Homeಮುಖಪುಟಕೋವಿಡ್ ಸಾಂಕ್ರಾಮಿಕ ದಕ್ಷಿಣಕ್ಕಿಂತ ಉತ್ತರ ಕರ್ನಾಟಕಕ್ಕೆ ಹೆಚ್ಚು ಅಪಾಯಕಾರಿ. ಏಕೆ?

ಕೋವಿಡ್ ಸಾಂಕ್ರಾಮಿಕ ದಕ್ಷಿಣಕ್ಕಿಂತ ಉತ್ತರ ಕರ್ನಾಟಕಕ್ಕೆ ಹೆಚ್ಚು ಅಪಾಯಕಾರಿ. ಏಕೆ?

- Advertisement -
- Advertisement -

COVID-19 ಸಾಂಕ್ರಾಮಿಕ ರೋಗವು ಭಾರತದ ಆರೋಗ್ಯ ವ್ಯವಸ್ಥೆಯ ಪರಿಸ್ಥಿತಿಯನ್ನು ಬಹಿರಂಗಪಡಿಸಿದೆ. ಇಷ್ಟು ದೊಡ್ಡ ದೇಶ, ಅತಿ ಹೆಚ್ಚಿನ ಮಾನ ಸಂಪನ್ಮೂಲ ಹೊಂದಿರುವ ನಮ್ಮ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಸ್ಥಿತಿಯಲ್ಲಿದೆ. ಕೊರೊನಾ ವೈರಸ್‌ ಉಲ್ಭಣಗೊಂಡಾಗ ಆಳುವ ಸರ್ಕಾರ ಲಾಕ್‌ಡೌನ್‌ ಹೇರಿತು. ಈ ಸಂದರ್ಭದಲ್ಲಿ ಅದು ಮಾಡಬೇಕಿದ್ದ ಅತಿ ಮುಖ್ಯ ಕೆಲಸವೇನೆಂದರೆ ತನ್ನ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಿಕೊಳ್ಳುವುದಾಗಿತ್ತು. ಆದರೆ ತಟ್ಟೆ ಜಾಗಟೆ ಬಡಿಯುವ, ದೀಪ ಹಚ್ಚುವ ಟಾಸ್ಕ್‌ಗಳಲ್ಲಿ ಕಾಲ ನೂಕಿದ ಆಳುವ ವರ್ಗ ಈಗ ದಿನೇ ದಿನೇ ಶರವೇಗದಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ನೋಡಿ ಕಂಗೆಟ್ಟಿದೆ.

ಇನ್ನು ದೇಶಾದ್ಯಂತ ರಾಜ್ಯ ಸರ್ಕಾರಗಳು ಕೋವಿಡ್‌ ವಿರುದ್ಧನ ಹೋರಾಡಲು ಹಾಸಿಗೆಗಳನ್ನು ಹೆಚ್ಚಿಸಲು, ಸಾಂಕ್ರಾಮಿಕ ರೋಗಶಾಸ್ತ್ರಜ್ಞರನ್ನು ಮತ್ತು ಇತರ ತಜ್ಞರನ್ನು ನೇಮಿಸಿಕೊಳ್ಳಲು ಮತ್ತು ವೆಂಟಿಲೇಟರ್‌ಗಳಂತಹ ಜೀವ ಉಳಿಸುವ ಸಾಧನಗಳನ್ನು ಖರೀದಿಸಲು ಪರದಾಡುತ್ತಿವೆ. ಕರ್ನಾಟಕದಲ್ಲಿ ಈ ಸ್ಥಿತಿ ಭಿನ್ನವಾಗಿದ್ದು ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ನಡುವೆ ಸ್ಪಷ್ಟ ವಿಭಜನೆ ಕಂಡುಬಂದಿದೆ.

COVID-19 ರೋಗಿಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕವು ಒಟ್ಟು 22,872 ಹಾಸಿಗೆಗಳನ್ನು ಹೊಂದಿದೆ. ಆದರೆ ಇವುಗಳಲ್ಲಿ ಹೆಚ್ಚಿನವು ದಕ್ಷಿಣ ಕರ್ನಾಟಕದಲ್ಲಿವೆ. ಇದು ದಶಕಗಳ ಅಸಮಾನ ರಾಜಕೀಯ ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ. “ಉತ್ತರ ಕರ್ನಾಟಕದ ದೊಡ್ಡ ಸಮಸ್ಯೆ ಏನೆಂದರೆ, ದಕ್ಷಿಣದಲ್ಲಿ ಇರುವಂತೆ ತಾಲ್ಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳು ಸಜ್ಜುಗೊಂಡಿಲ್ಲ. ದಕ್ಷಿಣದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಜಿಲ್ಲೆಗಳಲ್ಲಿ ಕಡಿಮೆ ಆಮ್ಲಜನಕವುಳ್ಳ ಹಾಸಿಗೆಗಳು ಮತ್ತು ಐಸಿಯು ಹಾಸಿಗೆಗಳಿವೆ” ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಓಂಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪಡೆದ ಮಾಹಿತಿಯ ಪ್ರಕಾರ, ಕರ್ನಾಟಕವು ಪ್ರಸ್ತುತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 84,712 ಹಾಸಿಗೆಗಳನ್ನು ಹೊಂದಿದೆ. ಇವುಗಳಲ್ಲಿ, COVID-19 ಪರಿಸ್ಥಿತಿಯನ್ನು ನಿಭಾಯಿಸಲು ಕೇವಲ 27% ಅಂದರೆ 22,872 ಹಾಸಿಗೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿದೆ. ರಾಜ್ಯದಲ್ಲಿ 18,874 ಪ್ರತ್ಯೇಕ ಹಾಸಿಗೆಗಳು, 2,075 ಐಸಿಯು ಹಾಸಿಗೆಗಳು, 6,702 ಆಮ್ಲಜನಕ ಹಾಸಿಗೆಗಳು ಮತ್ತು 999 ವೆಂಟಿಲೇಟರ್ ಹಾಸಿಗೆಗಳಿವೆ.

ಕೃಪೆ: ದಿ ನ್ಯೂಸ್‌ ಮಿನಿಟ್

ತೀವ್ರ ಅಸಮಾನತೆ

ರಾಜ್ಯದಲ್ಲಿ COVID-19 ಗಾಗಿ ನಿಗದಿಪಡಿಸಿದ ಒಟ್ಟು ಹಾಸಿಗೆಗಳಲ್ಲಿ 62.62% ಹಾಸಿಗೆಗಳು ದಕ್ಷಿಣ ಮತ್ತು ದಕ್ಷಿಣ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ. ಆಶ್ಚರ್ಯಕರವಾಗಿ ಬೆಂಗಳೂರು ಒಂದರಲ್ಲೇ COVID-19 ಗಾಗಿ 14.6% ರಷ್ಟು ಹೆಚ್ಚಿನ ಸಂಖ್ಯೆಯ ಹಾಸಿಗೆಗಳಿವೆ.

ಇದಕ್ಕೆ ವ್ಯತಿರಿಕ್ತವಾಗಿ, ಉತ್ತರ ಕರ್ನಾಟಕದ ಎಂಟು ದೂರದ ಜಿಲ್ಲೆಗಳು ರಾಜ್ಯದಲ್ಲಿ ಲಭ್ಯವಿರುವ ಒಟ್ಟು ಹಾಸಿಗೆಗಳಲ್ಲಿ ಕೇವಲ 21.97% ನಷ್ಟು ಪಾಲು ಪಡೆದಿವೆ. ಇದರಲ್ಲಿ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ. ಇದಲ್ಲದೆ, ಈ ಹಾಸಿಗೆಗಳಲ್ಲಿ ಹೆಚ್ಚಿನವುಗಳನ್ನು COVID ಆರೈಕೆ ಕೇಂದ್ರಗಳಲ್ಲಿ ಸ್ಥಾಪಿಸಲಾಗಿದೆ. ಜಿಲ್ಲಾಡಳಿತವು ಹಾಸ್ಟೆಲ್‌ಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸಿದೆ.

ಆತಂಕಕ್ಕೆ ಕಾರಣಗಳು

ಲಾಕ್‌ಡೌನ್‌ ಸರಾಗಗೊಳಿಸಿದ ನಂತರ ಉತ್ತರ ಕರ್ನಾಟಕದಲ್ಲಿ ಪ್ರಕರಣಗಳ ಸಂಖ್ಯೆ ದಕ್ಷಿಣಕ್ಕಿಂತ ವೇಗವಾಗಿ ಹೆಚ್ಚುತ್ತಿದೆ. ಏಕೆಂದರ ಇತರ ರಾಜ್ಯಗಳಿಗೆ ಉದ್ಯೋಗಕ್ಕಾಗಿ ವಲಸೆ ಹೋಗಿದ್ದ ಕಾರ್ಮಿಕರು ಈಗ ಹಿಂತಿರುಗುತ್ತಿರುವುದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಮುಖ್ಯವಾಗಿ ಮಹಾರಾಷ್ಟ್ರಕ್ಕೆ ವಲಸೆ ಹೋಗಿದ್ದವರು ಹಿಂತಿರುಗುತ್ತಿರುವುದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಲದೇ ಜುಲೈನಿಂದ ಸೆಪ್ಟಂಬರ್‌ವರೆಗೆ ಭಾರತದಲ್ಲಿ ಕೊರೊನಾ ಪ್ರಕರಣಗಳು ತೀವ್ರ ಮಟ್ಟದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆಯೆಂದು ಹಲವು ವೈದ್ಯಕೀಯ ತಜ್ಞರು ಅಭಿಪ್ರಾಯಪಡುತ್ತಿದ್ದಾರೆ. ಅಂತಹ ಸಮಯದಲ್ಲಿ ಇದೇ ರೀತಿಯ ವೈದ್ಯಕೀಯ ಪರಿಸ್ಥಿತಿ ಇದ್ದಲ್ಲಿ ಮತ್ತಷ್ಟು ಅನಾಹುತಕ್ಕೆ ಎಡೆ ಮಾಡಿಕೊಡುವುದರಲ್ಲಿ ಅನುಮಾನವಿಲ್ಲ.‌

ಉತ್ತರ ಕನ್ನಡ ಜಿಲ್ಲೆಯು ಗೊತ್ತುಪಡಿಸಿದ ಸಿಒವಿಐಡಿ -19 ಆಸ್ಪತ್ರೆಯಲ್ಲಿ ಕೇವಲ 180 ಹಾಸಿಗೆಗಳನ್ನು ಹೊಂದಿದೆ. ಇನ್ನು ತೀವ್ರ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಜಿಲ್ಲೆಯಾದ್ಯಂತ ಕೇವಲ 15 ವೆಂಟಿಲೇಟರ್‌ಗಳನ್ನು ಹೊಂದಿದೆ. ರೋಗಲಕ್ಷಣಗಳಿಲ್ಲದವರಿಗೆ ನಾವು ಹಾಸ್ಟೆಲ್‌ಗಳಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಆದರೆ, ಮೂಲಸೌಕರ್ಯಗಳು ಉತ್ತಮವಾಗಿ ಅಭಿವೃದ್ಧಿ ಹೊಂದಿದ ದಕ್ಷಿಣ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಬೆಂಗಳೂರಿನಲ್ಲಿ ಜಿಲ್ಲಾಡಳಿತಗಳು ಹಾಸ್ಟೆಲ್‌ಗಳನ್ನು ಮತ್ತು ಕಾಲೇಜುಗಳನ್ನು ಪ್ರತ್ಯೇಕ ಸೌಲಭ್ಯಗಳಾಗಿ ಪರಿವರ್ತಿಸಬೇಕಾಗಿಲ್ಲ. ಉದಾಹರಣೆಗೆ, ದಕ್ಷಿಣ ಕನ್ನಡದಲ್ಲಿ ಎಂಟು ವೈದ್ಯಕೀಯ ಕಾಲೇಜುಗಳಿವೆ. ಪ್ರಸಿದ್ದ ವೆನ್ಲಾಕ್ ಆಸ್ಪತ್ರೆ ಇದೆ. ಇಲ್ಲಿ 67 ಖಾಸಗಿ ಆಸ್ಪತ್ರೆಗಳಿದ್ದು, ಅಗತ್ಯವಿದ್ದಲ್ಲಿ ಸರ್ಕಾರವು ಇವನ್ನು ಗೊತ್ತುಪಡಿಸಿದ ಕೋವಿಡ್ ಆಸ್ಪತ್ರೆಗಳು ಅಥವಾ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಬಹುದು.

ಇನ್ನು ಬೆಂಗಳೂರಿನಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಒಟ್ಟು 19,359 ಹಾಸಿಗೆಗಳಿದ್ದು, ಅದರಲ್ಲಿ 3,324 ಹಾಸಿಗೆಗಳನ್ನು COVID-19 ಉದ್ದೇಶಕ್ಕಾಗಿ ಮೀಸಲಿಡಲಾಗಿದೆ. ಸಾಂಕ್ರಾಮಿಕ ಪ್ರಕರಣಗಳು ಹೆಚ್ಚಾದಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಹಲವಾರು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿವೆ.

ಅಸಮಾನತೆಗೆ ಕಾರಣವೇನು?

ನೇರ ಮತ್ತು ಸ್ಪಷ್ಟ ಉತ್ತರ ಆರೋಗ್ಯ ರಕ್ಷಣೆಗಾಗಿ ಸಾರ್ವಜನಿಕ ಹೂಡಿಕೆಯ ಕೊರತೆಯಾಗಿದೆ. ಇದುವರೆಗೂ ಸರ್ಕಾರಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಲ್ಪ ಮೊತ್ತವನ್ನು ಮಾತ್ರ ವಿನಿಯೋಗಿಸಿವೆ. ಇದಲ್ಲದೆ ಈ ಹಣವನ್ನು ಸಹ ಬೆಂಗಳೂರು ನಗರ ಮತ್ತು ದಕ್ಷಿಣ ಜಿಲ್ಲೆಗಳಾದ ಮೈಸೂರು, ತುಮಕುರು, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿನ ಆರೋಗ್ಯ ಸೌಲಭ್ಯಗಳ ಅಭಿವೃದ್ಧಿಗೆ ಬಳಸಲಾಯಿತು. ಇಲ್ಲಿ ಜನಸಂಖ್ಯೆ ಅಧಿಕವಾಗಿರುವುದು ಒಂದು ಕಾರಣವಾದರೂ ಸಹ ಇದರಲ್ಲಿ ರಾಜಕೀಯ ಇಚ್ಛಾಶಕ್ತಿಗಳು ಕೆಲಸ ಮಾಡಿವೆ.

2020-21ರ ಆರ್ಥಿಕ ವರ್ಷದಲ್ಲಿ ಕರ್ನಾಟಕ ಸರ್ಕಾರವು ಆರೋಗ್ಯಕ್ಕಾಗಿ ಒಟ್ಟು ಬಜೆಟ್‌ನಲ್ಲಿ ಕೇವಲ 4.6%ರಷ್ಟನ್ನು ಮಾತ್ರ ಮೀಸಲಿಟ್ಟಿದೆ. ಈ ಹಂಚಿಕೆ ರಾಷ್ಟ್ರೀಯ ಸರಾಸರಿ 5.3% ಗಿಂತ ಕಡಿಮೆಯಾಗಿದೆ. ಕರ್ನಾಟಕ ಸರ್ಕಾವು ಆರೋಗ್ಯಕ್ಕಾಗಿ 10,296 ಕೋಟಿ ರೂ. ಮತ್ತು  ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಕೇವಲ 1,413 ಕೋಟಿ ರೂ ಹೂಡಿಕೆ ಮಾಡಿದೆ. ಎಲ್ಲಿಯವರೆಗೆ ಸಾರ್ವಜನಿಕ ಆರೋಗ್ಯ ಕ್ಷೇತ್ರದ ಮೇಲೆ ಸರ್ಕಾರ ಹೆಚ್ಚಿನ ಹಣವನ್ನು ಹೂಡಿಕೆ ಮಾಡುವುದಿಲ್ಲವೋ ಅಲ್ಲಿಯವರೆಗೂ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ.

ಹೋಗಲಿ ಸಾಕಷ್ಟು ವೈದ್ಯರು ಇದ್ದಾರೆಯೇ?

ಆರೋಗ್ಯ ಇಲಾಖೆಯ ಪ್ರಕಾರ, ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವೈದ್ಯರು, ತಜ್ಞರು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಲ್ಯಾಬ್ ತಂತ್ರಜ್ಞರು ಸೇರಿದಂತೆ ರಾಜ್ಯಾದ್ಯಂತ 23,000 ಆರೋಗ್ಯ ನೌಕರರಿದ್ದಾರೆ. ಕರ್ನಾಟಕದಲ್ಲಿ ಪ್ರಸ್ತುತ 30% ಆರೋಗ್ಯ ಸಿಬ್ಬಂದಿಗಳ ಕೊರತೆ ಇದೆ.

“ನಾವು ಈಗ ಸುಮಾರು 1,000 ತಜ್ಞ ವೈದ್ಯರು, 400 ಜನರಲ್ ಡ್ಯೂಟಿ ವೈದ್ಯಕೀಯ ಅಧಿಕಾರಿಗಳು ಮತ್ತು ಹೆಚ್ಚಿನ ಅರೆವೈದ್ಯಕೀಯ ಮತ್ತು ಲ್ಯಾಬ್ ತಂತ್ರಜ್ಞರನ್ನು ನೇಮಿಸಿಕೊಳ್ಳಲಿದ್ದೇವೆ.” ಎಂದು ಓಂಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಕಲಬುರಗಿ ಮತ್ತು ರಾಯಚೂರಿನಂತಹ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಿದರೂ, ಸಾಕಷ್ಟು ಸೌಲಭ್ಯಗಳಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ ಉತ್ತರ ಜಿಲ್ಲೆಗಳಲ್ಲಿ ನೇಮಕಗೊಂಡ ಆರೋಗ್ಯ ಸಿಬ್ಬಂದಿಗಳ ಸಂಖ್ಯೆ ತೀರಾ ಕಡಿಮೆಯಿದೆ.

“ತಜ್ಞ ವೈದ್ಯರು ಇಲ್ಲಿ ಲಭ್ಯವಿಲ್ಲ. ಈ ಜಿಲ್ಲೆಗಳಲ್ಲಿ ವೈದ್ಯರು, ಶ್ವಾಸಕೋಶಶಾಸ್ತ್ರಜ್ಞರು, ಕಾರ್ಡಿಯೋ-ಥೊರಾಸಿಕ್ ಶಸ್ತ್ರಚಿಕಿತ್ಸಕರು ಮತ್ತು ದಕ್ಷಿಣ ಜಿಲ್ಲೆಗಳನ್ನು ಹೊಂದಿರುವ ಇತರ ತಜ್ಞರು ಇಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸರ್ಕಾರದ ವತಿಯಿಂದ ಕಡಿಮೆ ಅನುದಾನವಿದೆ. ಇರುವ ಅನುದಾನದಲ್ಲಿಯೇ ದಕ್ಷಿಣದ ಜಿಲ್ಲೆಗಳಿಗೆ ಹೆಚ್ಚು ಹಂಚಿಕೆಯಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳು ವೈದ್ಯರು ಮತ್ತು ಹಾಸಿಗೆಗಳಿಲ್ಲದೇ ಪರದಾಡುತ್ತಿದ್ದಾರೆ. ಈ ಕುರಿತು ಸರ್ಕಾರ ಇಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಾದರೂ ಎಚ್ಚೆತ್ತುಕೊಂಡು ಇತ್ತ ಗಮನಹರಿಸಬೇಕಿದೆ.

Courtesy : The News Minute


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...