HomeUncategorizedವಿವಾದಿತ ಗೋಹತ್ಯೆ ನಿಷೇಧ ಕಾನೂನು ಜನವರಿ 18 ರಿಂದ ಜಾರಿ

ವಿವಾದಿತ ಗೋಹತ್ಯೆ ನಿಷೇಧ ಕಾನೂನು ಜನವರಿ 18 ರಿಂದ ಜಾರಿ

- Advertisement -
- Advertisement -

ರಾಜ್ಯ ಸರ್ಕಾರ ಈಗಾಗಲೇ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ(ಗೋಹತ್ಯೆ ನಿಷೇಧ ಮಸೂದೆ) ಮತ್ತು ಸಂರಕ್ಷಣಾ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದೆ. ಈ ಕಾನೂನು ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದ್ದು, ಈ ಮೂಲಕ ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.

ಪಶು ಸಂಗೋಪನಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಶನಿವಾರ ಆದೇಶ ಹೊರಡಿಸಿ, ರಾಜ್ಯಪತ್ರವನ್ನು ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬರಲಿದ್ದು, ನಿಯಮಗಳನ್ನು ರೂಪಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಶೀಘ್ರದಲ್ಲೆ ಅವುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ಮಸೂದೆಗೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

ಜಾನುವಾರು ಸಾಗಾಣಿಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಾಣೆ ಮಾಡುವವರು ತಮ್ಮ ಸಂಪೂರ್ಣ ವಿಳಾಸ, ಆಧಾರ್ ಸಂಖ್ಯೆ, ಮೊಬೈಲ್‍ಸಂಖ್ಯೆ, ಸಾಗಾಣೆ ಉದ್ದೇಶ, ಜಾನುವಾರುಗಳ ವಯಸ್ಸು ಸೇರಿದಂತೆ ದೃಢೀಕರಣ ನೀಡಬೇಕು ಎಂದು ಸೂಚಿಸಲಾಗಿದೆ.

ಪೊಲೀಸ್ ಇಲಾಖೆಯು ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್‍ಜಿಒ) ಹಾಗೂ ಪ್ರಾಣಿ ಕಲ್ಯಾಣ ಮಂಡಳಿಯ ಜೊತೆಗೆ ಕೈಜೋಡಿಸಲು ಹಾಗೂ ಎಲ್ಲ ಹಂತಗಳಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಅಲ್ಲದೆ, ಗೋಹತ್ಯೆ, ಅಕ್ರಮ ಸಾಗಾಟದ ಮೇಲೆ ಪೊಲೀಸ್ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆ ಹೆಚ್ಚು ನಿಗಾವಹಿಸಬೇಕು ಎಂದು ಪ್ರಭು ಚೌಹಾಣ್ ಹೇಳಿದ್ದಾರೆ.

ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಜಿಲ್ಲೆ, ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ಮನವಿ ಮಾಡುತ್ತೇನೆ ಎಂದು ಪ್ರಭು ಚೌಹಾಣ್ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ – ಶೃಂಗೇರಿಯಲ್ಲಿ ದಾಖಲಾದ ಮೊದಲ ಪ್ರಕರಣವೆ ಸುಳ್ಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...