Homeಮುಖಪುಟರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ - ರೈತ ಒಕ್ಕೂಟ

ರೈತ ಚಳುವಳಿಯನ್ನು ಕೆಣಕುವ ಸಂಚು ಈಗ ಬಹಿರಂಗವಾಗಿದೆ – ರೈತ ಒಕ್ಕೂಟ

"ರೈತರ ಚಳವಳಿಯನ್ನು 'ಹಿಂಸಾತ್ಮಕ' ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ"

- Advertisement -
- Advertisement -

“ಕಳೆದ 7 ತಿಂಗಳ ಶಾಂತಿಯುತ ರೈತ ಚಳವಳಿಯನ್ನು ಕೆಣಕುವ ಸಂಚು ಈಗ ದೇಶದ ಮುಂದೆ ಬಹಿರಂಗವಾಗಿದೆ. ಎಸ್ ಸತ್ನಾಮ್ ಸಿಂಗ್ ಪನ್ನು ನೇತೃತ್ವದ ದೀಪ್ ಸಿಧು ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯಂತಹ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳ ಜೊತೆಗೆ ಶಾಮೀಲಾಗಿ ಕೇಂದ್ರ ಸರ್ಕಾರವು ಈ ನ್ಯಾಯಯುತ ರೈತ ಹೋರಾಟವನ್ನು ಹಿಂಸಾತ್ಮಕಗೊಳಿಸಿತು. ಕೆಂಪು ಕೋಟೆ ಮತ್ತು ದೆಹಲಿಯ ಇತರ ಭಾಗಗಳಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೂ ನಮಗೂ ಸಂಬಂಧವಿಲ್ಲ ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

“ದೇಶದ ಮುಂದೆ ರೈತ ಹೋರಾಟವನ್ನು ಬೇರೆಯದೇ ರೀತಿಯಲ್ಲಿ ತೋರಿಸಲು ಸರ್ಕಾರ ಪ್ರಯತ್ನ ಮಾಡಿತು. ವಾಸ್ತವವಾಗಿ ರೈತರ ಮೆರವಣಿಗೆ ಶಾಂತಿಯುತವಾಗಿತ್ತು ಮತ್ತು ಸರಿಯಾದ ಮಾರ್ಗದಲ್ಲಿತ್ತು. ರಾಷ್ಟ್ರೀಯ ಚಿನ್ಹೆಗಳಿಗಾದ ಅವಮಾನವನ್ನು ರೈತರಾದ ನಾವು ಬಲವಾಗಿ ಖಂಡಿಸುತ್ತೇವೆ. ಹಾಗೆಂದು ರೈತರ ಚಳವಳಿಯನ್ನು ‘ಹಿಂಸಾತ್ಮಕ’ ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ನಮ್ಮೊಂದಿಗೆ ಸಂಬಂಧವಿಲ್ಲದ ಕೆಲವು ಸಮಾಜ ವಿರೋಧಿ ವ್ಯಕ್ತಿ ಮತ್ತು ಸಂಘಟನೆಗಳು ರೈತರ ಹೆಸರಿನಲ್ಲಿ ಹಿಂಸಾಚಾರವನ್ನು ಮಾಡಿವೆ. ನಮ್ಮ ನೇತೃತ್ವದಲ್ಲಿ ಹೊರಟಿದ್ದ ಎಲ್ಲಾ ಗಡಿಗಳಲ್ಲಿನ ರೈತರು ತಮ್ಮ ಮೆರವಣಿಗೆಗಳನ್ನು ನಿನ್ನೆ ಶಾಂತಿಯುತ ರೀತಿಯಲ್ಲಿ ಪೂರ್ಣಗೊಳಿಸಿ ತಮ್ಮ ಮೂಲ ಸ್ಥಳವನ್ನು ಯಾವುದೇ ಅಡ್ಡಿ ಆತಂಕಗಳಿಲ್ಲದೆ, ಹಿಂಸೆಯಿಲ್ಲದೆ ತಲುಪಿದ್ದಾರೆ” ಎಂದು ವಿವರಿಸಲಾಗಿದೆ.

ಇದನ್ನೂ ಓದಿ: ಸರ್ಕಾರ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಸೇರಿ ಪಿತೂರಿ ನಡೆಸಿವೆ: ರೈತ ಒಕ್ಕೂಟ ಆರೋಪ

“ರೈತ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಪೊಲೀಸ್ ಮತ್ತು ಇತರ ಏಜೆನ್ಸಿಗಳನ್ನು ಬಳಸಿಕೊಂಡು ಈ ರೈತ ಹೋರಾಟವನ್ನು ಮಣಿಸಲು ಕೇಂದ್ರ ಸರ್ಕಾರ ಮಾಡಿದ ಪ್ರಯತ್ನಗಳು ಈಗಾಗಲೇ ಬಹಿರಂಗಗೊಂಡಿದೆ. ಮತ್ತು ಇನ್ನಷ್ಟೂ ಬಟಾಬಯಲಾಗುತ್ತದೆ. ಹಿಂಸಾಚಾರಕ್ಕೂ ನಿನ್ನೆ ಬಂಧಿಸಲ್ಪಟ್ಟ ಹಲವು ರೈತರಿಗೂ ಸಂಬಂಧವೇ ಇಲ್ಲ. ಹಾಗಾಗಿ ಬಂಧಿಸಲ್ಪಟ್ಟಿರುವ ಎಲ್ಲ ನಿಜವಾದ ರೈತ ಪ್ರತಿಭಟನಾಕಾರರು ಮತ್ತು ಬೆಂಬಲಿಗರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಟ್ರಾಕ್ಟರುಗಳು ಮತ್ತು ಇತರ ವಾಹನಗಳನ್ನು ಹಾನಿ ಮಾಡಲು ಪೊಲೀಸರು ಪ್ರಯತ್ನಿಸಿರುವುದನ್ನು ಕೂಡಾ ನಾವು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.

ರಾಷ್ಟ್ರೀಯ ಚಿಹ್ನೆಗಳನ್ನು ಕೀಳಾಗಿ ಮತ್ತು ಅಪವಿತ್ರಗೊಳಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಿಸುತ್ತದೆ. ರೈತರು ಈ ದೇಶದ ದೊಡ್ಡ ರಾಷ್ಟ್ರೀಯವಾದಿಗಳು. ರೈತರೇ ಈ ರಾಷ್ಟ್ರದ ನಿಜವಾದ ರಕ್ಷಕರು. ರೈತರು ಮತ್ತು ರಾಷ್ಟ್ರೀಯವಾದ ಬೇರೆ ಬೇರೆ ಅಲ್ಲ ಎಂಬುದನ್ನು ಮತ್ತೆ ಮತ್ತೆ ಹೇಳಲು ಬಯಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೂ ನಿನ್ನೆ ನಡೆದ ಕೆಲವು ವಿಷಾದನೀಯ ಘಟನೆಗಳಿಗೆ ಪ್ರತಿಭಟನೆಯ ನೇತೃತ್ವ ವಹಿಸಿಕೊಂಡ ಸಂಯುಕ್ತ ಕಿಸಾನ್ ಮೋರ್ಚ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಳ್ಳುತ್ತದೆ. ತನ್ನದಲ್ಲದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚವು ಫೆಬ್ರವರಿ 1 ರಂದು ನಿಗದಿಯಾಗಿದ್ದ ಸಂಸತ್ ಛಲೋ ಕಾರ್ಯಕ್ರಮವನ್ನು ಮುಂದೂಡಲು ನಿರ್ಧರಿಸಿದೆ. ಬದಲಾಗಿ, ಜನವರಿ 30 ರಂದು, ಗಾಂಧೀಜಿಯವರ ಹುತಾತ್ಮ ದಿನದಂದು, ಶಾಂತಿ ಮತ್ತು ಅಹಿಂಸೆಯನ್ನು ಸಾರಲು ದೇಶಾದ್ಯಂತ ರೈತರು ಒಂದು ದಿನದ ಉಪವಾಸ ಆಚರಿಸಲಿದ್ದೇವೆ ಎಂದು ಹೇಳಿದರು.

“ದೀಪ್ ಸಿದ್ದು ಅವರಂತಹ ಕುತ್ಸಿತ ವ್ಯಕ್ತಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಬೇಕು” ಎಂದು ಸಂಯುಕ್ತ ಕಿಸಾನ್ ಮೋರ್ಚ್ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ದೆಹಲಿಯಲ್ಲಿ ಮಾತ್ರವಲ್ಲದೆ ರೈತ ಸಂಘಟನೆಗಳ ರೈತ ಗಣರಾಜ್ಯೋತ್ಸವ ಪೆರೇಡ್ ಅನ್ನು ಅನೇಕ ರಾಜ್ಯಗಳಲ್ಲಿ ನಡೆಸಲಾಯಿತು. ಬಿಹಾರ, ಪಾಟ್ನಾ ಸೇರಿದಂತೆ ದೇಶದ ಅನೇಕ ಸ್ಥಳಗಳಲ್ಲಿ ರೈತ ಗಣರಾಜ್ಯೋತ್ಸವವನ್ನು ರೈತರು ಉತ್ಸಾಹದಿಂದ ಆಚರಿಸಿದರು. ಮಧ್ಯಪ್ರದೇಶದಲ್ಲಂತೂ ರೈತರು ಈ ಅದ್ಭುತ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಿದ್ದನ್ನು ದೇಶದ ರೈತರು ಗಮನಿಸಿದ್ದಾರೆ. ದೆಹಲಿಯಲ್ಲಿ ನಡೆದ ರೈತ ಮೆರವಣಿಗೆಯಲ್ಲಿ ಎನ್‌ಎಪಿಎಂನ ಕಾರ್ಮಿಕರು ಸೇರಿಕೊಂಡರು. ಮುಂಬೈನ ಆಜಾದ್ ಮೈದಾನದಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನಲ್ಲಿ ನಡೆದ ಅಭೂತಪೂರ್ವ ರೈತರ ಪೆರೇಡ್‌ನಲ್ಲಿ ಸಾವಿರಾರು ರೈತರು ಭಾಗವಹಿಸಿದ್ದರು. ಇವೆಲ್ಲವೂ ಸಂಪೂರ್ಣವಾಗಿ ಶಾಂತಿಯುತವಾಗಿತ್ತು. ರೈತರ ಗಣರಾಜ್ಯ ಮೆರವಣಿಗೆಯಲ್ಲಿ ತಮಿಳುನಾಡು, ಕೇರಳ, ಹೈದರಾಬಾದ್, ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ, ಛತ್ತೀಸ್ ಘಡ್ ಮತ್ತು ಉತ್ತರ ಪ್ರದೇಶದ ರೈತರು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ಸಂಘಟಿತ ರೈತರ ಇತರ ಯೋಜನೆಗಳು ಮತ್ತು ಚಟುವಟಿಕೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ನಮ್ಮ ರೈತ ಚಳುವಳಿ ಎಂದೆಂದಿಗೂ ಶಾಂತಿಯುತವಾಗಿ ಮುಂದುವರೆಯುತ್ತದೆ ಎಂಬುದನ್ನು ನಾವು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇವೆ. ದೇಶದ ರೈತರು ಬಹಳ ಆತ್ಮವಿಶ್ವಾಸ ಮತ್ತು ಶಾಂತಿಯುತವಾಗಿ ಈಗಿನ ಕೇಂದ್ರ ಸರ್ಕಾರದೊಂದಿಗೆ ತಮ್ಮ ಭಿನ್ನಾಭಿಪ್ರಾಯವನ್ನು ಮಂಡಿಸುತ್ತಾರೆ. ಜನವರಿ 26 ರಂದು ನಡೆದ ರೈತರ ಪೆರೇಡ್ ಗೆ ದೇಶದ ನಾಗರಿಕರು ವ್ಯಕ್ತಪಡಿಸಿದ ಪ್ರೀತಿಗೆ ರೈತ ಸಮುದಾಯ ಅಭಾರಿಯಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅನುವಾದ : ನವೀನ್ ಸೂರಿಂಜೆ


ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...