HomeಮುಖಪುಟNEET ನಿಂದಲೇ ಕನ್ನಡಿಗನ ಸಾವು - NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

NEET ನಿಂದಲೇ ಕನ್ನಡಿಗನ ಸಾವು – NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ..

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಘೋಷಿಸಿದಾಗಿನಿಂದ ಉಕ್ರೇನ್‌ನಲ್ಲಿನ 20,000 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಆತಂಕಿತರಾಗಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬ ರಷ್ಯನ ಶೆಲ್ ದಾಳಿಗೆ ಸಿಕ್ಕಿ ಮೃತಪಟ್ಟಿದ್ದಾನೆ. ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳು ಯುದ್ದದ ಕರಿನೆರಳಿನಲ್ಲಿ ಊಟ್ರ, ನಿದ್ರೆಯಿಲ್ಲದೆ ದಿನದೂಡುತ್ತಿದ್ದಾರೆ. ಈ ಎಲ್ಲದಕ್ಕೂ ಭಾರತದ ಶಿಕ್ಷಣ ವ್ಯವಸ್ಥೆ ಕಾರಣವಾಗಿದೆ ಎಂದು ದೂರಿರುವ ಕನ್ನಡಿಗರು NEET ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ, ನನ್ನ ಮಗ ರಾಜ್ಯದಲ್ಲಿ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗಲಿಲ್ಲ. ವೈದ್ಯಕೀಯ ಸೀಟು ಪಡೆಯಲು ಕೋಟ್ಯಂತರ ರೂಪಾಯಿ ನೀಡಬೇಕು ಮತ್ತು ವಿದ್ಯಾರ್ಥಿಗಳು ಕಡಿಮೆ ಹಣ ಖರ್ಚು ಮಾಡಿ ವಿದೇಶದಲ್ಲಿ ಅದೇ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಉಕ್ರೇನ್‌ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಕರನಾಟಕದ ವಿದ್ಯಾರ್ಥಿ ನವೀನ್ ತಂದೆ ಶೇಖರಪ್ಪ ಹೇಳಿದ್ದಾರೆ.

ಭಾರತದಲ್ಲಿ ವೈದ್ಯರ ಕೊರತೆಯಿದೆ. ಹಾಗೆಯೇ ಪ್ರತಿವರ್ಷ 16 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯುವ ಆಕಾಂಕ್ಷಿಗಳಿರುತ್ತಾರೆ. ಆದರೆ ಕೆಲವೇ ಸಾವಿರ ಸರ್ಕಾರಿ ಸೀಟುಗಳಿದ್ದು ಅದಕ್ಕಾಗಿ NEET ಪರೀಕ್ಷೆಯಲ್ಲಿ ತೀವ್ರ ಪೈಪೋಟಿ ನಡೆಯುತ್ತದೆ. ದುಬಾರಿ ಶುಲ್ಕ ಕಟ್ಟಿ ಖಾಸಗಿ ಕಾಲೇಜುಗಳಲ್ಲಿ ಓದಿಸಲು ಸಾಮರ್ಥ್ಯವಿಲ್ಲದ ಮಧ್ಯಮ ವರ್ಗ ಉಕ್ರೇನ್ – ರಷ್ಯಾದಂತಹ ದೇಶಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಕಳಿಸಬೇಕಾದ ಪರಿಸ್ಥಿತಿಯಿದೆ ಎಂದು ಹಲವರು ಆರೋಪಿಸಿದ್ದಾರೆ.

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ನಂತ ಬುದ್ಧಿವಂತ ಹುಡುಗ 2ನೆ ಪಿಯುಸಿಯಲ್ಲಿ 97% ತೆಗೆದರು ನಮ್ಮ ಕರ್ನಾಟಕದಲ್ಲಿ ಅವನಿಗೆ ಮೆಡಿಕಲ್ ಸೀಟ್ ಸಿಗಲಿಲ್ಲ ಅದಕ್ಕೆ ಕಾರಣ #NEET ಪರೀಕ್ಷೆ. ಈ #Neet ಪರೀಕ್ಷೆಯಿಂದ ನಮ್ಮ ಕರ್ನಾಟಕದ ಮಕ್ಕಳಿಗೆ ಅನ್ಯಾಯವಾಗಿದೆ. ಈ #NEET ಪರೀಕ್ಷೆಯನ್ನು ಮೊದಲು ರದ್ದುಮಾಡಿ ನಮ್ಮ ಕರ್ನಾಟಕದ #CET ಯನ್ನು ಮರುಸ್ಥಾಪಿಸಬೇಕಾಗಿದೆ. #banNEET #SaveKarnatakaStudents ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ.. ಇಷ್ಟೇ ಕಾಲೇಜು, ಇಷ್ಟೇ ಸೀಟುಗಳಿದ್ದು ನೀವು ಸ್ಪರ್ಧಿಸಿ ಎನ್ನುವುದು ಮ್ಯೂಸಿಕಲ್ ಚೇರ್ ಆಟವಿದ್ದಂತೆ. ಅಲ್ಲಿ ಗೆಲ್ಲುವವರು ಕೆಲವರು ಮಾತ್ರ. ನಾವು ಮಧ್ಯಮ ವರ್ಗವಾಗಿದ್ದು ಹೆಚ್ಚಿನ ಹಣ ಕೊಟ್ಟು ಖಾಸಗಿ ಮೆಡಿಕಲ್ ಸೀಟು ಪಡೆಯಲು ಸಾಧ್ಯವಿಲ್ಲ. ಹಾಗಾಗಿ ನನ್ನ ಮಗಳನ್ನು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ ಕಳುಹಿಸಲು ತೀರ್ಮಾನ ಮಾಡಿದೆ”. – ಇದು ಉಕ್ರೇನ್‌ನ ಚರ್ನಿವಿಟ್ಸಿಯ ಬುಕೋವಿಯನ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ತಮ್ಮ ಮಗಳನ್ನು ಓದಿಸುತ್ತಿರುವ ಕನಕಪುರದ ನಿವಾಸಿ ಶಿವರಾಜುರವರ ಅಭಿಮತವಾಗಿದೆ.

ವಿಲನ್ನು #NEET ಮಾತ್ರ ಅಲ್ಲ. ಖಾಸಗಿ ಮೆಡಿಕಲ್ ಕಾಲೇಜು ಲಾಬಿ ಮತ್ತು ಅದರ ಮಾಲಕ ರಾಜಕಾರಣಿಗಳು ಸಮಸ್ಯೆಯ ಮೂಲ. ನಾಳೆ ವಿವರವಾಗಿ ಬರೆಯುವೆ. #BanNEET ಎಂದು ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಇದು ಸರಿಯಾದ ಸಮಯ. ಎಲ್ಲ ಖಾಸಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳ ರಾಷ್ಟ್ರೀಕರಣವಾಗಬೇಕು. ಸರ್ಕಾರವೇ ಉನ್ನತ ಹಂತದ ಶಿಕ್ಷಣವನ್ನು ಕಡಿಮೆ ದರದಲ್ಲಿ ಕೊಡಬೇಕು. ಕ್ಯಾಪಿಟೇಷನ್ ಲಾಬಿ ಕೊನೆಗೊಳ್ಳಬೇಕು. ಕೋಟಿಗಟ್ಟಲೆ ಹಣ ಕೊಟ್ಟು ಮೆಡಿಕಲ್ ಓದುವ ವೈದ್ಯನಿಂದ ನೀವು ಏನನ್ನು ನಿರೀಕ್ಷಿಸಬಹುದು. ಈ ದಂಧೆ ನಿಲ್ಲಲಿ. ಪ್ರತಿಭಾವಂತ ವಿದ್ಯಾರ್ಥಿಗಳು ಭಾರತದಲ್ಲೇ ಓದಲಿ, ಸಿರಿವಂತರು, ರಾಜಕಾರಣಿಗಳ ಉದ್ಯಮಿಗಳ ಮಕ್ಕಳು ಬೇಕಿದ್ದರೆ ವಿದೇಶಗಳಲ್ಲಿ ಓದಿಕೊಳ್ಳಲಿ. ಎಲ್ಲದಕ್ಕಿಂತ ಮೊದಲು ಕನ್ನಡದ ಮಕ್ಕಳ ಕತ್ತು ಹಿಸುಕುತ್ತಿರುವ ನೀಟ್ ತೊಲಗಲಿ ಎಂದು ಕರವೇ ಸಾಮಾಜಿಕ ಜಾಲತಾಣ ಮುಖ್ಯಸ್ಥರದ ದಿನೇಶ್ ಕುಮಾರ್ ಆಗ್ರಹಿಸಿದ್ದಾರೆ.

ನೀಟ್! ಪರಿಕ್ಷೆಯು ಕನ್ನಡಿಗರ ಪಾಲಿಗೆ ಸಮಸ್ಯೆ ಆಗಿರುವುದರಿಂದ, ಈ NEET ಪರಿಕ್ಷಾ ವ್ಯವಸ್ಥೆಯಿಂದ ಕರ್ನಾಟಕವು ಹೊರಬರಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಟ್ವಿಟರ್ ಅಭಿಯಾನ.
ಇಂದು ಸಂಜೆ 5 ಗಂಟೆಯಿಂದ ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕರೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ “ಶೇ.90 ರಷ್ಟು ಭಾರತೀಯ ವಿದ್ಯಾರ್ಥಿಗಳು ಇಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲಿ ಫೇಲ್ ಆದ ಕಾರಣಕ್ಕೆ ವಿದೇಶಕ್ಕೆ ಹೋಗುತ್ತಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

4 COMMENTS

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಬಗ್ಗೆ ಸುಳ್ಳು ಪ್ರತಿಪಾದಿಸುವ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ತರಾಟೆಗೆ ತೆಗದುಕೊಂಡ ಎಕ್ಸ್‌...

0
ಕಾಂಗ್ರೆಸ್ ಮುಸ್ಲಿಮೇತರರಿಂದ ಸಂಪತ್ತನ್ನು ಕಸಿದುಕೊಂಡು ಮುಸ್ಲಿಂ ಸಮುದಾಯಕ್ಕೆ ನೀಡುತ್ತದೆ, ಮುಸ್ಲಿಮರ ತುಷ್ಟೀಕರಣ ಮಾಡುತ್ತದೆ ಎಂದು ಬಿಂಬಿಸುವ ಅನಿಮೇಟೆಡ್ ವೀಡಿಯೊವೊಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಎಚ್ಚರ..ಎಚ್ಚರ..ಎಚ್ಚರ.....