Homeಮುಖಪುಟದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಆದ ಜೀವಹಾನಿ ನನಗೆ ನೋವು ತಂದಿದೆ ಎಂದು ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ಅವರು ಹೇಳಿದರು

- Advertisement -
- Advertisement -

ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಶನಿವಾರದಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ದೇಶವು ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದ್ದು, ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು.

ಸಾಂಕ್ರಾಮಿಕದ ಎರಡನೇ ಅಲೆಯ ಸಮಯದಲ್ಲಿ ಆದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ರಾಷ್ಟ್ರಪತಿ, ಇದು ತನಗೆ ನೋವು ತಂದಿದೆ ಎಂದು ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಮತ್ತು ಸರ್ಕಾರದ ಅವಿರತ ಪ್ರಯತ್ನದಿಂದಾಗಿ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ಜೀವಗಳನ್ನು ಉಳಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳಿಗೆ 24 ಗಂಟೆಯೊಳಗೆ ಜಾಮೀನು!

“75 ವರ್ಷಗಳ ಹಿಂದೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ, ಅನೇಕರು ಭಾರತದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಭಾವಿಸಿದ್ದರು. ಆದರೆ ಭಾರತವು ಅನಾದಿಕಾಲದಿಂದಲೂ ಪ್ರಜಾಪ್ರಭುತ್ವದ ಪೋಷಣೆಯ ನೆಲೆಯಾಗಿದೆ ಮತ್ತು ಅದು ಹಾಗೆಯೇ ಮುಂದುವರಿದಿದೆ ಎಂದು ಅವರಿಗೆ ತಿಳಿದಿರಲಿಲ್ಲ” ಎಂದು ರಾಷ್ಟ್ರಪತಿ ಹೇಳಿದರು.

ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಮಹತ್ವದ್ದಾಗಿದ್ದು, ಭಾರತವು ತನ್ನ 75 ನೇ ಸ್ವಾತಂತ್ರ್ಯದ ಸಂಭ್ರಮಾಚರಣೆಯನ್ನು ಆರಂಭಿಸುತ್ತಿದೆ.

ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿ, ಮಹಾತ್ಮ ಗಾಂಧಿಯವರ ಕೊಡುಗೆಯನ್ನು ಸ್ಮರಿಸುತ್ತಾ ಮಾತನಾಡಿದ ರಾಷ್ಟ್ರಪತಿ, “ತಪ್ಪು ದಿಕ್ಕಿನಲ್ಲಿ ದೈತ್ಯ ದಾಪುಗಾಲು ಹಾಕುವ ಬದಲು ಸಣ್ಣ ಹೆಜ್ಜೆಗಳನ್ನಿಟ್ಟು ಸರಿಯಾದ ದಿಕ್ಕಿನಲ್ಲಿ ಸಾಗುವುದು ಉತ್ತಮ ಎಂದು ಗಾಂಧಿ ನಮಗೆ ಕಲಿಸಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕಾಳಿ ನದಿ ಮೇಲೆ ಸಚಿವ ನಿರಾಣಿ ಸಹೋದರರ ಕಣ್ಣು!

ಒಲಿಂಪಿಕ್ಸ್‌ನಲ್ಲಿ ಭಾರತದ ಅಭೂತಪೂರ್ವ ಸಾಧನೆಯನ್ನು ಸಂಭ್ರಮಿಸಿದ ರಾಷ್ಟ್ರಪತಿ, “ನಮ್ಮ ಕ್ರೀಡಾಪಟುಗಳು ತಮ್ಮ ಅದ್ಭುತ ಪ್ರದರ್ಶನ ನೀಡಿದ್ದಾರೆ. ನಮ್ಮ ಹೆಣ್ಣು ಮಕ್ಕಳು ಅನೇಕ ಪ್ರತಿಕೂಲ ಪರಿಸ್ಥಿತಿಗಳ ವಿರುದ್ಧ ಹೋರಾಡುವ ಮೂಲಕ ವಿಶ್ವದರ್ಜೆಯ ಸಾಧನೆಯನ್ನು ಸಾಧಿಸಿದ್ದಾರೆ. ಎಲ್ಲಾ ಹೆತ್ತವರನ್ನು ತಮ್ಮ ಹೆಣ್ಣುಮಕ್ಕಳನ್ನು ಈ ರೀತಿ ಬೆಳೆಸಬೇಕು” ಎಂದು ದೇಶಕ್ಕೆ ಒತ್ತಾಯಿಸಿದರು.

“ಸಾಂಕ್ರಾಮಿಕದ ತೀವ್ರತೆಯು ಕಡಿಮೆಯಾಗಿದೆ. ಆದರೆ ನಾವು ಸಾಂಕ್ರಾಮಿಕದ ವಿನಾಶಕಾರಿ ಪರಿಣಾಮಗಳಿಂದ ಇನ್ನೂ ಹೊರಬಂದಿಲ್ಲ … ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಸಮಯದಲ್ಲಿ ಅನೇಕ ಜನರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದಕ್ಕೆ ನನಗೆ ತುಂಬಾ ದುಃಖವಾಗಿದೆ, ಆದರೆ ನಾವು ಹೆಚ್ಚಿನ ಜೀವಗಳನ್ನು ಉಳಿಸಲು ಸಾಧ್ಯವಾಯಿತು..ಎಂದು ಒಪ್ಪಿಕೊಂಡ ರಾಷ್ಟ್ರಪತಿ, ಇದು ಆರೋಗ್ಯ ಸಿಬ್ಬಂದಿ, ಲಸಿಕೆ ವಿಜ್ಞಾನಿಗಳ ಕೊಡುಗೆ ಎಂದು ಹೇಳಿದರು.

ಇದನ್ನೂ ಓದಿ: ಭಾನುವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಆನಂದ್‌ ಸಿಂಗ್‌?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...