Homeಕರೋನಾ ತಲ್ಲಣದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

ದೆಹಲಿಗೆ ಮೀಸಲಿದ್ದ ಆಕ್ಸಿಜನ್ ಕೊಡದೇ ಕೇಂದ್ರ ವಂಚಿಸುತ್ತಿದೆ: ಕೇಜ್ರಿವಾಲ್ ಹೇಳಿಕೆ

- Advertisement -
- Advertisement -

ದೆಹಲಿಗೆ ನೀಡಬೇಕಾಗಿದ್ದ ವೈದ್ಯಕೀಯ ಆಕ್ಸಿಜನ್‌ನ ಪ್ರಮಾಣವನ್ನು ಕಡಿಮೆಗೊಳಿಸಿ, ಇತರ ರಾಜ್ಯಗಳ ಕಡೆಗೆ ತಿರುಗಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಕೇಂದ್ರದ ವಿರುದ್ದ ಗಂಭೀರ ಆರೋಪ ಹೊರಿಸಿದ್ದಾರೆ. ದೆಹಲಿಗೆ ಮೀಸಲಾಗಿದ್ದ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದ್ದು, ಅದನ್ನು ಮತ್ತೇ ದೆಹಲಿಗೆ ನೀಡಬೇಕು ಎಂದು ಕೇಜ್ರಿವಾಲ್‌ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ದೆಹಲಿಯು ಆಕ್ಸಿಜನ್‌‌ನ ತೀವ್ರ ಕೊರತೆಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಆಕ್ಸಿಜನ್‌‌ “ತುರ್ತುಸ್ಥಿತಿ”ಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಬಿಕ್ಕಟ್ಟು ಎದುರಿಸಲು ಸೇನೆಯ ಅಗತ್ಯವಿದೆ- ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೆಹಲಿಯು ತೀವ್ರ ಆಕ್ಸಿಜನ್‌‌ನ ಕೊರತೆಯನ್ನು ಎದುರಿಸುತ್ತಿದೆ. ತೀವ್ರವಾಗಿ ಹೆಚ್ಚುತ್ತಿರುವ ಪ್ರಕರಣಗಳ ದೃಷ್ಟಿಯಿಂದ, ದೆಹಲಿಯು ಸಾಮಾನ್ಯ ಪೂರೈಕೆಗಿಂತ ಹೆಚ್ಚಿನ ಆಕ್ಸಿಜನ್‌‌ ಅನ್ನು ಬಯಸುತ್ತದೆ. ಕೇಂದ್ರವು ಆಕ್ಸಿಜನ್‌‌ ಪೂರೈಕೆಯನ್ನು ಹೆಚ್ಚಿಸುವ ಬದಲು, ನಮ್ಮ ಸಾಮಾನ್ಯ ಪೂರೈಕೆಯನ್ನು ತೀವ್ರವಾಗಿ ಕಡಿಮೆ ಮಾಡಲಾಗಿದೆ. ಅಲ್ಲದೆ ದೆಹಲಿಯ ಕೋಟಾವನ್ನು ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ದೆಹಲಿಯಲ್ಲಿ ಆಕ್ಸಿಜನ್‌‌ ಎಮರ್ಜೆನ್ಸಿಯಾಗಿ ಮಾರ್ಪಟ್ಟಿದೆ” ಎಂದು ಬರೆದಿದ್ದಾರೆ.

“ನಮಗೆ ಹಾಸಿಗೆಗಳು,ಐಸಿಯು ಹಾಸಿಗೆ, ಆಕ್ಸಿಜನ್‌‌ ಬೇಕಾಗಿದೆ…ನಾವು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ಕೇಜ್ರಿವಾಲ್ ಇಂದು ಬೆಳಿಗ್ಗೆ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಉತ್ಕರ್ಷ ಮತ್ತು ಮುಸ್ಲಿಂ ಜನಪ್ರಾತಿನಿಧ್ಯಕ್ಕೆ ಹೊಡೆತ: ಇದೊಂದು ಗಂಭೀರ ಸಾಮಾಜಿಕ ದುರಂತ

ದೆಹಲಿ ಸರ್ಕಾರವು ಈಗಾಗಲೇ ಆಕ್ಸಿಜನ್‌‌ನ ಸಂಗ್ರಹಕ್ಕೆ ಸಹಾಯ ಮಾಡುವಂತೆ ಕೇಂದ್ರ ಸರ್ಕಾರದೊಂದಿಗೆ ಈಗಾಗಲೆ ಕೇಳಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದರು.

ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅವರಿಗೆ ಕೇಜ್ರವಾಲ್‌‌ ಪತ್ರ ಬರೆದಿದ್ದಾರೆ. ಪತ್ರದಲ್ಲಿ, “ದೆಹಲಿಯ ವಿವಿಧ ಆಸ್ಪತ್ರೆಗಳಿಗೆ ಆಕ್ಸಿಜನ್‌‌ ಪೂರೈಸುವ ಪ್ರಮುಖ ಪೂರೈಕೆದಾರರಲ್ಲಿ ಒಬ್ಬರಾದ ‘ಮೆಸರ್ಸ್ ಇನಾಕ್ಸ್’‌ನ ಉತ್ಪಾದನೆಯನ್ನು ಹೆಚ್ಚಾಗಿ ಇತರ ರಾಜ್ಯಗಳಿಗೆ ತಿರುಗಿಸಲಾಗಿದೆ. ಈ ನಿರ್ಣಾಯಕ ಹಂತದಲ್ಲಿ, ಈಗ ದೆಹಲಿಗೆ ನಿಯೋಜಿಸಲಾಗಿರುವ ಹೊಸ ಪೂರೈಕೆದಾರರೊಂದಿಗೆ ಆಸ್ಪತ್ರೆಗಳು ಒಪ್ಪಂದದ ಒಪ್ಪಂದ ಮಾಡಿಕೊಳ್ಳಲು ಸಾಧ್ಯವಿಲ್ಲ. ಇದು ಪ್ರಮುಖ ಆಸ್ಪತ್ರೆಗಳಲ್ಲಿ ಭಾರಿ ಕೊರತೆಯನ್ನು ಉಂಟುಮಾಡುತ್ತಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಒಡಲಿನಾಳದಿಂದ ಬಂದ ಅರಿವಿನ ಆಸ್ಫೋಟವೇ; ದಲಿತ ಚಳುವಳಿ ಮತ್ತು ಅಂಬೇಡ್ಕರ್

“ಪ್ರತಿದಿನ 700 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ನಿರಂತರವಾಗಿ ಪೂರೈಸಲು ಮತ್ತು ಬೇರೆ ರಾಜ್ಯಗಳಿಗೆ ಮುಖಮಾಡಿರುವ 140 ಮೆಟ್ರಿಕ್ ಟನ್ ಆಕ್ಸಿಜನ್‌‌ ಅನ್ನು ದೆಹಲಿಗೆ ನೀಡಲು ‘ಮೆಸಸ್ ಇನಾಕ್ಸ್’ ಸೂಕ್ತ ಸೂಚನೆಗಳನ್ನು ನೀಡುವಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪಿಯೂಷ್‌ ಗೋಯಲ್ ಅವರು, ದೇಶವು ತನ್ನ ಸಾಮರ್ಥ್ಯದ 110% ಆಕ್ಸಿಜನ್‌‌ ಅನ್ನು ಉತ್ಪಾದಿಸುತ್ತಿದೆ ಎಂದು ಹೇಳಿದ್ದು, ಭಾನುವಾರದಂದು ಟ್ರಕ್‌ಗಳು ಲೋಡ್‌ ಆಗುತ್ತಿರುವ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡದಂತಹ ಹಲವಾರು ರಾಜ್ಯಗಳು ಈಗಾಗಲೇ ಆಕ್ಸಿಜನ್‌‌ನ ಕೊರತೆಯಿಂದ ಬಳಲುತ್ತಿವೆ. ಪಂಜಾಬ್ ಆಕ್ಸಿಜನ್‌‌‌‌ ಕೊರತೆಯತ್ತ ಸಾಗುತ್ತಿದೆ, ಹೆಚ್ಚಿನ ಆಮ್ಲಜನಕಕ್ಕೆ ವ್ಯವಸ್ಥೆ ಮಾಡುವಂತೆ ಕೇಂದ್ರವನ್ನು ಕೇಳಿಕೊಂಡಿದೆ. ಅನೇಕ ಸ್ಥಳಗಳಲ್ಲಿ, ಜನರು ಕಾಳ ಸಂತೆಯಲ್ಲಿ ಆಕ್ಸಿಜನ್‌‌ ಖರೀದಿಸಲಾಗುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೋವಿಡ್ ಕಾರಣಕ್ಕೆ ಬಂಗಾಳದ ನನ್ನ ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸುತ್ತೇನೆ: ರಾಹುಲ್ ಗಾಂಧಿ

ವಿಡಿಯೋ ನೋಡಿ: ಪ್ರತಾಪಗೌಡ ಪಾಟೀಲ್ ನೀವೇನು ವಿಶ್ವೇಶ್ವರಯ್ಯನವರ? ತರಾಟೆಗೆ ತೆಗೆದುಕೊಂಡ ನೀರಾವರಿ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎಸ್‌ಐಟಿ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬ ವಿಪಕ್ಷಗಳ ಆರೋಪ ತಿರಸ್ಕರಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದ ತನಿಖೆಯು ಪಕ್ಷಪಾತದಿಂದ ಕೂಡಿದೆ ಅಥವಾ ಸರ್ಕಾರದ ಒತ್ತಡದಲ್ಲಿದೆ ಎಂಬ ವಿರೋಧ ಪಕ್ಷದ ಆರೋಪಗಳನ್ನು ತಿರಸ್ಕರಿಸಿರುವ ಕೇರಳ ಹೈಕೋರ್ಟ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ...

ಆರ್‌ಎಸ್‌ಎಸ್ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ನಲಪಾಡ್‌ಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಮತ್ತು ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಸಂಸದ/ಶಾಸಕರ...

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...