Homeಕರ್ನಾಟಕಸಂತೋಷ್‌ ಸಾವು: ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಬೆಂಗಳೂರಿನಲ್ಲಿ ದೂರು

ಸಂತೋಷ್‌ ಸಾವು: ಸಚಿವ ಈಶ್ವರಪ್ಪರನ್ನು ಬಂಧಿಸುವಂತೆ ಬೆಂಗಳೂರಿನಲ್ಲಿ ದೂರು

- Advertisement -
- Advertisement -

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ದ ಆಮ್‌ ಆದ್ಮಿ ಪಾರ್ಟಿ‌ ದೂರು ನೀಡಿದೆ. ಸಚಿವರನ್ನು ಕೂಡಲೇ ಬಂಧಿಸಬೇಕು ಎಂದು ಎಎಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಸಂತೋಷ್ ಅವರು ಈಶ್ವರಪ್ಪ ವಿರುದ್ಧ 40%ದಷ್ಟು ಕಮಿಷನ್‌ ಆರೋಪ ಮಾಡಿ ಈ ಹಿಂದೆಯೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರು ನೀಡಿದ್ದರು. ಆಗಲೇ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿದ್ದರೆ, ಇಂದು ಸಂತೋಷ್ ಅವರನ್ನು ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಆದರೆ ಆ ಸಂಬಂಧ ಯಾವುದೇ ತನಿಖೆ ನಡೆಯಲಿಲ್ಲ. ಭ್ರಷ್ಟ ಬಿಜೆಪಿಯ ಆಡಳಿತದಲ್ಲಿ ಪ್ರಾಮಾಣಿಕರ ಧ್ವನಿಗೆ ಬೆಲೆ ಇಲ್ಲವಾಗಿದೆ” ಎಂದು ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತೋಷ್ ಸಾವಿಗೆ ಸಂಬಂಧಪಟ್ಟಂತೆ ಬುಧವಾರದಂದು ಉಡುಪಿ ನಗರ ಪೊಲೀಸರು ಈಶ್ವರಪ್ಪ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದಾರೆ. ಅವರ ಸಹೋದರ ಪ್ರಶಾಂತ್‌ ಪಾಟೀಲ್‌ ದೂರಿನ ಮೇರೆಗ ಈ ಎಫ್‌ಐಆರ್‌ ದಾಖಲಾಗಿದ್ದು, ಅವರ ಇಬ್ಬರು ಆಪ್ತರನ್ನೂ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ: ಇಂತಹ ನೂರು ಕೇಸ್‌ ನೋಡಿದ್ದೇನೆ; ರಾಜೀನಾಮೆ ನೀಡುವ ಪ್ರಶ್ನೆಯೆ ಇಲ್ಲ: ಕೆ.ಎಸ್‌. ಈಶ್ವರಪ್ಪ

ಉಡುಪಿ ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಒಂದನೇ ಆರೋಪಿಯಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಎರಡನೇ ಆರೋಪಿಯಾಗಿ ಅವರ ಆಪ್ತ ಬಸವರಾಜ ಮತ್ತು ಮೂರನೇ ಆರೋಪಿಯಾಗಿ ಅವರ ಮತ್ತೊಬ್ಬ ಆಪ್ತ ರಮೇಶ್‌ ಸೇರಿದಂತೆ ಇತರರನ್ನು ಹೆಸರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ತಾವು ಕೈಗೊಂಡಿರುವ 4 ಕೋಟಿ ರೂ.ಗಳ ಕಾಮಗಾರಿಯಲ್ಲಿ 40% ದಷ್ಟು ಕಮಿಷನ್ ನೀಡುವಂತೆ ಸಚಿವರ ಸಂಗಡಿಗರು ಒತ್ತಾಯಿಸಿದ್ದಾರೆ ಎಂದು ಪ್ರಶಾಂತ್‌ ಪಾಟೀಲ್‌ ತನ್ನ ದೂರಿನಲ್ಲಿ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಈಶ್ವರಪ್ಪ ಅವರು, “ಪ್ರಕರಣ ಹೈಕಮಾಂಡ್‌ ತನಕ ಹೋಗಿಲ್ಲ. ಇಂತಹ ನೂರು ಕೇಸ್‌ಗಳನ್ನು ನೋಡಿದ್ದೇನೆ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಸಂತೋಷ್ ಪಾಟೀಲ್ ಮುಖ ಕೂಡಾ ನೋಡಿಲ್ಲ. ಅಂತದ್ದರಲ್ಲಿ ಅವರು ನನ್ನನ್ನು 80 ಬಾರಿ ಭೇಟಿ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅವರು ಡೆತ್‌ ನೋಟ್‌ ಬರೆದಿಲ್ಲ, ವಾಟ್ಸಪ್‌ನಲ್ಲಿ ಟೈಪ್‌ ಮಾಡಿದ್ದಾರೆ, ಅದು ಡೆತ್‌ ನೋಟ್‌ ಅಲ್ಲ. ಅವರು ಅವರಿಗೆ ದೆಹಲಿಗೆ ಫ್ಲೈಟ್‌ ಟಿಕೆಟ್‌ ಕೊಟ್ಟಿದ್ದು ಯಾರು. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ತನಿಖೆ ಆಗಬೇಕು” ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಸಿಎಂ ದೂರು ನೀಡುತ್ತೇನೆ. ಮುಖ್ಯಮಂತ್ರಿಯನ್ನು ಭೇಟಿಯಾಗಿ ಎಲ್ಲಾ ಮಾಹಿತಿಯನ್ನು ನೀಡಲಿದ್ದೇನೆ. ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಅವರಿಗೆ ಈಗಾಗಲೆ ಎಲ್ಲಾ ಮಾಹಿತಿಯನ್ನು ನೀಡಿದ್ದೇನೆ. ಈ ವಿಚಾರ ಹೈಕಮಾಂಡ್‌ ತನಕ ಹೋಗಿಲ್ಲ. ಘಟನೆಯ ಬಗ್ಗೆ ತನಿಖೆಯಾದರೆ ಅಸಲಿ ಸತ್ಯ ಹೊರಬರುತ್ತದೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.

“ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರು ಯಾವುದೆ ದಾಖಲೆಯಿಲ್ಲದೆ ಆರೋಪ ಮಾಡುತ್ತಿದ್ದಾರೆ. ಇಲ್ಲಿ ರಾಜೀನಾಮೆ ಪ್ರಶ್ನೆ ಉದ್ಭವ ಆಗುವುದಿಲ್ಲ. ಇಂತಹ ನೂರು ಕೇಸ್‌ಗಳನ್ನು ನೋಡಿದ್ದೇನೆ. ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ‌ ಸಂತೋಷ್‌ ಸಾವು: ಎಫ್‌ಐಆರ್‌‌ ದಾಖಲು; ಸಚಿವ ಈಶ್ವರಪ್ಪ ಆರೋಪಿ ನಂ. 1

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...