Homeಕರ್ನಾಟಕಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದ್ದು ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ: ಡಾ. ರಾಜಣ್ಣ ಜಿ

- Advertisement -
- Advertisement -

ಸಂವಿಧಾನದ ಆಶಯ ಸರ್ವರಿಗೂ ದಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ ಡಾ. ರಾಜಣ್ಣ.ಜಿ ಹೇಳಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ಮಂಗಸಂದ್ರದಲ್ಲಿ ಸಮಾಜಕಾರ್ಯ ವಿಭಾಗ ಹಾಗೂ ಸತ್ವ ಸಂಸ್ಥೆ, ಚಿಂತಾಮಣಿ ಮತ್ತು ಹೊಸ ಚಿಗುರು ಸಂಸ್ಥೆ, ಮಾಲೂರು ಸಹಯೋಗದ ಮೇರೆಗೆ  ಶನಿವಾರದಂದು “ಸಂವಿಧಾನ ಸಂಭ್ರಮೋತ್ಸವ – ಸರ್ವರಿಗಾಗಿ ಸಂವಿಧಾನದ ಕುರಿತು ಅರಿವು” ಎಂಬ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಕುರಿತು ಬೊಮ್ಮೇಕಲ್ಲು ವೆಂಕಟೇಶ್ ಮಾತನಾಡಿ, ಸಂವಿಧಾನ ಹಾಗೂ ಪ್ರಸ್ತುತತೆಯ ವಿಷಯದ ಕುರಿತು ಸುಧೀರ್ಘವಾಗಿ ವಿಶ್ಲೇಷಿಸಿದರು. ಸಂವಿಧಾನವೆಂಬುದು ಜನಪದವಾಗಬೇಕು, ಜನರು ಸಂವಿಧಾನವನ್ನು ಸಂಭ್ರಮಿಸಬೇಕು ಎಂದು ಹೇಳುವ ಮೂಲಕ ಬುದ್ಧ, ಬಸವಣ್ಣ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ಗಾಂಧಿ, ಕುವೆಂಪು ಒಳಗೊಂಡಂತ ದೇಶದ ಬಹು ಸಂಸ್ಕೃತಿಯನ್ನು ಸಂವಿಧಾನ ಎತ್ತಿ ಹಿಡಿದಿರುವುದು ನಮ್ಮ ಸಂವಿಧಾನದ ವೈಶಿಷ್ಟ್ಯವಾಗಿದೆ. ಈ ಸಂವಿಧಾನವನ್ನು ಉಳಿಸುವ, ಅಳವಡಿಸಿಕೊಳ್ಳುವ ಜವಾಬ್ದಾರಿ ಎಲ್ಲ ಭಾರತೀಯರ ಮೇಲಿದೆ ಎಂಬುದನ್ನು ತಿಳಿಸಿದರು. ಬಹುತೇಕ ಇತಿಹಾಸವನ್ನು ತಿಳಿಸಲಾಗಿದೆ ಹಾಗೂ ನೈಜ ಇತಿಹಾಸವುಳ್ಳ ಪಠ್ಯಗಳು ಮಕ್ಕಳಿಗೆ ತಲುಪಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂವಿಧಾನವೆಂಬುದು ಬರೀ ಒಂದು ವರ್ಗಕ್ಕೆ ಅಥವಾ ಒಂದು ಧರ್ಮಕ್ಕೆ ಸೀಮಿತವಾಗದೆ ಭಾರತದ ಒಟ್ಟು ಜನಸಾಮಾನ್ಯರ ಬದುಕಿನ ಒಳಿತಿಗಾಗಿ ಸಂವಿಧಾನವನ್ನು ರಚಿಸಿದರು ಎಂಬುದನ್ನು ಹೇಳುವ ಮೂಲಕ ಇಲ್ಲಿನ ಜನರು ಎದುರಿಸುತ್ತಿರುವ ಅಸ್ಪೃಷ್ಯತೆ, ಬಡತನ, ಅಸಮಾನತೆ ಅನ್ಯಾಯ ನಿವಾರಿಸಲು ನಮಗೆ ಇರುವ ಅಸ್ತ್ರ ಸಂವಿಧಾನ ಒಂದೇ ಎಂದು ತಮ್ಮ ವಿಚಾರವನ್ನು ಮಂಡಿಸಿದರು.

ಜೊತೆಗೆ ಬೇರು ಬೆವರು ಕಲಾ ಬಳಗದ ವತಿಯಿಂದ ಸೋರಪಲ್ಲಿ ಚಂದ್ರಶೇಖರ್ ರವರು ತಮ್ಮ ತಂಡದ ನವೀನ್, ಚಲಪತಿ ಹಾಗೂ ಪ್ರದೀಪ್ ರವರ ಜೊತೆಗೂಡಿ “ಭಾರತ ಕಥಾ” ಎಂಬ ವಿಷಯದ ಕುರಿತು ಹಾಡು ಮತ್ತು ಕಥೆಯ ಮೂಲಕ ಸಂವಿಧಾನವನ್ನು, ಭಾರತದ ಮೂಲ ಇತಿಹಾಸವನ್ನು ಒಳಗೊಂಡಂತೆ ಭಾರತದ ಸಂವಿಧಾನದ ರಚನೆಯ ಕುರಿತು ಕಥೆಯ ಶೈಲಿಯಲ್ಲಿ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಪ್ರಸ್ತುತಪಡಿಸಿದರು.

ಭಾರತವೆಂದರೆ ಕೇವಲ ಕಲ್ಲಲ್ಲ, ಮಣ್ಣಲ್ಲ, ಬೆಟ್ಟ-ಗುಡ್ಡ ಮಾತ್ರವಲ್ಲ ಭಾರತವೆಂದರೆ ಇಲ್ಲಿ ವಾಸಿಸುತ್ತಿರುವ ಜನರು ಎಂಬ ತೆಲುಗಿನ ಒಬ್ಬ ಮಹಾಕವಿ ಹೇಳಿರುವ ಮಾತನ್ನು ಒಳಗೊಂಡಂತೆ ವಿವಿಧತೆಯಲ್ಲಿ ಏಕತೆಯನ್ನು ಎತ್ತಿ ಹಿಡಿಯುವ ದೇಶದಲ್ಲಿ ವೈವಿಧ್ಯತೆಯನ್ನು ಸವಿಯುವ ಜೊತೆಗೆ ನಾವೆಲ್ಲರೂ ಸಾಮರಸ್ಯ, ಸಹಬಾಳ್ವೆಯಿಂದ ಬದುಕಬೇಕಿದೆ ಇತರರನ್ನು ಬದುಕಲು ಬಿಡಬೇಕಿದೆ ಎಂಬುದನ್ನು ಭಾರತ ಕಥಾ ಸ್ಪಷ್ಟಪಡಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ನಿರ್ದೇಶಕರು ಆದಂತಹ ಪ್ರೊ. ಕುಮುದ ಡಿ ರವರು ಕಾರ್ಯಕ್ರಮದ ಪ್ರಾರಂಭದಿಂದ ಕೊನೆಯ ತನಕ ಉಪಸ್ಥಿತಿಯಲ್ಲಿದ್ದು, ಕಾರ್ಯಕ್ರಮದ ಎಲ್ಲಾ ಚಟುವಟಿಕೆಗಳನ್ನು ಅವಲೋಕಿಸಿ “ಭಾರತ ಕಥಾ” ಪ್ರಸ್ತುತ ದಿನಮಾನದ ಕುರಿತು ಇಂದಿನ ವಿದ್ಯಾರ್ಥಿಗಳಿಗೆ ಮಹತ್ತರ ಸಂದೇಶವನ್ನು ನೀಡಿದೆ ಎಂದು ವ್ಯಕ್ತಪಡಿಸಿದರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ಸಂಕೇತ್ ರಾವ್ ಸಿ.ಎನ್, ಐಶ್ವರ್ಯ ವಿ ಹಾಗೂ ಭವಾನಿ ಕೆ. ಎಂ ರವರನ್ನು ಪ್ರಶಂಸಿಸುತ್ತ ಇಂತಹ ಕಾರ್ಯಕ್ರಮಗಳು ಇನ್ನಷ್ಟು ವಿದ್ಯಾರ್ಥಿಗಳಿಗೆ ತಲುಪುವಂತಹ ಕಾರ್ಯವಾಗಬೇಕು ಎಂದು ತಮ್ಮ ಅಧ್ಯಕ್ಷತೆ ನುಡಿಗಳಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಕವಿಗಳು ಹಾಗೂ ಕನ್ನಡ ಉಪನ್ಯಾಸಕರಾದಂತಹ ಬೊಮ್ಮೇಕಲ್ಲು ವೆಂಕಟೇಶ್ ಹಾಗೂ ಬೇರು ಬೆವರು ಕಲಾ ಬಳಗದ ಸೋರಪಲ್ಲಿ ಚಂದ್ರಶೇಖರ್, ಸಮಾಜಕಾರ್ಯ ವಿಭಾಗದ ಸಂಯೋಜಕರು ಆದ ಡಾ. ಗುಂಡಪ್ಪ ದೇವಿಕೇರಿ, ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿದಂತಹ ಸತ್ವ ವ್ಯಸನ ಮತ್ತು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ವ್ಯವಸ್ಥಾಪಕ ಡಾ. ಪಾರ್ವತಿ, ಹಾಗೂ ಹೊಸ ಚಿಗುರು ಸಂಸ್ಥೆಯ ಅಧ್ಯಕ್ಷ ಹರೀಶ್ ಎಸ್ ಎಂ, ಬೆಂ. ಉ. ವಿ. ವಿ ಸ್ನಾತಕೋತರ ಕೇಂದ್ರದ ವಿವಿಧ ವಿಭಾಗದ ಬೋಧಕರು ಮತ್ತು ಬೋಧಕೇತರ ವರ್ಗದವರು ಹಾಗೂ ಹಲವಾರು ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಗಾಜಾ: 183 ಪ್ಯಾಲೆಸ್ಟೀನಿಯನ್ನರು, 3 ಇಸ್ರೇಲಿ ಕೈದಿಗಳ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...