Homeಕರ್ನಾಟಕಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ - ಜೆಡಿಎಸ್‌‌ ಆರೋಪ

ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

- Advertisement -
- Advertisement -

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜಾತ್ಯಾತೀತ ಜನತಾದಳ ಪಕ್ಷವು ಶನಿವಾರ ಹೇಳಿದೆ.

ಈ ಬಗ್ಗೆ ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್ ಮಾಡಲಾಗಿದ್ದು, ‘‘ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ” ಎಂದು ಜೆಡಿಎಸ್‌ ಸಂಶಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮತ ಹಾಕಿದ್ದು TMCಗೆ, ವಿವಿಪ್ಯಾಟ್‌ BJP ಚಿನ್ಹೆ ತೋರಿಸುತ್ತಿದೆ!: ಚುನಾವಣಾ ಆಯೋಗಕ್ಕೆ TMC ದೂರು

“ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು” ಎಂದು ಪಕ್ಷವು ಆಗ್ರಹಿಸಿದೆ.

“ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ” ಎಂದು ಹೇಳಿದೆ.

“ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ” ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ನನ್ನನ್ನು ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...