿಕಾರ ಮಂಚ್‌ನ ನಾಯಕಿ ಕವಿತಾ ಕುರುಗಂತಿ ಹೇಳಿದ್ದಾರೆ.

“ನಮ್ಮ ಚಳವಳಿಯ ಮುಖ್ಯ ವಿಷಯ ಆಂದೋಲನವಾಗಿದೆ ಮತ್ತು ಅದನ್ನು ನಾವು ಬಲಪಡಿಸುತ್ತಿದ್ದೇವೆ. ಅಲ್ಲದೆ ಈ ಆಂದೋಲನ ಎಲ್ಲಾ ರಾಜ್ಯಗಳಲ್ಲಿ ಬೆಳೆಯುತ್ತಿದೆ. ಮಾತುಕತೆಗಾಗಿ ಸರ್ಕಾರವನ್ನು ಒತ್ತಾಯಿಸುವ ಮುಖ್ಯಶಕ್ತಿ ಇದುವೆ ಆಗಿದೆ” ಎಂದು ರೈತ ಮುಖಂಡ ಭಂಗು ಹೇಳಿದ್ದಾರೆ.

ಇದನ್ನೂ ಓದಿ: ‘ವಕೀಲರ ನಡಿಗೆ ರೈತರ ಕಡೆಗೆ’ – ರೈತ ಹೋರಾಟಕ್ಕೆ ಬೆಂಬಲ ನೀಡಿದ ಬೆಂಗಳೂರಿನ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...