Homeಕರ್ನಾಟಕರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

ರೈತ ಮುಖಂಡ ಮಾರುತಿ ಮಾನ್ಪಡೆ ನಿಧನಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವರ ಸಂತಾಪ

- Advertisement -
- Advertisement -

ಹಿರಿಯ ರೈತ ಹೋರಾಟಗಾರ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರಾದ ಮಾರುತಿ ಮಾನ್ಪಡೆಯವರು (65) ಇಂದು ನಿಧನರಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ಜನರು ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರೈತ ಹಾಗೂ ಕಾರ್ಮಿಕ ಚಳವಳಿಗಳ ನಾಯಕ ಮತ್ತು ಪ್ರಜಾಪ್ರಭುತ್ವವಾದಿ ಹೋರಾಟ ಪರಂಪರೆಯ ಹಿರಿಯ ವ್ಯಕ್ತಿತ್ವವಾದ ಮಾರುತಿ ಮಾನ್ಪಡೆಯವರು ನಮ್ಮನ್ನು ಅಗಲಿರುವುದು ಅತೀವ ದುಃಖದ ಸಂಗತಿ” ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ದಿಟ್ಟ ರೈತ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

“ಮಾರುತಿ ಅವರು ಜನಪರ ಹೋರಾಟಗಳನ್ನೇ ಉಸಿರಾಗಿಸಿಕೊಂಡಿದ್ದವರು. ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನೇ ಪತನಗೊಳಿಸುವ ಆಕ್ರಮಣಕಾರಿ ಆಡಳಿತ ವ್ಯವಸ್ಥೆ ದೇಶದಲ್ಲಿ ಜಾರಿಗೊಳ್ಳುತ್ತಿರುವ ಹೊತ್ತಿನಲ್ಲೇ ಮಾನ್ಪಡೆಯವರು ನಮ್ಮನ್ನೆಲ್ಲಾ ತೊರೆದಿರುವುದು ಚಳವಳಿಗಳ ಪರಂಪರೆಗೆ ತುಂಬಲಾರದ ನಷ್ಟವಾಗಿದೆ” ಎಂದು ಅವರು ಹೇಳಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ, “ಹಿರಿಯ ಜನಪರ ಹೋರಾಟಗಾರರೂ, ಕಮ್ಯೂನಿಸ್ಟ್ ನಾಯಕರೂ ಆದ ಮಾರುತಿ ಮಾನ್ಪಡೆ ಅವರ ನಿಧನ ಅತೀವ ದುಃಖ ತಂದಿದೆ. ಕರ್ನಾಟಕ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಪ್ರಕೃತಿ ಚಿರಶಾಂತಿಯನ್ನು ಕರುಣಿಸಲಿ” ಎಂದು ಹೇಳಿದ್ದಾರೆ.

ತಮ್ಮ ಪಕ್ಷದ ನಾಯಕನ ಅಗಲಿಕೆಗೆ ಸಿಪಿಎಂ ಕರ್ನಾಟಕ ಸಂತಾಪ ಸೂಚಿಸಿದೆ.

ಸಿಪಿಐ(ಎಂ) ನಾಯಕರು ರೈತ ಮುಖಂಡರುಕಾಂ.ಮಾರುತಿ ಮಾನ್ಪಡೆಯವರಿಗೆ ಸಿಪಿಐ(ಎಂ) ಶ್ರದ್ಧಾಂಜಲಿಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಯ ರಾಜ್ಯ…

Posted by CPIM Karnataka on Tuesday, October 20, 2020

ಕಾಂಗ್ರೆಸ್‌ ನಾಯಕ ಪ್ರಿಯಾಂಕ್ ಖರ್ಗೆ, “4 ದಶಕಗಳಿಂದ ರೈತ ಹಾಗೂ ಕಾರ್ಮಿಕ ಪರ ಹೋರಾಟಗಳಲ್ಲಿ ತೊಡಗಿಕೊಂಡಿದ್ದ, ಪ್ರಾಂತ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರು ಹಾಗೂ ಹಿರಿಯ ಹೋರಾಟಗಾರರಾದ ಮಾರುತಿ ಮಾನ್ಪಡೆ ಅವರ ನಿಧನದಿಂದ ರೈತ ಪರ ಧ್ವನಿಯೊಂದನ್ನು ಕಳೆದುಕೊಂಡಿದ್ದೇವೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು, ಭಗವಂತನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ”

ಮಾಜಿ ಸಚಿವ ಶರಣ್ ಪ್ರಕಾಶ್ ಪಾಟಿಲ್, “ರೈತಾಪಿ ವರ್ಗ, ಕೃಷಿ ಮತ್ತು ಕೂಲಿ ಕಾರ್ಮಿಕರ ಸಮಸ್ಯೆಗಳ ಹೋರಾಟದಲ್ಲಿ ಮುಂಚೂಣಿಯಲ್ಲಿರುತಿದ್ದ ಹಿರಿಯ ಮುಖಂಡ ಮಾರುತಿ ಮಾನ್ಪಡೆ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾರ್ಮಿಕ,ರೈತ ಹಾಗೂ ಶೋಷಿತ ವರ್ಗಗಳ ಪರವಾಗಿ ಸದಾ ಧ್ವನಿಯೆತ್ತುತ್ತಾ.., ಪ್ರಜಾಪ್ರಭುತ್ವದ ಉಳಿವಿಗಾಗಿ ಅವಿರತ ಹೋರಾಟ ನಡೆಸುತ್ತಿದ್ದ ಕಾರ್ಮಿಕ…

Posted by Dinesh Gundu Rao on Tuesday, October 20, 2020

ಮಾರುತಿ ಮಾನ್ಪಡೆ ಅವರ ನಿಧನ ಕರ್ನಾಟಕದ ರಾಜಕಾರಣ ಮತ್ತು ಜನಪರ ಚಳವಳಿ ಬದ್ಧತೆಯ ನಾಯಕನೋರ್ವನನ್ನು ಕಳೆದುಕೊಂಡಂತಾಗಿದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಕಲಬುರ್ಗಿಯ ಬಿಜೆಪಿ ಸಂಸದ ಉಮೇಶ್ ಜಾದವ್ ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, “ರಾಜ್ಯದ ರೈತ ಹೋರಾಟಗಾರರು ಹಾಗೂ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾಗಿದ್ದ ಶ್ರೀ ಮಾರುತಿ ಮಾನ್ಪಡೆ ಅವರು ಕೋವಿಡ್‌ನಿಂದಾಗಿ ನಿಧನರಾದ ಸುದ್ಧಿ ತಿಳಿದು ಆಘಾತವಾಯಿತು.ರೈತಪರ ಧ್ವನಿಯಾಗಿದ್ದ ಅವರ ಅಗಲಿಕೆಯಿಂದ ನಾಡಿಗೆ ಅಪಾರ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಖಃ ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ” ಎಂದು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಕರ್ನಾಟಕ ನವನಿರ್ಮಾಣ ಸೇನೆ ಅಗಲಿದ ನಾಯಕನಿಗೆ ಶ್ರದ್ದಾಂಜಲಿ ಅರ್ಪಿಸಿದೆ.

ಇಷ್ಟೇ ಅಲ್ಲದೆ ರಾಜ್ಯದಾದ್ಯಂತ ಹಲವಾರು ಸಂಘಟನೆಗಳು ಹಿರಿಯ ರೈತ ಹೋರಾಟಗಾರನ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ದಾಂಜಲಿ ಸಭೆ ನಡೆಸಿದೆ. ಮಾನ್ಪಡೆಯವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಕಲಬುರ್ಗಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...