Homeಕರ್ನಾಟಕಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ: ಕುಮಾರಸ್ವಾಮಿ

- Advertisement -
- Advertisement -

ಕೊರೊನಾ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ ಕುಮಾರಸ್ವಾಮಿ, “ಕೊರೊನಾ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್‌ ವಿಷಯದಲ್ಲಿ ಎಡವಿವೆ” ಎಂದು ಬುಧವಾರ ಹೇಳಿದ್ದಾರೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಅವರು, “ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್‌ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತಬ್ಲಿಗಿ ಮರ್ಕಜ್ ಮತ್ತು ಕುಂಭಮೇಳಕ್ಕೂ ಹೋಲಿಕೆ ಸರಿಯಲ್ಲ: ಉತ್ತರಖಂಡ ಸಿಎಂ

“ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು, ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್‌ ಪ್ರಕರಣಗಳು ದಿಢೀರ್‌ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ” ಎಂದು ಅವರು ಹೇಳಿದ್ದಾರೆ.

“ಈ ಮಧ್ಯೆ ರೆಮ್‌ಡಿಸಿವಿರ್‌ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್‌ ವಿಷಯದಲ್ಲಿ ಎಡವಿವೆ” ಎಂದು ಅವರು ಹೇಳಿದ್ದಾರೆ.

“ಕೋವಿಡ್‌ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಇಫ್ತಾರ್‌ ಕೂಟ ನಡೆಸುವಂತಿಲ್ಲ, ರಂಜಾನ್‌ಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...