Homeಕರ್ನಾಟಕಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಾರೆ: ಡಿ.ಕೆ. ಶಿವಕುಮಾರ್

- Advertisement -
- Advertisement -

“ಸದಾ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹುಚ್ಚರು ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿರುತ್ತಾರೆ. ಪ್ರಮುಖ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಇಂತಹ ಕುತಂತ್ರ ಅನುಸರಿಸುತ್ತಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅಫ್ಘಾನಿಸ್ತಾನದ ವಿದ್ಯಾರ್ಥಿಗಳ ಪ್ರತಿನಿಧಿಗಳ ಜತೆ ಸೋಮವಾರ ಪ್ರತ್ಯೇಕ ಮಾತುಕತೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದ್ದಾರೆ.

ಈ ವೇಳೆ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅವಹೇಳನಕಾರಿಯಾಗಿ ಮಾತನಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದಲ್ಲಿ ಕೊರೊನಾ ಜತೆಗೆ ನಿರುದ್ಯೋಗ, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಇನ್ನಿಲ್ಲದ ತೊಂದರೆ ಆಗುತ್ತಿದೆ. ಇದೆಲ್ಲವನ್ನು ಮರೆಸಲು ಈ ರೀತಿ ಮಾತನಾಡಿ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಇಂತಹ ಹೇಳಿಕೆ ನೀಡಿ ಜನರ ದಾರಿ ತಪ್ಪಿಸುತ್ತಿದ್ದಾರೆ’ ಎಂದು ತಿರುಗೇಟು ನೀಡಿದ್ದಾರೆಡ.

ಇದನ್ನೂ ಓದಿ: ‘ರೌಡಿ ಡಿಕೆಶಿ’ ಎಂದ ಬಿಜೆಪಿ; ಬಿಜೆಪಿ ಹುಟ್ಟಿದ್ದೆ ಕೊಲೆ, ಗಲಭೆಗಳಿಂದ ಎಂದು ಕಾಂಗ್ರೆಸ್ ತಿರುಗೇಟು!

ವಿನಯ್ ಕುಲಕರ್ಣಿ ಅವರ ಜತೆ ಕಾಂಗ್ರೆಸ್ ನಿಲ್ಲುತ್ತದೆ

“ವಿನಯ್ ಕುಲಕರ್ಣಿ ಅವರು ಪಕ್ಷದ ಹಿರಿಯ ನಾಯಕರು, ಮಂತ್ರಿಯಾಗಿ ನನ್ನೊಟ್ಟಿಗೆ ಕೆಲಸ ಮಾಡಿದ್ದಾರೆ. ದ್ವೇಷ ರಾಜಕೀಯದಿಂದ ಅವರಿಗೆ ನೋವಾಗಿದೆ. ನ್ಯಾಯಾಲಯದಲ್ಲಿ ಅವರ ಪ್ರಕರಣ ಯಾವ ಹಂತದಲ್ಲಿದೆ ಎಂದು ಗೊತ್ತಿದೆ’’ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ ಯೂಟ್ಯೂಬ್ ಚಾನೆಲ್ Subscribe ಮಾಡಿ


“ಚುನಾವಣೆಗೂ ಮುನ್ನ ಹಾಗೂ ಚುನಾವಣೆ ನಂತರ ಯಾವ, ಯಾವ ನಾಯಕರು ಯಾವ ರೀತಿ ಭಾಷಣ ಮಾಡಿದ್ದಾರೆ ಎಂಬುದು ನಿಮ್ಮ ಬಳಿಯೇ ಇದೆ. ಅವರು ಜೈಲಿನಲ್ಲಿ ಹಾಗೂ ಹೊರಗೆ ಅನುಭವಿಸಿದ ನೋವು ಹಂಚಿಕೊಂಡಿದ್ದಾರೆ. ಅದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಮುಂದಿನ ದಿನಗಳಲ್ಲಿ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು ಹೋಗುತ್ತಾರೆ. ಅವರ ಕುಟುಂಬ, ಕಾರ್ಯಕರ್ತರು, ಪಕ್ಷ ಅವರ ಬೆನ್ನಿಗೆ ನಿಲ್ಲಲಿದೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಅವರಿಗೆ ಹಾಗೂ ನನಗೆ ಅರಿವಿದೆ. ಕಾನೂನಿನಲ್ಲಿ ಅವರಿಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ.

ಇದನ್ನೂ ಓದಿ: ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

ಆಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕು

‘‘ಅಫ್ಘಾನಿಸ್ತಾನ ವಿದ್ಯಾರ್ಥಿಗಳ ಪ್ರತಿನಿಧಿಗಳು ಬಂದು ನನ್ನ ಭೇಟಿ ಮಾಡಿದ್ದರು. ಅಲ್ಲಿನ ಘಟನೆಯಿಂದ ಅವರು ಮಾನಸಿಕವಾಗಿ ಕುಗ್ಗಿದ್ದಾರೆ. ನಮ್ಮ ರಾಜ್ಯದಲ್ಲಿ ಅವರಿಗೆ ಧೈರ್ಯ ನೀಡಬೇಕು. ಅವರ ದೇಹ ಮಾತ್ರ ಇಲ್ಲಿದ್ದು, ಅವರ ಮನಸ್ಸು ಅಲ್ಲಿರುವ ಪೋಷಕರ ಮೇಲಿದೆ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

“ಬೆಂಗಳೂರು ಶಿಕ್ಷಣ ಹಬ್ ಆಗಿದ್ದು, ಅನೇಕ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿದ್ದಾರೆ. ಅವರಿಗೆ ಧೈರ್ಯ ತುಂಬಬೇಕು. ಧರ್ಮ ಯಾವುದೇ ಆಗಿರಲಿ, ಮಾನವೀಯತೆ ದೃಷ್ಟಿಯಿಂದ ಅವರಿಗೆ ಧೈರ್ಯ ತುಂಬಬೇಕು. ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವುದು ಭಾರತ ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಈಗ ನಾನು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಮಾತನಾಡಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತೆರದಾಳ ಪ್ರಕರಣ: ಮುಖ್ಯಮಂತ್ರಿಗಳೇ ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ-ಡಿಕೆಶಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...