Homeಕರ್ನಾಟಕಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಅವರು ಕೋಮುವಾದಿಗಳ ಕಪಿಮುಷ್ಟಿಯಿಂದ ದೇಶವನ್ನು ಉಳಿಸಬೇಕು, ಜಾತ್ಯಾತೀತ ತತ್ವದ ನಿಲುವು ಇರುವವರೆಲ್ಲ ಇದಕ್ಕೆ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

”ಸಂವಿಧಾನ ಉಳಿಯಬೇಕು. ಸಂವಿಧಾನ ಒಪ್ಪಿದ್ದೇವೆ, ಜಾತ್ಯಾತೀತ ರಾಷ್ಟ್ರ ಮಾಡುವುದಾಗಿ ಹೇಳಿದ್ದೇವೆ. ಭಾರತ ಅನೇಕ ಜಾತಿ, ಧರ್ಮ ಬಹುತ್ವ ಇರುವ ರಾಷ್ಟ್ರ. ಅದಕ್ಕಾಗಿ ಯೂನಿಟಿ ಇನ್ ಡೈವರ್ಸಿಟಿ ಕಾಣುತ್ತಿದ್ದೇವೆ. ಇದರಲ್ಲಿ ನಂಬಿಕೆ ಇಟ್ಟಿರುವವರಲ್ಲಿ ನಾಸಿರ್ ಹುಸೇನ್ ಎಂದು ಹೇಳಿದರ ಅತಿಶಯೋಕ್ತಿಯಲ್ಲ. ಸೆಕ್ಯೂಲರ್ ಆಗಿದ್ದರೆ ಮಾತ್ರ ಈ ದೇಶ ಉಳಿಯಲು ಸಾಧ್ಯ” ಎಂದರು.

”ಈ ದೇಶದಲ್ಲಿ ಯಾವುದೇ ಧರ್ಮದ ಮಗುವಾಗಿ ಹುಟ್ಟಿದರೂ ವಿಶ್ವ ಮಾನವನಾಗಿ ಹುಟ್ಟುತ್ತಾರೆ. ಆಮೇಲೆ ಅಲ್ಪ ಮಾನವನಾಗಿ ಆಗುತ್ತಾರೆ. ಬಿಜೆಪಿಯವರು ಅಲ್ಪಮಾನವರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಎಂದೂ ಕೂಡ ಸಂವಿಧಾನ ದ್ಯೇಯೋದ್ದೇಶ ಉಳಿಸಿಕೊಂಡು ಬರುತ್ತಿದೆ. ಸಂವಿಧಾನ ರಚನೆ ಮಾಡಿದಾಗ ಕಾಂಗ್ರೆಸ್ ದೊಡ್ಡ ಜವಾಬ್ದಾರಿ ನೀಡಿದೆ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನ ಒಪ್ಪಿ ಹೊರ ತರುತ್ತದೆ” ಎಂದರು.

”ಸಂವಿಧಾನ ಜಾರಿಗೆ ಬಂದಾಗ, ಅದನ್ನ ವಿರೋಧ ಮಾಡಿದವರು RSS ಮತ್ತು ಹಿಂದೂ ಮಹಾಸಭಾ ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಅವರು ಐಕ್ಯತೆಯಿಂದ ಇರಲು ಬಿಡುವುದಿಲ್ಲ. ಈ ದೇಶವನ್ನು ಹಿಂದೂ ರಾಷ್ಟ್ರ ಮಾಡುವುದಾಗಿ ಹೇಳುತ್ತಾರೆ. ಈ ದೇಶ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. 140 ಕೋಟಿ ಜನರು ಇಲ್ಲಿ ಇದ್ದಾರೆ, ಎಲ್ಲರಿಗೂ ಸೇರಿದ್ದು. ಬಿಜೆಪಿಯವರು ಇದನ್ನೇ ಅಜೆಂಡಾ ಆಗಿ ಇಟ್ಟುಕೊಂಡಿದ್ದಾರೆ” ಎಂದರು.

ಇದನ್ನೂ ಓದಿ: INDIA vs ಭಾರತ: ಹೆಸರು ಬದಲಾವಣೆ ವಿರೋಧಿಸುವವರು ದೇಶ ಬಿಟ್ಟುಹೋಗಬಹುದು- ಬಿಜೆಪಿ ನಾಯಕ

”ಇಂಡಿಯಾ ಬದಲು ಭಾರತ ಎಂದು ಹೆಸರು ಬದಲಾಯಿಸಲು ಮುಂದಾಗಿದ್ದಾರೆ. ನೀವು ನಾವು ಎಲ್ಲರೂ ಇಂಡಿಯಾದವರು, ಭಾರತೀಯರೂ ಕೂಡ ಹೌದು. ಜನರನ್ನ ದಾರಿ ತಪ್ಪಿಸು ಕೆಲಸ ಮಾಡುತ್ತಿದ್ದಾರೆ. ಇಂಡಿಯಾ ಬ್ರಿಟೀಷರು ಇಟ್ಟ ಹೆಸರು ಎಂದು ಹೇಳುತ್ತಿದ್ದಾರೆ. ಮೇಕ್ ಇನ್ ಇಂಡಿಯಾ ಅಂದವರ್ಯಾರು? ನರೇಂದ್ರ ಮೋದಿ ಮಾತ್ರ ಭಾರತೀಯನಾ? ನಾವು, ನೀವೆಲ್ಲಾ ಇಂಡಿಯಾದವರಲ್ವಾ? ನಮ್ಮ ನಡುವೆ ಹುಳಿ ಇಂಡುವ ಕೆಲಸ ಮಾಡುತ್ತಿದ್ದಾರೆ. ಇವರ ತಂತ್ರ ಫಲಿಸಲ್ಲ” ಎಂದು ಕಿಡಿಕಾರಿದರು.

”ನಾವು ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಮಾಡಲು ಬದ್ಧರಾಗಿದ್ದೇವೆ. ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳಲು ಬಿಡಲ್ಲ. ಕೋಮು ಗಲಭೆ ಆಗದಂತೆ ಹತ್ತಿಕ್ಕುತ್ತೇವೆ. ಪ್ರತಿ ನಿತ್ಯ ಸಾಮಾಜಿಕ ಜಾಲತಾಣದಲ್ಲಿ ಕೋಮು ಸಂಘರ್ಷ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರಿಗೆ ಸೂಚನೆ ನೀಡಿದ್ದೇನೆ‌. ಯಾರಾದರು ಕೋಮು ಸಂಘರ್ಷಕ್ಕೆ ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಆದರೆ ನಿಮ್ಮ ಮೇಲೆ ಯಾವುದೇ ರೀತಿಯ ಪರಿಣಾಮ ಆಗದಂತೆ ಕ್ರಮ ಕೈಗೊಳ್ಳುತ್ತೇವೆ‌” ಎಂದು ಹೇಳಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ 135 ಕ್ಷೇತ ಗೆದ್ದಿದೆ. ಇದಕ್ಕೆ ಅಲ್ಪಸಂಖ್ಯಾತರ ಪಾತ್ರ ಬಹುಮುಖ್ಯ. ಹೀಗಾಗಿ ಅಲ್ಪಸಂಖ್ಯಾತರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ” ಎಂದು ಸಿದ್ದರಾಮಯ್ಯ ಹೇಳಿದರು.

ಕಾರ್ಯಕ್ರಮದ ಬಳಿಕ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ”ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಣಿ ಸದಸ್ಯರಾದ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದೆ. ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ. ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ. ಇದಕ್ಕಾಗಿ ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ” ಎಂದಿದ್ದಾರೆ.

”ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ “INDIA” ಹೆಸರಿಗೆ ಬೆಚ್ಚಿ ಬಿದ್ದು ದೇಶದ ಹೆಸರು “ಭಾರತ” ಎಂದು ಹೊಸದಾಗಿ ಹೇಳಲು ಹೊರಟಿದೆ. “ನಾವು ಭಾರತ್ ಜೋಡೋ ನಡೆಸಿದವರು”. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ. ಭಾರತದ ಬಹುತ್ವ ಸಂಸ್ಕೃತಿ, ಸಂವಿಧಾನ ಕಾಂಗ್ರೆಸ್ ಕೈಗಳಲ್ಲಿ ಸುರಕ್ಷಿತವಾಗಿದೆ. ಯಾರು ಎಷ್ಟೆ ಹುನ್ನಾರ, ಪಿತೂರಿ ರಾಜಕಾರಣ ನಡೆಸಿದರೂ ನಾವು ಬಹುತ್ವದ ಭಾರತವನ್ನು, ಈ ಮಣ್ಣಿನ ಸೌಹಾರ್ದ ಪರಂಪರೆಯನ್ನು, ಜಾತ್ಯತೀತ ಸಂಸ್ಕೃತಿಯನ್ನು, ಭಾರತೀಯ ಸಂವಿಧಾನವನ್ನು ಕಾಪಾಡಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...