Homeಮುಖಪುಟ‘ಉಪಚುನಾವಣಾ ಆಯುಕ್ತರು ಬಿಜೆಪಿ ಪರವಾಗಿದ್ದಾರೆ’ - ಚುನಾವಣಾ ಆಯೋಗಕ್ಕೆ TMC ದೂರು

‘ಉಪಚುನಾವಣಾ ಆಯುಕ್ತರು ಬಿಜೆಪಿ ಪರವಾಗಿದ್ದಾರೆ’ – ಚುನಾವಣಾ ಆಯೋಗಕ್ಕೆ TMC ದೂರು

- Advertisement -

ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷವಾದ ಟಿಎಂಸಿ ಗುರುವಾರ ರಾಜ್ಯದ ಉಪ ಚುನಾವಣಾ ಆಯುಕ್ತ ಸುದೀಪ್ ಜೈನ್ ಅವರನ್ನು ಸೇವೆಯಿಂದ ಕಿತ್ತುಹಾಕಬೇಕೆಂದು ಒತ್ತಾಯಿಸಿದೆ. ಆಯುಕ್ತುರು ಪಕ್ಷಪಾತಿಯಾಗಿದ್ದು, ಫೆಡರಲ್‌ ರಚನೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಪಕ್ಷವು ಆರೋಪಿಸಿದೆ.

2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷಪಾತ ಮಾಡಿರುವ ಬಗ್ಗೆ “ದಾಖಲೆಯನ್ನು” ಹೊಂದಿರುವ ಕಾರಣ ಅವರನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ ಪಕ್ಷದ ಮುಖಂಡ ಡೆರೆಕ್ ಒ ‘ಬ್ರಿಯಾನ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ಟಿಎಂಸಿ ವಕ್ತಾರ ಸೌಗತಾ ರಾಯ್ ಹೇಳಿದ್ದಾರೆ.

ಇದನ್ನೂ ಓದಿ: ಜನಸಂಖ್ಯಾವಾರು ಮೀಸಲಾತಿ ಈ ಕ್ಷಣದ ತುರ್ತು: ಸದಾನಂದ ಗಂಗನಬೀಡು

“ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸುದೀಪ್ ಜೈನ್ ಅವರು ಚುನಾವಣಾ ಆಯೋಗದ ಮಾನದಂಡಗಳಿಗೆ ವಿರುದ್ಧವಾಗಿ ಮಾತ್ರವಲ್ಲದೆ ಫೆಡರಲ್ ರಚನೆಯ ವಿರುದ್ಧವೂ ಹಲವಾರು ಕ್ರಮಗಳನ್ನು ಕೈಗೊಂಡಿದ್ದರು. ನಮಗೆ ಅವರ ಮೇಲೆ ನಂಬಿಕೆಯಿಲ್ಲ” ಎಂದು ಅವರು ಹೇಳಿದ್ದಾರೆ.

“ಈ ಬಾರಿಯು ಅವರು ಬಿಜೆಪಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡುವ ಕ್ರಮಗಳನ್ನು ಕೈಗೊಳ್ಳುತ್ತಾರೆ. ಮುಕ್ತ ಮತ್ತು ನ್ಯಾಯಯುತ ಚುನಾವಣೆಗಾಗಿ ಅವರನ್ನು ಪಶ್ಚಿಮ ಬಂಗಾಳದ ಚುನಾವಣೆಯ ಉಸ್ತುವಾರಿ ಸ್ಥಾನದಿಂದ ತೆಗೆದುಹಾಕಬೇಕೆಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ” ಎಂದು ಸೌಗತಾ ರಾಯ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಈ ಬಾರಿ ರಾಜ್ಯ ಚುನಾವಣೆಯಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯಲಿದ್ದು, ಮಾರ್ಚ್ 27 ರಂದು 30 ಕ್ಷೇತ್ರಗಳ ಮತದಾನ ಆರಂಭವಾಗುವ ಮೂಲಕ ಅಲ್ಲಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆಯು ಎಂಟು ಹಂತಗಳಲ್ಲಿ ನಡೆಯಲಿದೆ. ಎಲ್ಲಾ 294 ಸ್ಥಾನಗಳಿಗೆ ಚುನಾವಣೆ ನಡೆದ ಬಳಿಕ ಮೇ 2 ರಂದು ಎಣಿಕೆ ಮಾಡಲಾಗುತ್ತದೆ.

ಇದನ್ನೂ ಓದಿ: ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

1
"ಪ್ರಜಾಪ್ರಭುತ್ವ ವಿರೋಧಿಗಳು, ಕೋಮುವಾದಿಗಳು ಕ್ರಿಯಾಶೀಲವಾಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ" ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್‌ ಹೇಳಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋವನ್ನು ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ರಾಯಚೂರಿನ ಜಿಲ್ಲಾ...
Wordpress Social Share Plugin powered by Ultimatelysocial