Homeಮುಖಪುಟ'ದೆಹಲಿ ಕಾಲ್ತುಳಿತವನ್ನು ಕೇಂದ್ರ ಮುಚ್ಚಿಹಾಕಿದೆ..'; ರೈಲ್ವೆ ಸಚಿವರ ರಾಜೀನಾಮೆಗೆ ಟಿಎಂಸಿ ಒತ್ತಾಯ

‘ದೆಹಲಿ ಕಾಲ್ತುಳಿತವನ್ನು ಕೇಂದ್ರ ಮುಚ್ಚಿಹಾಕಿದೆ..’; ರೈಲ್ವೆ ಸಚಿವರ ರಾಜೀನಾಮೆಗೆ ಟಿಎಂಸಿ ಒತ್ತಾಯ

- Advertisement -
- Advertisement -

ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತವನ್ನು ಮುಚ್ಚಿಹಾಕಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಭಾನುವಾರ ಆರೋಪಿಸಿದ್ದು, ‘ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ -ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಘಟನೆಯನ್ನು “ಹೃದಯವಿದ್ರಾವಕ” ಎಂದು ಕರೆದಿದ್ದಾರೆ.

ವಿಶೇಷವಾಗಿ ಮಹಾ ಕುಂಭದಂತಹ ದೊಡ್ಡ ಧಾರ್ಮಿಕ ಸಭೆಗಳ ಸಮಯದಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಉತ್ತಮ ಯೋಜನೆ ಮತ್ತು ನಿರ್ವಹಣೆಯ ಅಗತ್ಯವಿದೆ ಎಂಬುದನ್ನು ಅವರು ಒತ್ತಿ ಹೇಳಿದರು.

“ದೆಹಲಿ ಕಾಲ್ತುಳಿತದಲ್ಲಿ 18 ಜೀವಗಳ ದುರಂತ ನಷ್ಟವು ತೀವ್ರ ಹೃದಯವಿದ್ರಾವಕವಾಗಿದೆ. ಈ ನೋವಿನ ಘಟನೆಯು ಎಚ್ಚರಿಕೆಯಿಂದ ಯೋಜನೆ ಹಾಗೂ ನಿರ್ವಹಣೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ವಿಶೇಷವಾಗಿ, ನಾಗರಿಕರ ಸುರಕ್ಷತೆಯ ವಿಷಯದಲ್ಲಿ” ಎಂದು ಅವರು ಹೇಳಿದರು.

“ಮಹಾ ಕುಂಭಕ್ಕೆ ಹೋಗುವ ಯಾತ್ರಿಕರಿಗೆ ಸರಿಯಾದ ಬೆಂಬಲ-ಸೌಲಭ್ಯಗಳನ್ನು ನೀಡಬೇಕಾಗಿತ್ತು. ಇಂತಹ ಪ್ರಯಾಣಗಳು ಸುರಕ್ಷಿತ ಮತ್ತು ಸುಸಂಘಟಿತವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ” ಎಂದು ಅವರು ಹೇಳಿದರು.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಈ ಘಟನೆಯನ್ನು “ದುರದೃಷ್ಟಕರ, ಖಂಡನೀಯ ಮತ್ತು ರೈಲ್ವೆಯ ಸಂಪೂರ್ಣ ದುರುಪಯೋಗದ ಪರಿಣಾಮ” ಎಂದು ಕರೆದರು.

“ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲತೆಗೆ ಇದು ಮತ್ತೊಂದು ಉದಾಹರಣೆಯಾಗಿದೆ. ಮೀಸಲು ಬೋಗಿಗಳನ್ನು ಹೊರಗಿನವರು ಆಕ್ರಮಿಸಿಕೊಂಡಿದ್ದಾರೆ, ಅವ್ಯವಸ್ಥೆ ವ್ಯಾಪಕವಾಗಿದೆ, ಈಗ ನಮಗೆ ಈ ಭಯಾನಕ ಕಾಲ್ತುಳಿತ ಸಂಭವಿಸಿದೆ. ರೈಲ್ವೆ ಸಚಿವರು ಪ್ರಚಾರದಲ್ಲಿ ಮಾತ್ರ ಆಸಕ್ತಿ ಹೊಂದಿದ್ದಾರೆ! ಅಧಿಕಾರದಲ್ಲಿ ಮುಂದುವರಿಯಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಅರಿತುಕೊಳ್ಳುವ ಮೊದಲು ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಳ್ಳಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಟಿಎಂಸಿ ರಾಜ್ಯಸಭಾ ಉಪ ನಾಯಕಿ ಸಾಗರಿಕಾ ಘೋಷ್, “ಸರ್ಕಾರವು ಭಾರತೀಯ ನಾಗರಿಕರ ಜೀವನದ ಜೊತೆ ನಿರ್ದಯವಾಗಿ ಆಟವಾಡುತ್ತಿದೆ, ಅದನ್ನು ಶಬ್ದಗಳಿಗೆ ಮೀರಿದ ದುರಂತ” ಎಂದು ಕರೆದರು.

“ಮೊದಲು ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಯಾವುದೇ ಕಾಲ್ತುಳಿತವನ್ನು ನಿರಾಕರಿಸುತ್ತದೆ. ನಂತರ ಅವರು ಅದನ್ನು ವದಂತಿ ಎಂದು ಕರೆಯುತ್ತಾರೆ. ನಂತರ ಅವರು ‘ಕೆಲವು ಜನರು’ ‘ಗಾಯಗೊಂಡಿದ್ದಾರೆ’ ಎಂದು ಒಪ್ಪಿಕೊಳ್ಳುತ್ತಾರೆ. ನಂತರ ಬಿಜೆಪಿ ‘ಕೆಲವರು’ ಮೃತಪಟ್ಟಿರಬಹುದು ಎಂದು ಒಪ್ಪಿಕೊಳ್ಳುವಂತೆ ಒತ್ತಾಯಿಸಲಾಗುತ್ತದೆ” ಎಂದು ಘೋಷ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಜುಮ್ಲಾ ಪಕ್ಷ ಮತ್ತು ಅದರ ಜುಮ್ಲಾ ಸರ್ಕಾರವು ಸಾವುಗಳು ಮತ್ತು ದುರಂತಗಳನ್ನು ಮತ್ತೆ ಮತ್ತೆ ಮುಚ್ಚಿಡುತ್ತಲೇ ಇದೆ. ಭಾರತೀಯ ನಾಗರಿಕರ ಜೀವನದ ಜೊತೆ ನಿರ್ದಯವಾಗಿ ಆಟವಾಡುತ್ತಿದೆ. ನವದೆಹಲಿಯ ನಿಲ್ದಾಣದ ಆಘಾತಕಾರಿ ಕಾಲ್ತುಳಿತದಿಂದ ಮೋದಿ ಸರ್ಕಾರದ ‘ಕನಿಷ್ಠ ಆಡಳಿತ, ಗರಿಷ್ಠ ಪ್ರಚಾರ’ ಮಂತ್ರ ಮತ್ತೆ ಬಹಿರಂಗವಾಗಿದೆ. ಇದು ಪದಗಳಿಗೆ ಮೀರಿದ ದುರಂತ” ಎಂದಿ ಅವರು ಹೇಳಿದರು.

ಇದನ್ನೂ ಓದಿ; ಗುಜರಾತ್‌| ದೇವಾಲಯ ಉತ್ಸವದಿಂದ ದಲಿತರನ್ನು ಹೊರಗಿಟ್ಟ ಪ್ರಕರಣ; ವಿವರಣೆ ಕೇಳಿದ ಎಸ್‌ಸಿ-ಎಸ್‌ಟಿ ರಾಷ್ಟ್ರೀಯ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...