Homeಮುಖಪುಟಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ: ಟ್ವಿಟರ್‌ನಲ್ಲಿ ಟ್ರೆಂಡ್‌

ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ: ಟ್ವಿಟರ್‌ನಲ್ಲಿ ಟ್ರೆಂಡ್‌

#ModiGovtLied ಎಂಬ ಹ್ಯಾಷ್ ಟ್ಯಾಗ್‌ನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಟ್ವೀಟ್ ಮಾಡಿದ್ದಾರೆ

- Advertisement -
- Advertisement -

“ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್‌ಗೆ ಸುಳ್ಳು ಹೇಳಿದೆ” ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಆರೋಪಿಸಿದ್ದು, #ModiGovtLied ಎಂಬ ಹ್ಯಾಷ್ ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ದೆಹಲಿ ಮತ್ತು ಉತ್ತರದ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ಹದಗೆಡಲು ಕೃಷಿ ತ್ಯಾಜ್ಯ ಸುಡುವಿಕೆ ಪ್ರಮುಖ ಕಾರಣವಲ್ಲ ಎಂದಿರುವ ಕೇಂದ್ರ ಸರ್ಕಾರ, ಒಟ್ಟು ವಾಯು ಮಾಲಿನ್ಯದಲ್ಲಿ ಶೇಕಡಾ 10ರಷ್ಟು ಮಾಲಿನ್ಯ ಮಾತ್ರ ಕೃಷಿ ತ್ಯಾಜ್ಯ ಸುಡುವುದರಿಂದ ಆಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇದು ಅಪ್ಪಟ ಸುಳ್ಳಿನ ಸಂಗತಿ ಎಂದು ಜನರು ವಾದಿಸಿದ್ದಾರೆ.

ಮಾಲಿನ್ಯವನ್ನು ತಗ್ಗಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೂರು ಕ್ರಮಗಳನ್ನು ತಿಳಿಸಿದೆ. ಅವುಗಳೆಂದರೆ: ಬೆಸ-ಸಮ ವಾಹನ ಯೋಜನೆ, ದೆಹಲಿಯಲ್ಲಿ ಟ್ರಕ್‌ಗಳ ಪ್ರವೇಶವನ್ನು ನಿಷೇಧಿಸುವುದು ಮತ್ತು ಕಠಿಣವಾದ ಲಾಕ್‌ಡೌನ್ ಜಾರಿ.

ವಾಯು ಮಾಲಿನ್ಯಕ್ಕೆ ಸಾರಿಗೆ, ಕೈಗಾರಿಕೆಗಳು, ವಾಹನ ದಟ್ಟಣೆಯನ್ನು ಹೊರತುಪಡಿಸಿ ಕೆಲವು ಪ್ರದೇಶಗಳಲ್ಲಿ ಹುಲ್ಲು ಸುಡುತ್ತಿರುವುದು ಕಾರಣ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದೆಹಲಿ ಹಾಗೂ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ವಾಯುಮಾಲಿನ್ಯವನ್ನು ತಡೆಯಲು ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವುದು, ಅನಿವಾರ್ಯವಲ್ಲದ ಸಾರಿಗೆ, ವಿದ್ಯುತ್ ಸ್ಥಾವರಗಳಿಗೆ ಕಡಿವಾಣ ಹಾಕುವುದು ಮತ್ತು ವರ್ಕ್‌ ಫ್ರಂ ಹೋಮ್‌ ಸೇರಿದಂತೆ ಹಲವು ವಿಷಯಗಳ ಕುರಿತು ತುರ್ತು ಸಭೆಯನ್ನು ಕರೆಯುವಂತೆ ನ್ಯಾಯಾಲಯವು ಕೇಂದ್ರಕ್ಕೆ ಸೂಚಿಸಿದೆ. ಈ ಕುರಿತು ಮಂಗಳವಾರ (ಇಂದು) ನಿರ್ಧಾರವಾಗಲಿದೆ.

ವಾಯು ಮಾಲಿನ್ಯಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದೆ ಎಂದು ಜನರು ಆರೋಪಿದ್ದು, ಟ್ವಿಟ್ಟರ್‌ನಲ್ಲಿ #ModiGovtLied ಟ್ರೆಂಡ್ ಆಗಿದೆ. ಹುಲ್ಲು ಸುಡುವುದರಿಂದಾಗಿ ಆಗುತ್ತಿರುವ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಆಗಿರುವ ವರದಿಯ ತುಣುಕುಗಳನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಈ ಹಿಂದೆ ಪ್ರತಿಪಾದಿಸಿರುವ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

 

“ಮಾಲಿನ್ಯವನ್ನು ಕಡಿಮೆ ಮಾಡಲು ನಾಗರಿಕರಾದ ನಾವು ಯಾವ ಪರಿಹಾರಗಳನ್ನು ಕಂಡುಕೊಳ್ಳಬಹುದು? ಅದು ಬಿಜೆಪಿಯಾಗಿರಲಿ, ಬೇರೆ ಪಕ್ಷವಾಗಲಿ ಅವರು ಎಂದಿಗೂ ಯಾವುದೇ ಪರಿಹಾರವನ್ನು ತಿಳಿಸುವುದಿಲ್ಲ. ಅವರು ಕೇವಲ ಆಪಾದನೆಯನ್ನು ಮಾಡುತ್ತಾರೆ. ಅದಕ್ಕಾಗಿಯೇ ಭಾರತ ಎಂದಿಗೂ ಅಭಿವೃದ್ಧಿ ಹೊಂದುವುದಿಲ್ಲ” ಎಂದು ಮನ್ಮಿತ ಎಂಬವರು ಟ್ವೀಟ್ ಮಾಡಿದ್ದಾರೆ.

#ModiGovtLied ಹ್ಯಾಷ್‌ ಟ್ಯಾಗ್‌ ಮಂಗಳವಾರ ಬೆಳಿಗ್ಗೆ 8.50ರ ವೇಳೆಗೆ ಗಮನ ಸೆಳೆದಿದ್ದು, ಹತ್ತು ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳನ್ನು ಮಾಡಲಾಗಿದೆ.


ಇದನ್ನೂ ಓದಿರಿ: ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...