Homeಮುಖಪುಟಹುತಾತ್ಮ ರೈತರ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ: ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಹುತಾತ್ಮ ರೈತರ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ: ಪಟ್ಟಿ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಒಂದು ವರ್ಷದಿಂದ ನಡೆಯುತ್ತಿರುವ ರೈತ ಹೋರಾಟದಲ್ಲಿ 700ಕ್ಕೂ ಅಧಿಕ ರೈತರು ಹುತಾತ್ಮರಾಗಿದ್ದಾರೆ. ಆದರೆ ಈ ಕುರಿತು ಲೋಕಸಭೆಯ ಅಧಿವೇಶನದಲ್ಲಿ ‘ನಮ್ಮಲ್ಲಿ ಯಾವುದೇ ಡೇಟಾ ಇಲ್ಲ, ಹಾಗಾಗಿ ಅವರಿಗೆ ಪರಿಹಾರ ಕೊಡುವ ಪ್ರಶ್ನೆಯೇ ಉದ್ಭವಿಸವುದಿಲ್ಲ’ ಎಂದು ಕೃಷಿ ಸಚಿವಾಲಯ ಹೇಳಿದೆ. ಇದನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೇಂದ್ರವು ಸುಳ್ಳು ಹೇಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸಂಜೆ ಪತ್ರಿಕಾಗೋಷ್ಟಿಯಲ್ಲಿ 600ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, “ಸರ್ಕಾರವು ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದ ರೈತರ ಬಗ್ಗೆ ತಮ್ಮ ಬಳಿ ಡೇಟಾ ಇಲ್ಲ ಎಂದಿದೆ. ಸತ್ಯವೆಂದರೆ ಅವರ ಬಳಿ ವಿವರಗಳಿವೆ. ಆದರೆ ಅವರು ಅದನ್ನು ಸ್ವೀಕರಿಸುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಪಂಜಾಬ್‌ ರಾಜ್ಯದಿಂದ 403 ಮೃತ ರೈತರ ಪಟ್ಟಿಯನ್ನು ನೀಡಲಾಗಿದೆ. ಆ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಇತರ ರಾಜ್ಯಗಳಿಂಮದ 200 ಕ್ಕೂ ಹೆಚ್ಚು ಹುತಾತ್ಮ ರೈತರ ಪಟ್ಟಿಯನ್ನು ವಿವರಿಸಿ, ಕನಿಷ್ಠ ಈಗಲಾದರೂ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಸರ್ಕಾರ ಎಲ್ಲಾ ವಿಚಾರಕ್ಕೂ ಡೇಟಾ ಇಲ್ಲ ಎಂದು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಇಲ್ಲಿ ನೋಡಿ 500 ಕ್ಕೂ ಹೆಚ್ಚು ಅಧಿಕೃತ ಡೇಟಾ ನಮ್ಮ ಬಳಿ ಇದೆ. ಅವರ ಹೆಸರು, ವಿಳಾಸ, ಫೋನ್ ನಂಬರ್ ಎಲ್ಲಾ ಇದೆ. ಅವರಿಗೆ ನೀವು ಬಿಲಿಯನ್ ಡಾಲರ್ ಕೊಡಬೇಕಿಲ್ಲ. ಆದರೆ ಅವರ ತ್ಯಾಗಕ್ಕೆ ಕನಿಷ್ಟ ಪರಿಹಾರವನ್ನಾದರೂ ನೀಡಬೇಕು. ನಾವು ಈ ಪಟ್ಟಿಯನ್ನು ಮುಂದಿನ ಲೋಕಸಭೆ ಅಧಿವೇಶನದಲ್ಲಿ ಮಂಡಿಸುತ್ತೇವೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

ಪ್ರಧಾನಿಯವರು ಕರಾಳ ಕಾನೂನುಗಳನ್ನು ತಂದು ತಪ್ಪು ಮಾಡಿದೆವು ಎಂದು ಸಾರ್ವಜನಿಕವಾಗಿ ತಪ್ಪೊಪ್ಪಿಕೊಂಡಿದ್ದಾರೆ. ಈಗ ಹುತಾತ್ಮ ರೈತರಿಗೆ ಪರಿಹಾರ ಕೊಡುವುದಕ್ಕೆ ಏಕೆ ಹಿಂಜರಿಕೆ? ನಿಜವೆಂದರೆ ಪ್ರಧಾನಿ ಮತ್ತು ಸರ್ಕಾರದ ವರ್ತನೆ ಹೇಡಿತನದಿಂದ ಕೂಡಿದೆ. ಒಂದು ಸರ್ಕಾರ ಇಷ್ಟು ಕೆಳಮಟ್ಟದಲ್ಲಿ ವರ್ತಿಸಬಹುದೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾವು ಈ ರೈತರಿಗಾರಿ ಕೆಲವು ಕೆಲಸಗಳನ್ನು ಮಾಡಿದ್ದೇವೆ ಎಂದು ಸರ್ಕಾರಕ್ಕೆ ಹೇಳಲು ಬಯಸುತ್ತೇನೆ. ಪಂಜಾಬ್‌ನಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಸರ್ಕಾರವು ಪ್ರತಿಭಟನೆಯಲ್ಲಿ ಮೃತಪಟ್ಟ ಸುಮಾರು 500 ರೈತ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡಿದೆ. 152 ಕುಟುಂಬದ ಸದಸ್ಯರಿಗೆ ಉದ್ಯೋಗವನ್ನು ನೀಡಿದ್ದೇವೆ. ಹಾಗೂ ಉಳಿದವರಿಗೂ ಉದ್ಯೋಗ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.


ಇದನ್ನೂ ಓದಿ: ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಭೂಮಿ ನೀಡಲು ಮುಂದಾದ ಅನಿವಾಸಿ ಭಾರತೀಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...