Homeಮುಖಪುಟಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದಂತೆಯೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ್ದಾರೆ.

- Advertisement -
- Advertisement -

ನವದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದ) ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇಬ್‌ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದರ ಜೊತೆಗೆ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅವರೂ ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ್ದಾರೆ.

“ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಅದರ ಬಗ್ಗೆ ಯಾರೂ ನನಗೆ ಏನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಭಟ್ಟಾಚಾರ್ಯ ಅವರು ಹೇಳಿಕೆ ನೀಡಿದ್ದಾರೆ.

ಅನಾರೋಗ್ಯದ ಕಾರಣ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವವರೆಗೂ ಮತ್ತು ನಂತರವೂ ಭಟ್ಟಾಚಾರ್ಯ ಅವರು ನರೇಂದ್ರ ಮೋದಿ ಸರ್ಕಾರದ ತೀವ್ರ ಟೀಕಾಕಾರರಾಗಿದ್ದರು.

ಅಧಿಕಾರಿಯೊಬ್ಬರು ಭಟ್ಟಾಚಾರ್ಯ ಅವರ ನಿವಾಸಕ್ಕೆ ಕರೆ ಮಾಡಿ ಸರ್ಕಾರದ ನಿರ್ಧಾರದ ಬಗ್ಗೆ ಅವರ ಪತ್ನಿಗೆ ತಿಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೊಂಡಿದೆ. ಸಚಿವಾಲಯದೊಳಗಿನ ಹೆಸರು ಹೇಳಲಿಚ್ಛಿಸದ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳಾದ ಎಎನ್‌ಐ ಮತ್ತು ಪಿಟಿಐ ವರದಿ ಮಾಡಿದ್ದು, “ಭಟ್ಟಾಚಾರ್ಯ ಅವರ ಕುಟುಂಬವು ಪ್ರಶಸ್ತಿಗೆ ವಿರೋಧ ವ್ಯಕ್ತಪಡಿಸಿಲ್ಲ” ಎಂದಿವೆ.

ಪದ್ಮ ಪ್ರಶಸ್ತಿಗೆ ಹೆಸರನ್ನು ಘೋಷಿಸುವ ಮೊದಲು ಕೇಂದ್ರ ಸರ್ಕಾರವು ಪ್ರಶಸ್ತಿ ಪುರಸ್ಕೃತರ ಒಪ್ಪಿಗೆಯನ್ನು ಪಡೆಯುವುದು ರೂಢಿಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.

77 ವರ್ಷದ ಕಮ್ಯುನಿಸ್ಟ್ ನಾಯಕ 2000-2011ರ ಅವಧಿಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿಯನ್ನು ಅವರು ನಿರಾಕರಿಸಿರುವ ಕುರಿತು ಸಿಪಿಐ(ಎಂ) ಟ್ವಿಟರ್ ಹ್ಯಾಡಲ್‌ ತಿಳಿಸಿದೆ.

“ಪದ್ಮಭೂಷಣ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ಕಾಮ್ರೇಡ್ ಬುದ್ಧದೇಬ್ ಭಟ್ಟಾಚಾರ್ಯ ಅವರು ಅದನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಪ್ರಭುತ್ವದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ಸಿಪಿಐ(ಎಂ) ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ. ಈ ಹಿಂದೆ ಪ್ರಶಸ್ತಿಯನ್ನು ನೀಡಲಾಗಿದ್ದ ಕಾಮ್ರೇಡ್ ಇಎಂಎಸ್ (ನಂಬೂದರಿಪಾಡ್) ಅದನ್ನು ನಿರಾಕರಿಸಿದ್ದರು” ಎಂದು ಸಿಪಿಐ(ಎಂ) ಟ್ವೀಟ್ ಮಾಡಿದೆ.

“ಕಮ್ಯುನಿಸ್ಟರು ಪ್ರಭುತ್ವದ ಪ್ರಶಸ್ತಿಗಳಿಗೆ ಹಾತೊರೆಯುವುದಿಲ್ಲ. ಈ ಹಿಂದೆ ಜ್ಯೋತಿ ಬಸು ಅವರು 2008ರಲ್ಲಿ ಭಾರತ ರತ್ನ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಹಾಗಾಗಿ ಇದನ್ನೂ ನಿರೀಕ್ಷಿಸಲಾಗಿತ್ತು” ಎಂದು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ.

‘ಅತ್ಯಂತ ಅವಮಾನಕರ’

ಸಂಧ್ಯಾ ಮುಖರ್ಜಿ

ಜನಪ್ರಿಯ ಹಿನ್ನೆಲೆ ಗಾಯಕಿ ಸಂಧ್ಯಾ ಮುಖರ್ಜಿ ಅವರು ಪ್ರಶಸ್ತಿ ನಿರಾಕರಣೆಯನ್ನು ಮಾಡಿರುವ ಕುರಿತು ಅವರ ಪುತ್ರಿ ಸೌಮಿ ಸೇನ್‌ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಇಂಡಿಯಾ ಟುಡೇ ಜೊತೆ ಮಾತನಾಡಿರುವ ಅವರು, “90ನೇ ವಯಸ್ಸಿನಲ್ಲಿ ಸಂಗೀತ ದಂತಕಥೆಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವುದು ಅತ್ಯಂತ ಅವಮಾನಕರ” ಎಂದು ಸೌಮಿ ಸೇನ್‌ಗುಪ್ತಾ ಹೇಳಿದ್ದಾರೆ.

“ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ” ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

”ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಅವರು ಯಾವುದೇ ರಾಜಕೀಯವನ್ನು ಮೀರಿದವರು. ದಯವಿಟ್ಟು ಅದರಲ್ಲಿ ಯಾವುದೇ ರಾಜಕೀಯ ಕಾರಣಗಳನ್ನು ಹುಡುಕಲು ಪ್ರಯತ್ನಿಸಬೇಡಿ. ಅವರು ಅವಮಾನಿತರಾಗಿದ್ದಾರೆ ಅಷ್ಟೇ” ಎಂದು ಸೌಮಿ ಅವರು ತಿಳಿಸಿದ್ದಾರೆ.

ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು 2011ರಲ್ಲಿ ಪಡೆದಿದ್ದಾರೆ. ಹಾಲಿವುಡ್ ಕ್ಲಾಸಿಕ್ ‘ಸೌಂಡ್ ಆಫ್ ಮ್ಯೂಸಿಕ್’ನ ಬಂಗಾಳಿ ರಿಮೇಕ್ ಆದ ‘ಜಯ್ ಜಯಂತಿ’ಗಾಗಿ ಅವರು 1970ರಲ್ಲಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದ್ದಾರೆ.


ಇದನ್ನೂ ಓದಿರಿ: ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...