Homeಮುಖಪುಟದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

ದೇಶಕ್ಕೆ ಅಪಾಯವಿರುವುದು ಕುಟುಂಬವಾದಿ ಪಕ್ಷಗಳಿಂದಲ್ಲ; ಕೋಮುವಾದಿ ಪಕ್ಷದಿಂದ: ಕುಮಾರಸ್ವಾಮಿ

“ಪಕ್ಷಗಳ ಟೀಕೆಗೆ ಕುಟುಂಬ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ” ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

- Advertisement -
- Advertisement -

ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

“ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂದು ಪ್ರಧಾನಿ ಮೋದಿ ಹೇಳಿರುವುದನ್ನು ಖಂಡಿಸಿ ಸರಣಿ ಟ್ವೀಟ್‌ ಮಾಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿಯವರ ಹೊಸ ಉಪದೇಶವಿದು” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಾಸ್ತವ ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಅವರು ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ. ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ” ಎಂದಿದ್ದಾರೆ.

ಕುಟುಂಬ ಪಕ್ಷಗಳ ಟೀಕೆಗೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ. ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದು ತಿಳಿಸಿದ್ದಾರೆ.

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು. ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ? ಎಂದು ಕೇಳಿದ್ದಾರೆ.

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ. ಏಕೆ? ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ!! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ ಎಂದು ಹರಿಹಾಯ್ದಿದ್ದಾರೆ.

ಇದನ್ನೂ ಓದಿರಿ: ಗಂಡ, ಮೈದುನ, ಮಾವ, ಗಂಡನ ಸ್ನೇಹಿತನಿಂದ ಎರಡು ವರ್ಷ ಕಾಲ ಅತ್ಯಾಚಾರ; ವಿವಾದಿತ ಹಿಂದೂ ಮಹಾಪಂಚಾಯತ್‌ ಸಂಘಟಕನ ಪತ್ನಿ ಆರೋಪ

“ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ರೂ.2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ” ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ, ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ ಎಂದು ಕುಟುಕಿದ್ದಾರೆ.

ಹೋಗಲಿ.. ಮೋದಿ ಅವರೂ ಸಿಎಂ ಕರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ʼಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ? ಎಂದು ಪ್ರಶ್ನಿಸಿದ್ದಾರೆ.

ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕಿವಿಮಾತು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...