Homeಮುಖಪುಟಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೇರಳದ ಲಾಕ್‌ಡೌನ್ ತೆರವಿಗೆ ಕೇಂದ್ರದ ಆಕ್ಷೇಪ: ತಪ್ಪು ಗ್ರಹಿಕೆ ಉಂಟಾಗಿದೆಯೆಂದು ಕೇರಳ ಸರ್ಕಾರದ ಹೇಳಿಕೆ

ಕೊರೊನಾ ನಿಭಾಯಿಸುವುದರಲ್ಲಿ ಮಾದರಿ ರಾಜ್ಯವೆಂದು ಹೆಸರಾಗಿರುವ ಕೇರಳಕ್ಕೂ ಕೇಂದ್ರ ಸರ್ಕಾರಕ್ಕೂ ಲಾಕ್‌ಡೌನ್‌ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದಂತೆ ತೋರುತ್ತದೆ. ಆದರೆ ಕೇರಳದ ಸಚಿವರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

- Advertisement -
- Advertisement -

ಇಂದಿನಿಂದ ಕೇರಳದ ಕೆಲವು ಭಾಗಗಳಲ್ಲಿ ರೆಸ್ಟೋರೆಂಟ್‌ಗಳು, ಪುಸ್ತಕ ಮಳಿಗೆಗಳು ಮತ್ತು ಕ್ಷೌರದ ಅಂಗಡಿಗಳನ್ನು ಪುನರಾರಂಭಿಸುವ ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪತ್ರ ಬರೆದಿದೆ.

ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರವ್ಯಾಪಿ ಲಾಕ್‌ಡೌನ್ ಕುರಿತ  ಮಾರ್ಗಸೂಚಿಗಳನ್ನು “ಕಡೆಗಣಿಸಲು” ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಅವಧಿಯಲ್ಲಿ ರಾಜ್ಯಗಳು ತಮ್ಮದೇ ಆದ ಚಟುವಟಿಕೆಗಳನ್ನು ಅನುಮತಿಸಲು ಸಾಧ್ಯವಿಲ್ಲ ಎಂದ ಕೇಂದ್ರ, ಬಯಸಿದರೆ ಅವು ಕಠಿಣವಾಗಬಹುದು ಎಂದು ಹೇಳಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಕೇಂದ್ರದಿಂದ ಅನುಮತಿ ಪಡೆದ ಚಟುವಟಿಕೆಗಳನ್ನು ಮಾತ್ರ ಇಂದಿನಿಂದ ದೇಶದ ಕೆಲವು ಭಾಗಗಳಲ್ಲಿ ಅನುಮತಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳು ತಮ್ಮದೇ ಆದ ಅಗತ್ಯ ಚಟುವಟಿಕೆಗಳ ಪಟ್ಟಿಯನ್ನು ತಯಾರಿಸಿದ ನಂತರ ಮತ್ತು ಇಂದಿನಿಂದ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿದ ನಂತರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಪತ್ರ ಬರೆದಿದ್ದಾರೆ. “ಕೆಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಅನುಮತಿಸದ ಚಟುವಟಿಕೆಗಳನ್ನು ಅನುಮತಿ ಆದೇಶಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಗೃಹ ಸಚಿವಾಲಯ ತಿಳಿಸಿದೆ.

“ಪರಿಷ್ಕೃತ ಏಕೀಕೃತ ಮಾರ್ಗಸೂಚಿಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಾನು ಮತ್ತೆ ನಿಮ್ಮನ್ನು ಒತ್ತಾಯಿಸುತ್ತಿದ್ದೇನೆ, ಲಾಕ್ ಡೌನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಹಾಗೂ ಲಾಕ್‌ಡೌನ್‌ನ ಕಟ್ಟುನಿಟ್ಟಿನ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶಿಸುತ್ತೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ:  14 ದಿನಗಳಿಂದ 46 ಜಿಲ್ಲೆಗಳಲ್ಲಿ ಒಂದೂ ಕೊರೊನಾ ಪಾಸಿಟಿವ್‌ ಪ್ರಕರಣಗಳಿಲ್ಲ: ಕೇಂದ್ರ ಸರ್ಕಾರ


ಕೇರಳ ಸರ್ಕಾರದ ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ಲಾಕ್ ಡೌನ್ ಮಾರ್ಗಸೂಚಿಗಳನ್ನು ಕೇರಳ ಸರ್ಕಾರ ಕಡೆಗಣಿಸಿರುವುದನ್ನು ನಿರಾಕರಿಸಿದ್ದಾರೆ. “ನಾವು ಕೇಂದ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಲಾಕ್ ಡೌನ್ನು ತೆರೆದಿದ್ದೇವೆ. ಒಂದು ವೇಳೆ ಕೇಂದ್ರವು ಪಡೆದಿರುವ ವಿವರಣೆಯಲ್ಲಿ ಕೆಲವು ತಪ್ಪುಗ್ರಹಿಕೆ ಆಗಿರಬಹುದು ಎಂದು ನಾನು ಭಾವಿಸುತ್ತೇನೆ. ನಾವು ವಿವರಣೆಯನ್ನು ನೀಡಿ ಎಲ್ಲವನ್ನೂ ಸರಿಪಡಿಸುತ್ತೇವೆ. ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯದ್ದು ಒಂದೆ ನಿಲುವು. ತೆಗೆದುಕೊಂಡ ನಿಲುವಿನಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಇದು ಕೇವಲ ತಪ್ಪು ಗ್ರಹಿಕೆ, ನಾವು ಅದನ್ನು ಸರಿಪಡಿಸುತ್ತೇವೆ” ಎಂದು ಕೇರಳದ ಸಚಿವ ಹೇಳಿದ್ದಾರೆ.

ಕೇರಳವು ಎರಡು ವಲಯಗಳಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸುವುದಾಗಿ ಘೋಷಿಸಿ, ಖಾಸಗಿ ವಾಹನಗಳ ಬೆಸ-ಸಮ-ಆಧಾರದ ಮೇಲೆ ಚಲಿಸಲು ಹಾಗೂ ಇಂದಿನಿಂದ ಹೋಟೆಲ್‌ಗಳಲ್ಲಿ ಭೋಜನ ಸೇವೆಗಳಿಗೆ ಅವಕಾಶ ಮಾಡಿಕೊಟ್ಟಿತ್ತು.

ಸ್ಥಳೀಯ ಕಾರ್ಯಾಗಾರಗಳು, ಕ್ಷೌರದ ಅಂಗಡಿಗಳು, ಕಾರುಗಳ ಹಿಂಬದಿಯ ಸೀಟ್‌ನಲ್ಲಿ ಇಬ್ಬರು ಪ್ರಯಾಣಿಕರು ಮತ್ತು ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ವಲಯಗಳಲ್ಲಿ ಅವಕಾಶ ನೀಡಲಾಗಿದೆ. ಕೆಲವು ಪಟ್ಟಣಗಳಲ್ಲಿ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದು ಕೇರಳ ಹೇಳಿದೆ. ಕೇರಳದ ಎಡ ಸರ್ಕಾರವು ರಾಜ್ಯದ 14 ಜಿಲ್ಲೆಗಳನ್ನು ನಾಲ್ಕು ವಲಯಗಳಾಗಿ ವಿಭಾಗಿಸಿ ಬಣ್ಣವನ್ನು ಸಂಕೇತಗೊಳಿಸಿತ್ತು ಮತ್ತು ರಾಜ್ಯದ ಕನಿಷ್ಠ ಪೀಡಿತ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಿತು.

ಕಳೆದ ವಾರ, ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಕೊರೊನಾ ವೈರಸ್ ಹರಡುವುದನ್ನು ಪರಿಶೀಲಿಸಲು ಲಾಕ್ ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಿದ ನಂತರ ಕೈಗಾರಿಕಾ ಮತ್ತು ವಾಣಿಜ್ಯ ಚಟುವಟಿಕೆಗಳ ಪುನರುಜ್ಜೀವನಕ್ಕಾಗಿ ಸರ್ಕಾರವು ಮಾರ್ಗಸೂಚಿಗಳನ್ನು ಹೊರತಂದಿದೆ. ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಕೆಲವು ನಿರ್ಮಾಣ ಚಟುವಟಿಕೆಗಳು ಮತ್ತು ಕೈಗಾರಿಕಾ ಕಾರ್ಯಾಚರಣೆಗಳಿಗೆ ಅವಕಾಶ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಭಾರತ ಸರ್ಕಾರದ ಕಚೇರಿಗಳು ಮತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಚೇರಿಗಳು, ತುರ್ತು ಸೇವೆಗಳಿಗಾಗಿ ಖಾಸಗಿ ವಾಹನಗಳು, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಇ-ಕಾಮರ್ಸ್ ಕಂಪನಿಗಳು; ಕೊರಿಯರ್ ಸೇವೆಗಳು, ಎಂಎನ್‌ಆರ್‌ಇಜಿಎ ಕಾರ್ಯಗಳು ಮತ್ತು ಹಣಕಾಸು ವಲಯವನ್ನು ಸಹ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.


ವಿಡಿಯೊ ನೋಡಿ: ಹೆಲಿಕಾಪ್ಟರ್ ಮನಿ ಎಂದರೇನು? ಆರ್ಥಿಕತೆಗೆ ಅದರ ಉಪಯೋಗವೇನು?


ಇಂದಿನಿಂದ ಅನುಮತಿಸಬೇಕಾದ ಆರ್ಥಿಕ ಚಟುವಟಿಕೆಗಳು ಮತ್ತು ಸೇವೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಭಾನುವಾರ ಪರಿಷ್ಕರಿಸಿದೆ. ಲಾಕ್ ಡೌನ್ ಅವಧಿಯಲ್ಲಿ ಇ-ಕಾಮರ್ಸ್ ಕಂಪೆನಿಗಳ ಅನಿವಾರ್ಯವಲ್ಲದ ಸರಕುಗಳ ಸರಬರಾಜನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...