Homeಕರ್ನಾಟಕರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

ರೈತ ಹೋರಾಟ ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ: ಹೆಚ್​.ಎಸ್​. ದೊರೆಸ್ವಾಮಿ

- Advertisement -
- Advertisement -

ಕರಾಳ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ನಡೆಸುತ್ತಿರುವ ಚಳುವಳಿಯನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್​.ಎಸ್​. ದೊರೆಸ್ವಾಮಿ ಆರೋಪಿಸಿದರು. ಅವರು ’ಸಂಯುಕ್ತ ಹೋರಾಟ ಕರ್ನಾಟಕ’ ವತಿಯಿಂದ ನಡೆದ ಟ್ರಾಕ್ಟರ್‌ ರ್‍ಯಾಲಿಯ ನಂತರ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

“ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ದೇಶದ ರೈತರು ಕಳೆದ 2 ತಿಂಗಳಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ದೇಶದ ಹಲವೆಡೆ ಕೇಂದ್ರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಆದರೆ, ಎರಡು ತಿಂಗಳಾದರೂ ತಮ್ಮ ಬೇಡಿಕೆಗಳು ಈಡೇರದ ಪರಿಣಾಮ ದೆಹಲಿ ಹೋರಾಟಗಾರರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಟ್ರಾಕ್ಟರ್​ ರ‍್ಯಾಲಿಯನ್ನು ಆಯೋಜಿಸಿದ್ದರು. ಈ ವೇಳೆ ಹೋರಾಟದ ನಡುವೆ ಪೊಲೀಸರು ಲಾಠಿಚಾರ್ಚ್​ ನಡೆಸಿ ಅಶ್ರುವಾಯು ಸಿಡಿಸಿದ್ದಾರೆ. ಪರಿಣಾಮ ಓರ್ವ ಮೃತಪಟ್ಟಿದ್ದರೆ, 20 ಜನ ಗಾಯಗೊಂಡಿದ್ದಾರೆ. ಈ ನಡುವೆ ದೆಹಲಿಯಲ್ಲಿ ನಡೆದಿರುವ ಅಹಿಕರ ಘಟನೆಗೆ ಕೇಂದ್ರ ಸರ್ಕಾರವೇ ಹೊಣೆ” ಎಂದು ಹೆಚ್​.ಎಸ್.​ ದೊರೆಸ್ವಾಮಿ ಕಿಡಿಕಾರಿದರು.

ಇದನ್ನೂ ಓದಿ: ರೈತ ಪರೇಡ್‌: ಲೈವ್ ಬ್ಲಾಗ್‌

ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯುವಂತೆ ಸಮಾವೇಶದಲ್ಲಿ ಒತ್ತಾಯಿಸಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, “ಕೇಂದ್ರ ಸರ್ಕಾರ ಜನ ವಿರೋಧಿ ಸರ್ಕಾರದಂತೆ ಕೆಲಸ ನಿರ್ವಹಿಸುತ್ತಿದೆ. ಈ ಸರ್ಕಾರದಿಂದ ರೈತರನ್ನು ಕಾಪಾಡಬೇಕು. ಗಣರಾಜ್ಯೋತ್ಸವ ದಿನದಂದೇ ರೈತರ ಹೋರಾಟ ನಡೆದಿರುವುದು ತುರ್ತು ವಿಚಾರ. ಹೀಗಾಗಿ ಎಲ್ಲರೂ ಒಗ್ಗಟ್ಟಾಗಬೇಕು. ಪ್ರಜಾಪ್ರಭುತ್ವದಲ್ಲಿ ಸರ್ಕಾರಗಳು ರೈತರ ಹಿತವನ್ನು ಕಾಪಾಡಿಕೊಳ್ಳಬೇಕು. ಆದರೆ, ಪ್ರಸ್ತುತ ಸರ್ಕಾರವೇ ರೈತರಿಗೆ ಮಾರಕವಾಗಿರುವುದು ದುರಂತ” ಎಂದು ಆತಂಕ ವ್ಯಕ್ತಪಡಿಸಿದರು.

“ದೆಹಲಿಯಲ್ಲಿ ರೈತರು ಮಳೆ ಚಳಿ ಬಿಸಿಲನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದಾರೆ. ಅವರ ಬೇಡಿಕೆಯಲ್ಲಿ ನ್ಯಾಯವಿದೆ. ಆದರೆ, ಕೇಂದ್ರ ಸರ್ಕಾರ ರೈತರ ಕೋರಿಕೆಗೆ ಕಿವಿಗೊಡದೆ ಹೋರಾಟವನ್ನು ಹತ್ತಿಕ್ಕಲು ಷಡ್ಯಂತ್ರ ನಡೆಸುತ್ತಿದೆ. ಈ ನಡುವೆ ಇಂದು ದೆಹಲಿಯಲ್ಲಿ ನಡೆದಿರುವ ಅಹಿತಕರ ಘಟನೆಗೆ ಕೇಂದ್ರ ಸರ್ಕಾರವೇ ಹೊಣೆ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ಕಾಯ್ದೆಗಳನ್ನು ವಾಪಾಸ್ ತೆಗೆದುಕೊಳ್ಳಬೇಕು” ಎಂದು ದೊರೆಸ್ವಾಮಿ ಒತ್ತಾಯಿಸಿದರು.

ಇದನ್ನೂ ಓದಿ: ದೆಹಲಿಯಲ್ಲಿ ಪರಸ್ಪರ ಗುಲಾಬಿ ವಿನಿಮಯ, ಒಟ್ಟಿಗೆ ಊಟ ಮಾಡಿದ ರೈತರು ಮತ್ತು ಪೊಲೀಸರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

0
“75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾರ ಮನೆಯ ಮೇಲೆ ತಿರಂಗ ಧ್ವಜಗಳಿರುವುದಿಲ್ಲವೋ ಆ ಮನೆಯ ಫೋಟೋಗಳನ್ನು ತೆಗೆದುಕೊಳ್ಳಿ” ಎಂದು ಉತ್ತರಾಖಂಡ ಬಿಜೆಪಿ ಘಟಕದ ಮುಖ್ಯಸ್ಥ ತನ್ನ ಬೆಂಬಲಿಗರಿಗೆ ಸೂಚನೆ ನೀಡಿರುವುದಾಗಿ ‘ಟೈಮ್ಸ್ ಆಫ್...