Homeಕರ್ನಾಟಕಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

ಇತ್ತೀಚೆಗಷ್ಟೇ ಸಿದ್ದರಾಮಯ್ಯ, ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತ ನಿಲುವು ಬಹಿರಂಗವಾಗಲಿದೆ ಎಂದು ಹೇಳಿದ್ದರು.

- Advertisement -
- Advertisement -

ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷೆ ಮಾಡಿದ್ದರಿಂದ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು ಎಂದು ಹೆಚ್‌.ಡಿ ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ದಾಳಿ ಮಾಡಿದ್ದಾರೆ.

ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಯ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಧರ್ಮೇಗೌಡರ ಆತ್ಮಹತ್ಯೆಯು ಇವತ್ತಿನ ಕಲುಷಿತ, ತತ್ವ ರಹಿತ, ಸ್ವಾರ್ಥ ರಾಜಕಾರಣಕ್ಕೆ ನಡೆದ ಬಲಿ. ಸಭಾಪತಿ ಸ್ಥಾನಕ್ಕಾಗಿ ಜೆಡಿಎಸ್‌ನ ಜಾತ್ಯತೀತತೆ ಪರೀಕ್ಷೆ ಮಾಡಲಾಯಿತು. ಆದರೆ, ಈ ಪರೀಕ್ಷೆಯಲ್ಲಿ ಧರ್ಮೇಗೌಡ ಎಂಬ ಹೃದಯವಂತನ ಬಲಿಯಾಗಿದೆ. ಪರೀಕ್ಷೆ ಮಾಡಿದವರಿಗೆ ಈಗ ಉತ್ತರ ಸಿಕ್ಕಿರಬಹುದು. ಫಲಿತಾಂಶದಿಂದಲಾದರೂ ಅವರ ಆತ್ಮಾವಲೋಕನ ಆಗಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜ ಸಾವು: ಡೆತ್‌ನೋಟ್ ಪತ್ತೆ

ಇತ್ತೀಚೆಗಷ್ಟೇ ಸಿದ್ದರಾಮಯ್ಯ, ಪರಿಷತ್‌ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತ ನಿಲುವು ಬಹಿರಂಗವಾಗಲಿದೆ ಎಂದು ಹೇಳಿದ್ದರು. ಅಲ್ಲದೆ, ಡಿಸೆಂಬರ್‌ 15 ರಂದು ವಿಧಾನ ಪರಿಷತ್‌ನಲ್ಲಿ ಸಭಾಪತಿ ಸ್ಥಾನಕ್ಕಾಗಿ ಬಿಜೆಪಿ-ಕಾಂಗ್ರೆಸ್‌ ನಡುವೆ ಗಲಾಟೆ ನಡೆದು, ಉಪ ಸಭಾಪತಿ ಧರ್ಮೇಗೌಡರನ್ನು ಎಳೆದಾಡಲಾಗಿತ್ತು. ಇದರಿಂದ ಧರ್ಮೇಗೌಡರು ತೀವ್ರವಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.

ಬೆಳಿಗ್ಗೆ ವಿಧಾನ ಪರಿಷತ್‌ನ‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅಸಹಜವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ಚಿಕ್ಕಮಗಳೂರಿನ ಕಡೂರು ತಾಲ್ಲೂಕಿನ ಗುಣಸಾಗರ ಬಳಿಯ ರೈಲು ಹಳಿಯಲ್ಲಿ ರಕ್ತ ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲ್ಲದೆ ಅವರ ಡೆತ್‌‌ನೋಟ್ ಕೂಡಾ‌ ಸಿಕ್ಕಿದ್ದು, ಅದರಲ್ಲಿ ಸಭಾಪತಿ ಸ್ಥಾನಕ್ಕಾಗಿ ನಡೆದ ಗಲಾಟೆಯ ಉಲ್ಲೇಖವಿದೆ ಎನ್ನಲಾಗಿದೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...