Homeಕರ್ನಾಟಕ‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

‘ಮತಾಂತರ ನಿಷೇಧ ಮಸೂದೆ’ ವಿಧಾನಸಭೆಯಲ್ಲಿ ಪಾಸ್‌

- Advertisement -
- Advertisement -

ವಿರೋಧ ಪಕ್ಷಗಳ ತೀವ್ರ ವಿರೋಧದ ನಡೆವೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು (ಧಾರ್ಮಿಕ ಸ್ವಾತಂತ್ರ್ಯದ ಕರ್ನಾಟಕ ಹಕ್ಕು ಮಸೂದೆ, 2021) ಧ್ವನಿಮತದ ಮೂಲಕ ಅಂಗೀಕಾರ ಮಾಡಲಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆಯ ಕುರಿತು ಗಂಭೀರ ಚರ್ಚೆಯಾಯಿತು. ಸದನದಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, “2001ರ ಜನಗಣತಿ ಪ್ರಕಾರ, ಹಿಂದೂಗಳು 83.86 ಇದ್ದರು. 2011ರಲ್ಲಿ 84 ರಷ್ಟಾಗಿದ್ದಾರೆ. ಅದೇ ರೀತಿ ಇಸ್ಲಾಂ ಧರ್ಮದವರು 2001ರಲ್ಲಿ 12.23 ಇತ್ತು 2011ರಲ್ಲಿ 12.92 ಹೆಚ್ಚಳ ಕಂಡಿದೆ. ಕ್ರಿಶ್ಚಿಯನ್ 2001ರಲ್ಲಿ 1.91 2011ರಲ್ಲಿ 1.87 ಆಗಿದೆ” ಎಂದು ತಿಳಿಸಿದರು.

ಕಾನೂನು ಸಚಿವ ಮಾಧುಸ್ವಾಮಿ ಕಾಂಗ್ರೆಸ್ ಅವಧಿಯಲ್ಲಿ ಈ ಮಸೂದೆ ಇನಿಷಿಯೇಟ್ ಆಗಿತ್ತು ಎಂದು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಸ್ಕೂಟನಿ ಕಮಿಷನ್ ಗೆ ಕಾನೂನು ಸಚಿವರು ಅಧ್ಯಕ್ಷರು ಆಗಿರುತ್ತಾರೆ. ಕಾನೂನು ಸಚಿವರು ಸ್ಕೂಟನಿ ಮಾಡಿ, ಶಾಸಕಾಂಗಕ್ಕೆ ಹೋಗಿ, ಅದು ಡ್ರಾಫ್ಟ್ ಆಗಿ, ನಂತರ ಮುಖ್ಯಮಂತ್ರಿ ಹತ್ತಿರ ಬಂದು, ಆಮೇಲೆ ಕ್ಯಾಬಿನೆಟ್ ಗೆ ಹೋಗುತ್ತದೆ. ಅಂದಿನ ಸರ್ಕಾರದಲ್ಲಿ ಜಯಚಂದ್ರ ಅವರು ಕಾನೂನು ಸಚಿವರಾಗಿದ್ದರು. ಅವರಿಗೆ ಫೋನ್ ಮಾಡ್ದೆ, ನಮ್ಮ ಕಾಲದಲ್ಲಿ ಅದು ಇನಿಷಿಯೇಟ್ ಆಗಿಲ್ಲ ಅಂತಾ ಹೇಳಿದರು. ವಿಷಯವನ್ನು ಪರಿಶೀಲನೆ ಮಾಡಿ ಅಂತಾ ಹೇಳಿದರೆ ಇನಿಷಿಯೇಷನ್ ಆಗಲ್ಲ. ಅದಕ್ಕೆ ಒಪ್ಪಿಗೆ ಕೊಟ್ಟರೆ ಮಾತ್ರ ಇನಿಷೇಷಯೇಷನ್ ಆಗುತ್ತೆ ಎಂದು ಸಿದ್ದರಾಮಯ್ಯ ಸದನದಲ್ಲಿ ವಿವರಿಸಿದರು.

ಉತ್ತರಪ್ರದೇಶ, ಗುಜರಾತ್, ಮಧ್ಯಪ್ರದೇಶ ಮತ್ತು ಕರ್ನಾಟಕ ರಾಜ್ಯಗಳ ಮತಾಂತರ ಮಸೂದೆಯ ಡ್ರಾಫ್ಟ್ ತಯಾರಿ ಮಾಡಿದ್ದು ಒಬ್ಬರೇ. ಒಂದು ರೀತಿಯಲ್ಲಿ ಇದು ಕಟ್ & ಪೇಸ್ಟ್ ಎಂದು ಆರೋಪಿಸಿದರು. ಮಸೂದೆಯ ಸೆಕ್ಷನ್ 3 ವಿವಾಹದ ನಿಬಂಧನೆಗಳನ್ನು ಹೇರಿದೆ. ಇದನ್ನು ಗುಜರಾತ್ ಹೈಕೋರ್ಟ್ ಪ್ರಶ್ನಿಸಿ ಗುಜರಾತ್ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಆ ಸೆಕ್ಷನ್ ತಡೆ ಹಿಡಿದಿದೆ. ಆದರೆ ಆ ಸೆಕ್ಷನ್ ನಮ್ಮ ಮಸೂದೆಯಲ್ಲಿ ಯಥಾವತ್ ಇದೆ ಎಂದು ಆರೋಪಿಸಿದರು.

ಕಾನೂನು ಆಯೋಗದ ಡ್ರಾಫ್ಟ್ನಲ್ಲೂ ಇದು ಇರಲಿಲ್ಲ. ಸೆಕ್ಷನ್ 5 ಮತ್ತು 12 ಕೂಡ ಯುಪಿ ಮಸೂದೆಯ ನಕಲುಗಳೇ ಆಗಿವೆ. ಕಾನೂನು ಆಯೋಗದ ಡ್ರಾಫ್ಟ್ಗೆ ಇವೆಲ್ಲ ವಿರುದ್ಧವಾಗಿವೆ. ಬಲವಂತದ, ಆಮಿಷದ ಮತಾಂತರ ತಪ್ಪು ಎಂದು ಸಂವಿಧಾನವೇ ಹೇಳಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ ಕೂಡ ಇದನ್ನು ಅಪರಾಧ ಎಂದು ಹೇಳುತ್ತದೆ. ಹೀಗಿರುವಾಗ ಮತಾಂತರ ತಡೆಗೆ ಪ್ರತ್ಯೇಕ ಕಾಯಿದೆ ಅಗತ್ಯವಿತ್ತೆ? ಎಂದು ಪ್ರಶ್ನಿಸಿದರು.

“ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಸರ್ಕಾರದ ನೂತನ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ವಿರೋಧ ಮಾಡುತ್ತಿದ್ದೇವೆ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಅವರು, ’ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ” ಎಂದು ಹೇಳಿದ್ದಾರೆ.

’ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ’ ಎಂದಿದ್ದಾರೆ.

’ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ?’ ಎಂದು ಪ್ರಶ್ನಿಸಿದ್ದಾರೆ.

’ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಅಲ್ಲಿನ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಸರ್ಕಾರವೇ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಮತಾಂತರ ನಿಷೇಧ ಮಸೂದೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರವಾಗಿದ್ದು, ವಿಧಾನಪರಿಷತ್‌‌ನಲ್ಲಿಯೂ ಅಂಗೀಕಾರವಾದಲ್ಲಿ ಕಾಯ್ದೆಯಾಗಿ ಜಾರಿಯಾಗಲಿದೆ.


ಇದನ್ನೂ ಓದಿರಿ: ದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...