Homeಮುಖಪುಟದೇವರ ವಿಗ್ರಹ ಹೊತ್ತಿದ್ದ ಕ್ರೇನ್ ಕುಸಿತ; ನಾಲ್ವರ ಸಾವು, 9 ಜನರಿಗೆ ಗಾಯ

ದೇವರ ವಿಗ್ರಹ ಹೊತ್ತಿದ್ದ ಕ್ರೇನ್ ಕುಸಿತ; ನಾಲ್ವರ ಸಾವು, 9 ಜನರಿಗೆ ಗಾಯ

- Advertisement -
- Advertisement -

ದೇವಸ್ಥಾನದ ಉತ್ಸವ ಕಾರ್ಯಕ್ರಮದ ವೇಳೆ ಕ್ರೇನ್ ಕುಸಿದುಬಿದ್ದಿರುವ ಘಟನೆ ಭಾನುವಾರ ಸಂಜೆ ತಮಿಳುನಾಡಿನ ಅರಕ್ಕೋಣಂನ ಕೀಲ್ವೀತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ. ಈ ಉತ್ಸವದಲ್ಲಿ ಕ್ರೇನ್ ಬಳಸಲು ಅನುಮತಿ ನೀಡಿಲ್ಲ ಎಂದು ವರದಿಯಾಗಿದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಸಚಿವ ಪಿ.ಕೆ.ಸೇಕರ್ ಬಾಬು ಅವರು ಸೋಮವಾರ ರಾಣಿಪೇಟೆಗೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ರಾಣಿಪೇಟೆ ಕಲೆಕ್ಟರ್ ಭಾಸ್ಕರ ಪಾಂಡಿಯನ್ ಮಾತನಾಡಿದ್ದು, “ಕ್ರೇನ್ ಆಪರೇಟರ್‍‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ತನಿಖೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಕ್ರೇನ್ ದುರಂತದಲ್ಲಿ ಬಲಿಯಾದವರನ್ನು ಮುತ್ತುಕುಮಾರ್ (31), ಜ್ಯೋತಿಬಾಬು(19) ಮತ್ತು ಎಸ್ ಭೂಪಾಲನ್ (41) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಿಲ್ವೀಡಿ ಗ್ರಾಮದಲ್ಲಿ ದ್ರೌಪತಿ ಅಮ್ಮನವರ ಉತ್ಸವದ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ದೇವರ ವಿಗ್ರಹ ಹೊತ್ತ ಕ್ರೇನ್ ಪಟ್ಟಣದಾದ್ಯಂತ ಮೆರವಣಿಗೆ ಹೊರಟಿತ್ತು. ಕ್ರೇನ್‌ನಲ್ಲಿ ದೇವರ ವಿಗ್ರಹದ ಜೊತೆಗೆ ಎಂಟು ಜನರು ಇದ್ದರು. ಮೆರವಣಿಗೆ ವೇಳೆ ಕ್ರೇನ್ ಕುಸಿದು ಬಿದ್ದಿದ್ದು, ಎಂಟು ಜನರು ನೆಲಕ್ಕೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಅರ್ಕೊನ್ನಂ ಸರ್ಕಾರಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇನ್ನು ಐವರಿಗೆ ಗಂಭೀರ ಗಾಯಗಾಳಾಗಿದ್ದು, ವೈದ್ಯರು ಗಾಯಾಳುಗಳ ಮೇಲೆ ಹೆಚ್ಚಿನ ನಿಗಾವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತ ಸಂಭವಿಸಿದಾಗ ಸುಮಾರು 1,500 ಜನರು ಅಲ್ಲಿಯ ರಸ್ತೆ ಮತ್ತು ದೇವಸ್ಥಾನದ ಆವರಣದಲ್ಲಿ ನೆರೆದಿದ್ದರು ಎಂದು ತಿಳಿದುಬಂದಿದೆ. ಈಗಾಗಲೇ ತನಿಖೆ ಪ್ರಾರಂಭಿಸಲಾಗಿದೆ ಮತ್ತು ಈ ಅಪಘಾತಕ್ಕೆ ಕಾರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ನೆಮಿಲಿ ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...