Homeಮುಖಪುಟವೈದ್ಯರ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಮುಖ್ಯಮಂತ್ರಿಯ ಮಗಳು

ವೈದ್ಯರ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಮುಖ್ಯಮಂತ್ರಿಯ ಮಗಳು

- Advertisement -
- Advertisement -

ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರ ಮಗಳು ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ನಡೆದಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ಘಟನೆಯ ಬಗ್ಗೆ ಮುಖ್ಯಮಂತ್ರಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಐಜ್ವಾಲ್‌ನಲ್ಲಿ ಕ್ಲಿನಿಕ್‌ನ ಚರ್ಮರೋಗ ತಜ್ಞ ವೈದ್ಯರು ಅಪಾಯಿಂಟ್‌ಮೆಂಟ್ ಇಲ್ಲದ ಕಾರಣಕ್ಕೆ ನೋಡಲು ನಿರಾಕರಿಸಿದ್ದಕ್ಕಾಗಿ ಮುಖ್ಯಮಂತ್ರಿಯ ಮಗಳು ಮಿಲಾರಿ ಚಾಂಗ್ಟೆ ಅಸಮಾಧಾನಗೊಂಡು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆ ಬುಧವಾರ ನಡೆದಿದ್ದು, ಸಮಾಲೋಚನೆಗಾಗಿ ಕ್ಲಿನಿಕ್‌ಗೆ ಬರುವ ಮೊದಲು ಅಪಾಯಿಂಟ್‌ಮೆಂಟ್ ತೆಗೆದುಕೊಳ್ಳುವಂತೆ ವೈದ್ಯರು ಮುಖ್ಯಮಂತ್ರಿಯ ಮಗಳನ್ನು ಕೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಮುಖ್ಯಮಂತ್ರಿಯ ಮಗಳು ವೈದ್ಯರ ಬಳಿಗೆ ಹೋಗಿ ಹಲ್ಲೆ ನಡೆಸಿದ್ದು ಮತ್ತು ಇತರರು ಅವರನ್ನು ಹಿಡಿದಿಡಲು ಪ್ರಯತ್ನಿಸುತ್ತಿರುವುದು ವಿಡಿಯೊದಲ್ಲಿ ಕಾಣಬಹುದಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಮಿಜೋರಾಂ ಘಟಕ ಪ್ರತಿಭಟನೆ ಆರಂಭಿಸಿದ್ದು, ವೈದ್ಯರು ಕಪ್ಪು ಬ್ಯಾಡ್ಜ್ ಧರಿಸಿ ನಿನ್ನೆ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ: ಮಹಿಳೆಯ ಮೇಲೆ ಹಲ್ಲೆ ಮಾಡಿದ್ದ ಬಿಜೆಪಿ ನಾಯಕನ ಪರ ಬೃಹತ್‌ ಪ್ರತಿಭಟನೆ

ಅಂತಿಮವಾಗಿ ಮುಖ್ಯಮಂತ್ರಿ ತಮ್ಮ ಅಧಿಕೃತ ಇನ್ಸ್‌ಟಾಗ್ರಾಂ ಹ್ಯಾಂಡಲ್ ಮೂಲಕ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ.

ಅವರು ತಮ್ಮ ಪೋಸ್ಟ್‌ನಲ್ಲಿ ಅಪ್‌ಲೋಡ್ ಮಾಡಿದ ಕೈಬರಹದ ಟಿಪ್ಪಣಿಯಲ್ಲಿ, ಐಜ್ವಾಲ್ ಮೂಲದ ಚರ್ಮರೋಗ ವೈದ್ಯರೊಂದಿಗೆ ತಮ್ಮ ಮಗಳ “ದುರ್ವರ್ತನೆ”ಗಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದು, “ಮಗಳ ನಡವಳಿಕೆಯನ್ನು ಯಾವುದೇ ರೀತಿಯಲ್ಲಿ ಸಮರ್ಥಿಸುವುದಿಲ್ಲ” ಎಂದು ತಿಳಿಸಿದ್ದಾರೆ.

 

View this post on Instagram

 

A post shared by Zoramthanga (@zoramthangaofficial)

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...