HomeಅಂಕಣಗಳುKarnataka against SIRSIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರು ನಗರದಿಂದ ಮೂಡಿಗೆರೆಗೆ ಆಗಮಿಸಿದ ‘SIR ಜನಜಾಗೃತಿ ಜಾಥಾ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರವು ದೇಶದ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.

ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಮಹನೀಯರು ಶೂನ್ಯದಿಂದ ಈ ದೇಶವನ್ನು ಕಟ್ಟಿ ಬೆಳೆಸಿದ್ದಾರೆ. ಆದರೆ ಕಳೆದ ಹತ್ತು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ತಾವೇ ಎಲ್ಲವನ್ನೂ ಮಾಡಿದ್ದೇವೆ ಎಂದು ಜನರಿಗೆ ಮಂಕುಬೂದಿ ಎರಚುತ್ತಿದ್ದಾರೆ. ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನದ ಆಶಯಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರುವ ಬಿಜೆಪಿ, ಇದೀಗ SIR ಜೂನ್ 30 ರಿಂದ ಜಾರಿ ಮಾಡುವ ಮೂಲಕ ತನ್ನ ಹುನ್ನಾರವನ್ನು ಸುಲಭವಾಗಿಸಿಕೊಳ್ಳುತ್ತಿದೆ. ಆದ್ದರಿಂದ ಮೂಡಿಗೆರೆ ತಾಲ್ಲೂಕಿನ ಎಲ್ಲಾ ಸಂಘಟನೆಗಳು ಒಟ್ಟುಗೂಡಿ SIRನಿಂದ ಆಗಬಹುದಾದ ಅನಾಹುತಗಳನ್ನು ಹಿಮ್ಮೆಟ್ಟಿಸಬೇಕಿದೆ. ಮತದಾರರ ಪಟ್ಟಿಯಿಂದ ಯಾರೊಬ್ಬರ ಹೆಸರು ತಪ್ಪಿಹೋಗದಂತೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕೆಂದು ಅವರು ಕರೆ ನೀಡಿದರು.

ಇದೇ ವೇಳೆ ಮಾತನಾಡಿದ ‘ಎದ್ದೇಳು ಕರ್ನಾಟಕ’ ಸಂಘಟನೆಯ ಮುಖಂಡ ಗೌಸ್ ಮೊಹಿದೀನ್, ಮತದಾರರು ಸರ್ಕಾರವನ್ನು ಆಯ್ಕೆ ಮಾಡುವ ಬದಲಾಗಿ, ಸರ್ಕಾರವೇ ತನಗೆ ಬೇಕಾದ ಮತದಾರರನ್ನು ಆಯ್ಕೆ ಮಾಡಿಕೊಳ್ಳುವ ದುಸ್ಥಿತಿಗೆ ಇಂದು ದೇಶ ತಲುಪಿದೆ. ಆದರೆ ನಾವು ನಮ್ಮ ರಕ್ತ ಕೊಟ್ಟಾದರೂ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತೇವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

ತದನಂತರ ಮಾತನಾಡಿದ ಸಿಪಿಐ (ML) ಪಕ್ಷದ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ, SIR ಮೂಲಕ ಆದಿವಾಸಿ, ಬುಡಕಟ್ಟು, ದಲಿತ ಮತ್ತು ಅಲ್ಪಸಂಖ್ಯಾತರನ್ನು ಹಕ್ಕುಗಳಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ದೇಶದಲ್ಲಿ ಸರ್ವಾಧಿಕಾರ ತರಲು ಸಂಘಪರಿವಾರ ಪಿತೂರಿ ನಡೆಸುತ್ತಿದ್ದು, ಈಗಾಗಲೇ ಅಸ್ಸಾಂ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ SIR ಜಾರಿ ಮುಖಾಂತರ ಲಕ್ಷಾಂತರ ಅರ್ಹ ಮತದಾರರ ಹೆಸರನ್ನು ಕೈಬಿಡಲಾಗಿದೆ. ಇದು ಕರ್ನಾಟಕದಲ್ಲಿ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಜಾಥಾದ ಮಾರ್ಗ-3ರ ನೇತೃತ್ವ ವಹಿಸಿರುವ ಸುರೇಶ್ ನಾಯ್ಕ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಈ ಕೂಡಲೇ ಎಚ್ಚೆತ್ತುಕೊಂಡು ಯಾವೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಬೇರೆ ರಾಜ್ಯಗಳಂತೆ ಇಲ್ಲೂ ಕೂಡ ದೊಡ್ಡ ಅನ್ಯಾಯವಾಗಲಿದೆ ಎಂಬ ಆತಂಕ ವ್ಯಕ್ತಪಡಿಸಿದರು.

ಇಂದಿರಾ ಲಂಕೇಶ್ ಗೆ ಶ್ರದ್ದಾಂಜಲಿ

ಇದೇ ಸಂದರ್ಭದಲ್ಲಿ ಇಂದು ನಿಧನರಾದ ಪತ್ರಕರ್ತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಹಾಗೂ ಅವರು ನಾಡಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು.

ಈ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿದರಹಳ್ಳಿ ಜಯರಾಂ, ಮೂಡಿಗೆರೆ ತಾಲ್ಲೂಕಿನ ಕಾಂಗ್ರೆಸ್ ವಕ್ತಾರರಾದ ಅನಂತ್, ಬಿಎಸ್‌ಪಿ ತಾಲ್ಲೂಕು ಅಧ್ಯಕ್ಷ ರಮೇಶ್, ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷರು, ಜಾಕೀರ್ ಹುಸೇನ್, ಎಸ್‌ಡಿಪಿಐ ತಾಲ್ಲೂಕು ಅಧ್ಯಕ್ಷ ಷರೀಫ್ M.U, ಸಾಮಾಜಿಕ ಹೋರಾಟಗಾರ ಹರೀಶ್ ಮತ್ತಿತರರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು, ರಾಮು ಕೌಳಿ, ಪವಿತ್ರ, ಸುಮಂತ್ ಮತ್ತು ಗಿರಿಜಾ ವಹಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...