Homeಕರೋನಾ ತಲ್ಲಣದೆಹಲಿ ಸರ್ಕಾರ ಆಮ್ಲಜನಕವನ್ನು ಕದಿಯುತ್ತಿದೆ: ಹರಿಯಾಣ ಆರೋಗ್ಯ ಸಚಿವ ಆರೋಪ

ದೆಹಲಿ ಸರ್ಕಾರ ಆಮ್ಲಜನಕವನ್ನು ಕದಿಯುತ್ತಿದೆ: ಹರಿಯಾಣ ಆರೋಗ್ಯ ಸಚಿವ ಆರೋಪ

- Advertisement -
- Advertisement -

ದೇಶದ ಹಲವಾರು ರಾಜ್ಯಗಳಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು, ಜೊತೆಗೆ ವೈದ್ಯಕೀಯ ಆಮ್ಲಜನಕದ ಕೊರತೆಯೂ ಹೆಚ್ಚುತ್ತಿದೆ. ಈ ಮಧ್ಯೆ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರು ದೆಹಲಿ ಸರ್ಕಾರವು ಮಂಗಳವಾರ ಫರಿದಾಬಾದ್ ಆಸ್ಪತ್ರೆಗಳಿಗೆ ತೆರಳುತ್ತಿದ್ದ ಟ್ಯಾಂಕರ್‌ನಿಂದ ಆಮ್ಲಜನಕವನ್ನು ಕದಿಯುತ್ತಿದೆ ಎಂದು ಬುಧವಾರ ಆರೋಪಿಸಿದ್ದಾರೆ.

ಇಂತಹ ಘಟನೆಗಳಿಂದ ತಪ್ಪಿಸಲು, ಎಲ್ಲಾ ಆಮ್ಲಜನಕ ಟ್ಯಾಂಕರ್‌ಗಳಿಗೆ ರಾಜ್ಯ ಪೊಲೀಸ್ ಪಡೆಯಿಂದ ಬೆಂಗಾವಲು ನೀಡಲಾಗುವುದು ಎಂದು ವಿಜ್ ಹೇಳಿದ್ದಾರೆ.

ಇದನ್ನೂ ಓದಿ: ದೇಶದೆಲ್ಲೆಡೆ ಆಮ್ಲಜನಕ ಕೊರತೆ: ಒಂದು ವರ್ಷದಲ್ಲಿ ಭಾರತದ ಆಮ್ಲಜನಕ ರಫ್ತು 700% ಕ್ಕಿಂತ ಹೆಚ್ಚಾಗಿದೆ!

ಫರಿದಾಬಾದ್‌ನ ಆಸ್ಪತ್ರೆಗಳಿಗೆ ಆಮ್ಲಜನಕ ಸರಬರಾಜು ಮಾಡುವ ಟ್ಯಾಂಕರ್ ಅನ್ನು ದೆಹಲಿಯಲ್ಲಿ ನಿಲ್ಲಿಸಲಾಗಿದೆ ಮತ್ತು ಅದರಿಂದ ಅನಿಲವನ್ನು ಹೊರತೆಗೆಯಲಾಗಿದೆ ಎಂದು ಸರಣಿ ಟ್ವೀಟ್‌ಗಳಲ್ಲಿ ವಿಜ್ ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ಗಳಲ್ಲಿ ಮತ್ತು ಬುಧವಾರ ಬಿಡುಗಡೆ ಮಾಡಿರುವ ವೀಡಿಯೊ ಅವರು, “ಆಸ್ಪತ್ರೆಗಳಿಗೆ ಆಮ್ಲಜನಕವನ್ನು ವಿತರಿಸಲು ಫರೀದಾಬಾದ್‌ಗೆ ತೆರಳುತ್ತಿದ್ದ ಟ್ಯಾಂಕರ್‌ಗಳನ್ನು ನಿನ್ನೆ ದೆಹಲಿಯಲ್ಲಿ ಕೆಲವರು ತಡೆದಿದ್ದಾರೆಂದು ತಿಳಿದುಬಂದಿದೆ. ಸರ್ಕಾರಗಳು ಬಲವಂತವಾಗಿ ಈ ರೀತಿಯ ಆಮ್ಲಜನಕವನ್ನು ಕದಿಯಲು ಪ್ರಾರಂಭಿಸಿದರೆ, ಅದು ಅವ್ಯವಸ್ಥೆಗೆ ಕಾರಣವಾಗುತ್ತದೆ. ಇದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಲಸಿಕೆಯ ಬೆಲೆ ಘೋಷಿಸಿದ ಸೀರಮ್‌-ಕೇಂದ್ರಕ್ಕಿಂತ ರಾಜ್ಯಕ್ಕೆ ಹೆಚ್ಚು ಬೆಲೆ ನಿಗದಿ; ಕಾಂಗ್ರೆಸ್ ಆರೋಪ

ಹರಿಯಾಣದಲ್ಲಿ ಆಮ್ಲಜನಕದ ಪೂರೈಕೆ ಮತ್ತು ಲಭ್ಯತೆಯ ಬಗ್ಗೆ ಮಾತನಾಡಿದ ವಿಜ್ ಅವರು “ಬೇರೆ ರಾಜ್ಯಗಳಿಂದ ಪೂರೈಕೆಯಾಗುತ್ತಿದ್ದ ಆಮ್ಲಜನಕ ಇದೀಗ ನಿಲ್ಲಿಸಿದ್ದಾರೆ. ಆದ್ದರಿಂದ ಹರಿಯಾಣದಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ರಾಜ್ಯದ ರೋಗಿಗಳಿಗೆ ನೀಡಿ ಅವರನ್ನು ಸುರಕ್ಷಿತಗೊಳಿಸುತ್ತೇವೆ. ನಂತರ ಉಳಿದವುಗಳನ್ನು ಬೇರೆ ರಾಜ್ಯಗಳಿಗೆ ನೀಡುತ್ತೇವೆ” ಎಂದು ಹೇಳಿದ್ದಾರೆ.

ರಾಜ್ಯದ ಎಲ್ಲಾ ಆಮ್ಲಜನಕ ಉತ್ಪಾದನಾ ಘಟಕದ ಮೇಲ್ವಿಚಾರಣೆ ಮಾಡಲು ಹರಿಯಾಣದಾದ್ಯಂತ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆಹಾರ ಮತ್ತು ಔಷಧ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಈ ಮೊದಲ ರಾಜ್ಯ ಮಟ್ಟದ ಮಾನಿಟರಿಂಗ್ ಕಮಿಟಿಯ ಸಭೆಯಲ್ಲಿ ವಿಜ್‌ ಆದೇಶಿಸಿದ್ದರು.

ಜೊತೆಗೆ ಕಳ್ಳತನ ಮತ್ತು ಕಾಳ ಸಂತೆಯ ಬಗ್ಗೆ ಪರಿಶೀಲಿಸಲು ಎಲ್ಲಾ ಆಮ್ಲಜನಕ ಉತ್ಪಾದನಾ ಸ್ಥಾವರಗಳಲ್ಲಿ ರಾಜ್ಯ ಪೊಲೀಸ್ ಸಿಬ್ಬಂದಿಯನ್ನು ಸಹ ನಿಯೋಜಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಜನರ ಆಕ್ರೋಶಕ್ಕೆ ಮಣಿದ ಸರ್ಕಾರ: ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಮುಂದುವರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...