Homeಮುಖಪುಟಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ಕೊರೊನಾ ಕಾರಣ ನೀಡಿ ಸಂಸತ್ತಿನ ’ಚಳಿಗಾಲದ ಅಧಿವೇಶನ’ ರದ್ದುಪಡಿಸಿದ ಕೇಂದ್ರ ಸರ್ಕಾರ

ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧೀರ್‌ ರಂಜನ್ ಚೌಧರಿ ಬೇಡಿಕೆ ಇಟ್ಟಿದ್ದರು

- Advertisement -
- Advertisement -

ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಚಳಿಗಾಳದ ಅಧಿವೇಶನ ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಕೂಡಾ ಒಲವು ತೋರಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ರೈತ ವಿರೋಧಿ ಕಾನೂನುಗಳನ್ನು ತಂದಿದೆ ಎಂದು ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ಮುಂದುವರೆಸಿರುವ ಹಿನ್ನಲೆಯಲ್ಲಿ, ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸಬೇಕು ಎಂದು ಕಾಂಗ್ರೆಸ್ ನಾಯಕ ಅಧೀರ್‌ ರಂಜನ್ ಚೌಧರಿ ಬೇಡಿಕೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಸಿರುವ ಪ್ರಲ್ಹಾದ್ ಜೋಶಿ ಅಧಿವೇಶನ ಇಲ್ಲ ಎಂದು ದೃಡಪಡಿಸಿದ್ದಾರೆ.

ಇದನ್ನೂ ಓದಿ: ಡಿಸೆಂಬರ್‌ 15 ರಂದು ಮತ್ತೇ ವಿಧಾನ ಪರಿಷತ್‌ ಅಧಿವೇಶನ: ’ಗೋಹತ್ಯೆ’ ಮಸೂದೆ ಅಂಗೀಕಾರಕ್ಕೆ ತಯಾರಿ?

ಅಧೀರ್‌ ರಂಜನ್ ಅವರ ಬೇಡಿಕೆಗೆ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಶಿ, “ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ. ಕೊರೊನಾ ಕಾರಣಕ್ಕೆ ಅಧಿವೇಶನವನ್ನು ಕರೆಯದಿರಲು ಎಲ್ಲರೂ ಒಮ್ಮತ ವ್ಯಕ್ತಪಡಿಸಿದ್ದಾರೆ” ಎಂದು ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ನಡೆದ ಮಾನ್ಸೂನ್ ಅಧಿವೇಶನವು ಕೊರೊನಾ ಕಾರಣ್ಕಕೆ ತುಂಬಾ ವಿಳಂಬವಾದರೂ ನಿರಂತರ 10 ಸಭೆಗಳಲ್ಲಿ 27 ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಅವುಗಳಲ್ಲಿ ಮೂರು ಕೃಷಿ ಕಾನೂನುಗಳು ಪ್ರಸ್ತುತ ರೈತ ಪ್ರತಿಭಟನೆಗೆ ನಾಂದಿ ಹಾಡಿದೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

“ಪ್ರಸ್ತುತ, ನಾವು ಡಿಸೆಂಬರ್ ಮಧ್ಯದಲ್ಲಿದ್ದು, ಶೀಘ್ರದಲ್ಲೇ ಕೊರೊನಾ ಲಸಿಕೆಯನ್ನು ನಿರೀಕ್ಷಿಸಲಾಗಿದೆ. ಈ ನಿಟ್ಟಿನಲ್ಲಿ, ನಾನು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಅನೌಪಚಾರಿಕವಾಗಿ ಸಂಪರ್ಕಿಸಿದ್ದೇನೆ. ಅವರು ಸಾಂಕ್ರಾಮಿಕ ರೋಗದ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿ ಚಳಿಗಾಲದ ಅಧಿವೇಶನದಿಂದ ದೂರವಿರಲು ನಿರ್ಧರಿಸಿದ್ದಾರೆ. ಸಂಸತ್ತಿನ ಮುಂದಿನ ಅಧಿವೇಶನವನ್ನು ಶೀಘ್ರವಾಗಿ ನಡೆಸಲು ಸರ್ಕಾರ ಸಿದ್ಧವಾಗಿದೆ” ಎಂದು ಅವರು ಅಧೀರ್‌ ರಂಜನ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಸಂವಿಧಾನವು ಪತ್ರಿ ಆರು ತಿಂಗಳಿಗೆ ಸಂಸತ್ತು ಸಭೆ ಸೇರಬೇಕು ಎಂದು ಹೇಳುತ್ತದೆ. ಫೆಬ್ರವರಿ 1 ರಂದು ಬಜೆಟ್ ಘೋಷಣೆಗೂ ಮುಂಚಿತವಾಗಿ ಜನವರಿ ಕೊನೆಯ ವಾರದಲ್ಲಿ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.  ಸೆಪ್ಟೆಂಬರ್‌ನಲ್ಲಿ ಅನೇಕ ಸಂಸದರು ಕರೊನಾ ಸೋಂಕಿಗೆ ಒಳಗಾದ್ದರಿಂದ ಮಾನ್ಸೂನ್ ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು. ಅಧಿವೇಶನ ಪ್ರಾರಂಭವಾಗುವ ಮೊದಲು ನಡೆಸಿದ ಪರೀಕ್ಷೆಗಳಲ್ಲಿ ಲೋಕಸಭೆಯ ಹದಿನೇಳು ಸದಸ್ಯರು ಮತ್ತು ರಾಜ್ಯಸಭೆಯ ಎಂಟು ಮಂದಿ ಕೊರೊನಾ ಪಾಸಿಟಿವ್ ಆಗಿದ್ದರು.

ಇದನ್ನೂ ಓದಿ: ಐಕ್ಯ ಹೋರಾಟ: 3ನೇ ದಿನದ ಪರ್ಯಾಯ ಅಧಿವೇಶನದ ನಿರ್ಣಯಗಳ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...