Homeಮುಖಪುಟಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

- Advertisement -
- Advertisement -

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕದ ಕಡಿತವು ಇತ್ತೀಚಿಗೆ ಪ್ರಕಟಗೊಂಡ ಉಪಚುನಾವಣೆಗಳ ಫಲಿತಾಂಶದ ಉತ್ಪನ್ನವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ, ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್‌ಗಳ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ಕ್ರಮವಾಗಿ 5 ರೂ. ಮತ್ತು 10 ರೂ.ಗಳಷ್ಟು ಕಡಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಚಿದಬರಂ ಹೇಳಿಕೆ ಹೊರಬಂದಿದೆ.

ಮುಖ್ಯವಾಗಿ ಹೆಚ್ಚಿನ ತೆರಿಗೆಯಿಂದಾಗಿ ಇಂಧನ ಬೆಲೆಗಳು ಹೆಚ್ಚಿವೆ ಎಂಬ ಕಾಂಗ್ರೆಸ್ ಆರೋಪವನ್ನು ಸರ್ಕಾರದ ಈ ಕ್ರಮವು ದೃಢಪಡಿಸುತ್ತದೆ. ಕೇಂದ್ರ ಸರ್ಕಾರದ ದುರಾಸೆಯಿಂದಾಗಿ ಇಂಧನದ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ ಎಂದು ಚಿದಂಬರಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “30 ವಿಧಾನಸಭೆ ಮತ್ತು 3 ಲೋಕಸಭಾ ಉಪಚುನಾವಣೆಗಳ ಫಲಿತಾಂಶಗಳು ಸುಂಕ ಕಡಿತ ಮಾಡಿವೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ! ಮುಖ್ಯವಾಗಿ ಹೆಚ್ಚಿನ ತೆರಿಗೆಗಳ ಕಾರಣದಿಂದಾಗಿ ಇಂಧನ ಬೆಲೆಗಳು ಹೆಚ್ಚಿತ್ತಿವೆ ಎಂಬ ನಮ್ಮ ಅಭಿಪ್ರಾಯವನ್ನು ದೃಢೀಕರಿಸಿದೆ” ಎಂದು ಹೇಳಿದ್ದಾರೆ.

ಅಕ್ಟೋಬರ್ 30 ರಂದು ಚುನಾವಣೆ ನಡೆದ 30 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ಕೇವಲ 7 ಸ್ಥಾನಗಳಲ್ಲಿ ಗೆದ್ದಿದೆ. ಬಿಜೆಪಿಯೇ ಆಡಳಿತದಲ್ಲಿರುವ ಹಿಮಾಚಲ ಪ್ರದೇಶದ ಎಲ್ಲಾ ಮೂರು ವಿಧಾನಸಭಾ ಕ್ಷೇತ್ರಗಳು ಮತ್ತು ಪ್ರತಿಷ್ಠಿತ ಮಂಡಿ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದ್ದು, ಅವೆಲ್ಲವನ್ನು ಕಾಂಗ್ರೆಸ್ ಗೆದ್ದುಕೊಂಡಿದೆ.

ಮೋದಿ ಸರ್ಕಾರ ಘೋಷಿಸಿದ ಬೆಲೆ ಇಳಿಕೆ ಯಾವುದಕ್ಕೂ ಸಾಲುವುದಿಲ್ಲ. 5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ. ಉತ್ತರ ಪ್ರದೇಶ ಚುನಾವಣೆ ಬಳಿಕೆ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಲಿವೆ. 50 ರೂ ಕಡಿತಗೊಳಿಸಿದ್ದರೆ ಮಾತ್ರ ಜನರಿಗೆ ಉಪಯೋಗವಾಗಲಿದೆ ಎಂದು ಆರ್‌ಜೆಡಿ ವರಷ್ಟರಾದ ಲಾಲುಪ್ರಸಾದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...