Homeಮುಖಪುಟಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

ಹಿಮಪಾತದ ನಡುವೆಯೇ ಜರುಗಲಿದೆ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ

- Advertisement -
- Advertisement -

ಕಾಶ್ಮೀರದ ಶ್ರೀನಗರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದು, ಇಂದು ನಡೆಯಲಿರುವ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯ ಸಮಾರೋಪ ಸಮಾರಂಭದ ಸಂಭ್ರಮಾಚರಣೆಯ ಉತ್ಸಾಹವನ್ನು ಕುಗ್ಗಿಸಬಹುದು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 135 ದಿನಗಳ ಸುದೀರ್ಘ ಕಾಲ ಸಾಗಿ ಬಂದಿರುವ ಈ ಯಾತ್ರೆ ಇದೀಗ ಅಂತಿಮ ಘಟ್ಟ ತಲುಪಿದೆ.

ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮೆಗಾ ರ್ಯಾಲಿಯನ್ನು ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕತ್ವದಲ್ಲಿ ನಡೆಯುತ್ತಿರುವ ಈ ರ್ಯಾಲಿಯಲ್ಲಿ ವಿರೋಧ ಪಕ್ಷಗಳ ಹನ್ನೆರಡು ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.ಈ ನಡುವೆ ಹಿಮಪಾತವಾಗುತ್ತಿರುವುದರಿಂದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚುವಂತೆ ಸ್ಥಿತಿ ಎದುರಾಗಿದೆ ಮತ್ತು ವಿಮಾನ ಸಂಚಾರಕ್ಕೂ ಅಡ್ಡಿಪಡಿಸಬಹುದು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯ ಅಂತಿಮ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದ್ದ ಹಲವು ವಿರೋಧ ಪಕ್ಷದ ನಾಯಕರು ಭಾಗವಹಿಸಲು ಸಾಧ್ಯವಾಗದಿರಬಹುದು.

ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ಟ್ವಿಟ್ ಮಾಡಿದ್ದು, “ನಿರಂತರವಾಗಿ ಹಿಮ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಾಗಿದೆ ಹಾಗಾಗಿ ಶ್ರೀನಗರಕ್ಕೆ ಬರುವ ಎಲ್ಲಾ ವಿಮಾನಗಳು ವಿಳಂಬವಾಗಿವೆ” ಎಂದು ಶ್ರೀನಗರದ ವಿಮಾನ ನಿಲ್ದಾಣದ ನಿರ್ದೇಶಕ ಕುಲದೀಪ್ ಸಿಂಗ್ ರಿಷಿ ತಿಳಿಸಿದ್ದಾರೆ.

ವಿಸ್ತಾರಾ ಏರ್‌ಲೈನ್ಸ್ ದೆಹಲಿಯಿಂದ ಶ್ರೀನಗರಕ್ಕೆ ಹೊರಡುವ ತನ್ನ ಎರಡೂ ವಿಮಾನಗಳನ್ನು ದಿನದ ಮಟ್ಟಿಗೆ ರದ್ದುಗೊಳಿಸಿದೆ.

ಸಮಾರೋಪ ಸಮಾರಂಭವು ಶ್ರೀನಗರದ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಲಿದ್ದು, ನಂತರ ಕ್ರೀಡಾಂಗಣದಲ್ಲಿ ರ್ಯಾಲಿ ನಡೆಯಲಿದೆ.

ಇದನ್ನೂ ಓದಿ: ಜಮ್ಮು-ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ; ಜ. 30ಕ್ಕೆ ಸಮಾರೋಪ ಕಾರ್ಯಕ್ರಮ

ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಸಮಾರಂಭದಲ್ಲಿ ಭಾಗಿಯಾಗುತ್ತಿಲ್ಲ.

ರಾಹುಲ್ ಗಾಂಧಿ ಅವರು, ಭಾನುವಾರ ಲಾಲ್ ಚೌಕ್ ಪ್ರದೇಶದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ “ಪಾದಯಾತ್ರೆ” ಮುಕ್ತಾಯಗೊಳಿಸಿದರು. ಆದರೆ ಶ್ರೀನಗರದಲ್ಲಿ ಹಿಮಪಾತವಾಗಿರುವುದರಿಂದ, ಸೋಮವಾರ ನಡೆಯುವ ಅಧಿಕೃತ ಸಮಾರೋಪ ಕಾರ್ಯಕ್ರಮದ ಉತ್ಸಾಹವನ್ನು ಕುಗ್ಗಿಸುಬಹುದು.

ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿಪಿಐ, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷಗಳು ಈ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದೃಢಪಡಿಸಿವೆ.

ಕನ್ಯಾಕುಮಾರಿಯಿಂದ ಕಾಶ್ಮೀರ ಯಾತ್ರೆಯು ದೇಶದ ದಕ್ಷಿಣ ತುದಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭವಾಯಿತು ಮತ್ತು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ 3,970 ಕಿಮೀ ಕ್ರಮಿಸಿದ ನಂತರ ಶ್ರೀನಗರದಲ್ಲಿ ಇಂದು ಐತಿಹಾಸಿಕ ಯಾತ್ರೆಯು ಕೊನೆಗೊಳ್ಳುತ್ತಿದೆ.

ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಕಾರ್ನರ್ ಸಭೆಗಳು ಮತ್ತು 13 ಪತ್ರಿಕಾಗೋಷ್ಠಿಗಳನ್ನು ನಡೆಸಿದರು. ಅವರು 275 ಕ್ಕೂ ಹೆಚ್ಚು ಯಾತ್ರೆ ಮಾಡುತ್ತಲೇ ಸಂವಹನ ಮಾಡಿದ್ದಾರೆ ಮತ್ತು 100 ಕ್ಕೂ ಹೆಚ್ಚು ಒಂದೆಡೆ ಕುಳಿತು ಸಂವಹನ ಮಾಡಿದ್ದಾರೆ. ಜನರ ಕಷ್ಟ ಆಲಿಸುವುದರ ಜೊತೆಗೆ ಭಾರತ ಹೇಗೆ ಒಂದಾಗ ಬೇಕು ಎನ್ನುವ ಬಗ್ಗೆ ಮಾರತನಾಡಿದ್ದಾರೆ.

ಶ್ರೀನಗರದ ಶೇರ್-ಐ-ಕಾಶ್ಮೀರ ಕ್ರಿಕೆಟ್ ಸ್ಟೇಡಿಯಂನಲ್ಲಿ ರ್ಯಾಲಿ ನಡೆಯುವ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಈ ವೇಳೆ ಭಾರತ್ ಜೋಡೋ ಯಾತ್ರೆಯ ಸ್ಮಾರಕವನ್ನು ಅನಾವರಣಗೊಳಿಸಲಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯು ದಕ್ಷಿಣದಿಂದ ಉತ್ತರಕ್ಕೆ ಸಾಗಿ ಬಂದಿದೆ. ಇದು ದೇಶಾದ್ಯಂತ ಪರಿಣಾಮ ಬೀರಿದೆ ಮತ್ತು ಈ ಯಾತ್ರೆಯು ದೇಶಕ್ಕೆ ಪರ್ಯಾಯ ದೃಷ್ಟಿಕೋನವನ್ನು ನೀಡಿದೆ ಎಂದು ಅವರು ಪ್ರತಿಪಾದಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಾರ್ವಜನಿಕರ ಮೇಲೆ ಸವಾರಿ ಮಾಡಲು ಬಿಡುವುದಿಲ್ಲ..’; ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಸುಪ್ರೀಂ ಕಿಡಿ

0
"ಸಾರ್ವಜನಿಕರ ಮೇಲೆ ಸವಾರಿ ಮಾಡಲು ನಾವು ಬಿಡುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದ್ದು, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಎದುರಿಸಲು ತಾವು ಸಕ್ರಿಯರಾಗಿರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಳಿಗೆ ಸೂಚನೆ ನೀಡಿದೆ. 1945ರ...