Homeಮುಖಪುಟ’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

’ಪ್ರಧಾನಿಯನ್ನು ಫೇಸ್‌‌ಬುಕ್ ನಿಂದಿಸುತ್ತಿದೆ’ ಎಂದು ಜುಕರ್‌‌ಬರ್ಗ್‌ಗೆ ಪತ್ರ ಬರೆದ ಕೇಂದ್ರ ಸರ್ಕಾರ

ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಸಚಿವ ರವಿಶಂಕರ್‌ ಪ್ರಸಾದ್ ಆರೋಪಿಸಿದ್ದಾರೆ

- Advertisement -
- Advertisement -

ಆಡಳಿತಾರೂಡ ಬಿಜೆಪಿ ಸದಸ್ಯರ ಬಗ್ಗೆ ಭಾರತದ ಫೇಸ್‌ಬುಕ್ ಕಾರ್ಯನಿರ್ವಾಹಕರು ಪಕ್ಷಪಾತ ತೋರಿದ್ದಾರೆ ಎಂಬ ವರದಿಗಳ ಬಗೆಗಿನ ಭಾರಿ ವಿವಾದದ ಮಧ್ಯೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಫೇಸ್‌ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ ಪತ್ರ ಬರೆದು, ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಭಾರತದಲ್ಲಿ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುವಾಗ ಪ್ರಧಾನಿ ಮತ್ತು ಭಾರತದ ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ನಿಂದಿಸುತ್ತಿದೆ ಎಂದು ಆರೋಪಿಸಿದ್ದಾರೆ.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಲಪಂಥೀಯ ಪುಟಗಳನ್ನು ಅಳಿಸಲು ಅಥವಾ ಅವುಗಳ ವ್ಯಾಪ್ತಿಯನ್ನು ಗಣನೀಯವಾಗಿ ಕಡಿಮೆ ಮಾಡಲು ಫೇಸ್‌ಬುಕ್ ಇಂಡಿಯಾದ ಒಂದು ಏಕೀಕೃತ ಪ್ರಯತ್ನ ನಡೆಸಿತ್ತು ಎಂದು ಕೇಳಲ್ಪಟ್ಟಿದ್ದೇನೆ ಎಂದು ಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಈ ಬಗ್ಗೆ ಬರೆದ ಅನೇಕ ಮೇಲ್‌ಗಳಿಗೂ ಸಹ ಉತ್ತರಿಸಲ್ಪಟ್ಟಿಲ್ಲ, ಇದು ಫೇಸ್‌ಬುಕ್ ಇಂಡಿಯಾ ತಂಡದಲ್ಲಿನ “ವ್ಯಕ್ತಿಗಳ ಪ್ರಬಲ ರಾಜಕೀಯ ನಂಬಿಕೆಗಳ” ನೇರ ಫಲಿತಾಂಶವಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಗಾಸಿಪ್, ಪಿಸುಮಾತುಗಳು ಮತ್ತು ಕೊಂಕುನುಡಿಗಳ ಮೂಲಕ ಭಾರತದ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದು ಖಂಡನೀಯ. ಅಂತರರಾಷ್ಟ್ರೀಯ ಮಾಧ್ಯಮಗಳೊಂದಿಗಿನ ಫೇಸ್‌ಬುಕ್‌ನ ಈ ಒಡನಾಟವು ನಮ್ಮ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆ ತಮ್ಮ ಆಕಾಂಕ್ಷೆಗಳನ್ನು ಬಿತ್ತಲು ದುಷ್ಕೃತ್ಯದ ಪಟ್ಟಭದ್ರ ಹಿತಾಸಕ್ತಿಗಳಿಗೆ ಮುಕ್ತತೆಯನ್ನು ನೀಡುತ್ತಿದೆ” ಎಂದು ಅವರು ಬರೆದಿದ್ದಾರೆ.

ವಾಲ್ ಸ್ಟ್ರೀಟ್‌ ಜರ್ನಲ್ ಫೇಸ್‌ಬುಕ್ ಇಂಡಿಯಾ ಬಿಜೆಪಿ ಪರವಾಗಿ ಕೆಲಸ ಮಾಡಿದೆ ಎಂದು ಪ್ರತಿಪಾದಿಸುತ್ತಿದ್ದರೆ, ಫೇಸ್‌ಬುಕ್‌ನೊಳಗೆ ಬಲಪಂಥೀಯರ ವಿರುದ್ಧ ಪಕ್ಷಪಾತವಿದೆ ಎಂದು ಪ್ರಸಾದ್ ಆರೋಪಿಸುತ್ತಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕರಿಂದ ಹಿಡಿದು ಇತರ ಹಿರಿಯ ಅಧಿಕಾರಿಗಳವರೆಗಿನ ಫೇಸ್‌ಬುಕ್ ಇಂಡಿಯಾ ತಂಡವು “ಒಂದು ನಿರ್ದಿಷ್ಟ ರಾಜಕೀಯ ನಂಬಿಕೆಗೆ ಸೇರಿದ ಜನರ ಪ್ರಾಬಲ್ಯ ಹೊಂದಿದೆ” ಮತ್ತು “ಈ ರಾಜಕೀಯ ಪ್ರವೃತ್ತಿಯ ಜನರು ಸತತ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಲ್ಲಿ ಅಗಾಧವಾಗಿ ಸೋಲಿಸಲ್ಪಟ್ಟಿದ್ದಾರೆ” ಎಂದು “ವಿಶ್ವಾಸಾರ್ಹ ಮಾಧ್ಯಮ ವರದಿಗಳನ್ನು” ಉಲ್ಲೇಖಿಸಿ ರವಿಕಶಂಕರ್‌ ಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ವಾಲ್‌ಪೋಸ್ಟ್‌‌ ಜರ್ನಲ್‌ ವರದಿಗಳನ್ನು ಫೇಸ್‌ಬುಕ್‌ನೊಳಗಿನ “ಆಂತರಿಕ ಶಕ್ತಿ ಹೋರಾಟ” ಎಂದು ಸಚಿವ ಕರೆದಿದ್ದಾರೆ.

ಫೇಸ್‌ಬುಕ್‌ನ ಫ್ಯಾಕ್ಟ್‌ಚೆಕ್‌ಗಳನ್ನು ತೃತೀಯ ಫ್ಯಾಕ್ಟ್-ಚೆಕರ್‌ಗಳಿಗೆ ಹೊರಗುತ್ತಿಗೆ ನೀಡುತ್ತಿರುವುದು ಒಂದು ಸಮಸ್ಯೆಯೆಂದು ಹೇಳುತ್ತಾ, ಸಂಸ್ಥೆಯು “ಬಳಕೆದಾರರನ್ನು ತಪ್ಪು ಮಾಹಿತಿಯಿಂದ ರಕ್ಷಿಸುವ ಜವಾಬ್ದಾರಿಯನ್ನು ಸ್ವತಃ ಬಿಟ್ಟುಕೊಡುತ್ತಿದೆ ಮತ್ತು ಬದಲಿಗೆ ಇದು ವಿಶ್ವಾಸಾರ್ಹತೆಯಿಲ್ಲದ ಮೋಸದ ಸಂಸ್ಥೆಗಳಿಗೆ ಮೂಲವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ, ಕಾಂಗ್ರೆಸ್ ಆಗಸ್ಟ್‌ನಲ್ಲಿ ಎರಡು ಬಾರಿ ಜುಕರ್‌ಬರ್ಗ್‌ಗೆ ಪತ್ರ ಬರೆದಿದ್ದು, ಭಾರತದಲ್ಲಿ ತನ್ನ ಕಾರ್ಯಾಚರಣೆಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಯಾವ ನಿರ್ದಿಷ್ಟ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...