Homeಅಂತರಾಷ್ಟ್ರೀಯಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಭಾರತದಲ್ಲಿ ಮಾನವಹಕ್ಕು ಹೋರಾಟಗಾರರ ಬಂಧನವಾಗುತ್ತಿದೆ: ವಿಶ್ವಸಂಸ್ಥೆ ಕಳವಳ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ ಎಂದಿದೆ

- Advertisement -
- Advertisement -

ಭಾರತದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮಾನವಹಕ್ಕು ಕಾರ್ಯಕರ್ತರು ಹಾಗೂ ಸಾಮಾಜಿಕ ಹೋರಾಟಗಾರರು, ಅದರಲ್ಲೂ ನಿರ್ದಿಷ್ಟವಾಗಿ, ವಿವಾದಾತ್ಮಕ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾದ ಹೋರಾಟಗಾರರನ್ನು ಭಯೋತ್ಪಾದನೆ ನಿಗ್ರಹದಂತಹ ಕಠಿಣ ಕಾನೂನುಗಳಡಿ ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಆತಂಕ ವ್ಯಕ್ತಪಡಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಮಿಷೆಲ್ ಬ್ಯಾಚಲೆಟ್ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತವು ಮಾನವ ಹಕ್ಕುಗಳ ಕಾರ್ಯಕರ್ತರನ್ನು ರಕ್ಷಿಸಲು ಹೆಚ್ಚಿನ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಮೂರು “ಸಮಸ್ಯಾತ್ಮಕ” ಭಾರತೀಯ ಕಾನೂನುಗಳ ಬಗ್ಗೆ ಗಮನಸೆಳೆದಿರುವ ಅವರು, ಆ ಕಾನೂನುಗಳು ಸಾಮಾಜಿಕ ಕಾರ್ಯಕರ್ತರ ಬಂಧನಕ್ಕೆ ಕಾರಣವಾಗಿದೆ ಮತ್ತು ಸರ್ಕಾರೇತರ ಸಂಸ್ಥೆಗಳ ಕೆಲಸಕ್ಕೆ ನಿರ್ಬಂಧಗಳನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಮಿಷನರ್

ಸಾರ್ವಜನಿಕ ಹಿತಾಸಕ್ತಿಗೆ ಹಾನಿಯುಂಟು ಮಾಡುವ ಯಾವುದೇ ಚಟುವಟಿಕೆಗಳಿಗೆ ವಿದೇಶಿ ನಿಧಿಯನ್ನು ಪಡೆಯುವುದನ್ನು ನಿಷೇಧಿಸುವ ’ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ’ (FCRA) ಸೇರಿದಂತೆ ನಾಗರಿಕ ಸಮಾಜದಲ್ಲಿ ಧ್ವನಿಗಳನ್ನು ಅಡಗಿಸಲು ಹೆಚ್ಚಾಗಿ ಬಳಸಲಾಗುತ್ತಿರುವ ವಿದೇಶಿ ಧನಸಹಾಯವನ್ನು ನಿರ್ಬಂಧಿಸುವ ಅಸ್ಪಷ್ಟ ಪದಗಳಿಂದ ಕೂಡಿರುವ ಕಾನೂನುಗಳ ಬಗ್ಗೆ ಅವರು ವಿಷಾದಿಸಿದರು.

ಸಿಎಎ-ಎನ್​ಆರ್​ಸಿ ವಿರೋಧಿ ಪ್ರತಿಭಟನೆ.

“ಇದರಿಂದಾಗಿ ಎನ್‌ಜಿಒ ಕಚೇರಿಗಳ ಮೇಲೆ ಅಧಿಕೃತ ದಾಳಿಗಳು ಮತ್ತು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ, FCRA  ಕಾಯ್ದೆಯನ್ನು ಹೇರಿ ಸಮರ್ಥಿಸಲಾಗುತ್ತಿದೆ” ಎಂದು ಅವರು ಹೇಳಿದರು.

ಅಷ್ಟೇ ಅಲ್ಲದೆ, ಅಸ್ಪಷ್ಟವಾಗಿ ವ್ಯಾಖ್ಯಾನಿಸಲಾದ ‘ಸಾರ್ವಜನಿಕ ಹಿತಾಸಕ್ತಿ’ಯ ಆಧಾರದಲ್ಲಿ ಈ ಕಾನೂನನ್ನು ದುರ್ಬಳಕೆಗೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಎನ್‌ಜಿಒಗಳ ಟೀಕಾತ್ಮಕ ವರದಿ ಮತ್ತು ಪ್ರತಿಪಾದನೆಗಳ ಕುರಿತು ಬರದರಿಕೆ ಹಾಕಲು ಮತ್ತು ದಂಡಿಸಲು ಈ ಕಾನೂನುಗಳನ್ನು ಅಧಿಕಾರಿಗಳು ಬಳಸುತ್ತಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂ ಓದಿ: ಭಾರತ ದೇಶದಲ್ಲಿ ಮಾನವ ಹಕ್ಕುಗಳಿಗೆ ಬೆಲೆಯೇ ಇಲ್ಲ

ಇತ್ತೀಚಿನ ತಿಂಗಳುಗಳಲ್ಲಿ ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಹೆಚ್ಚಿನ ಒತ್ತಡಕ್ಕೆ ಒಳಗಾಗಿದ್ದಾರೆ. ವಿಶೇಷವಾಗಿ ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿರುವವರು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತಿದ್ದಾರೆ ಎಂದು ಬ್ಯಾಚಲೆಟ್ ಹೇಳಿದ್ದಾರೆ.

 

ಸಿಎಎ ವಿರುದ್ಧ ಪ್ರತಿಭಟಿಸಿದ್ದಕ್ಕಾಗಿ ಅನೇಕ ಸಾಮಾಜಿಕ ಕಾರ್ಯಕರ್ತರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು ಮತ್ತು ಅಂತಹುದೇ ಕಾನೂನುಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂಬುವುದನ್ನು ಅವರು ಉಲ್ಲೇಖಿಸಿದ್ದಾರೆ.

“ರಚನಾತ್ಮಕ ಟೀಕೆ ಪ್ರಜಾಪ್ರಭುತ್ವದ ಜೀವನಾಡಿ. ಅಧಿಕಾರಿಗಳಿಗೆ ಈ ಟೀಕೆ ಹಿತವಾಗಿಲ್ಲ ಎಂದೆನಿಸಿದರೂ ಅದನ್ನು ಎಂದಿಗೂ ಅಪರಾಧೀಕರಿಸಬಾರದು ಅಥವಾ ಕಾನೂನು ಬಾಹಿರಗೊಳಿಸಬಾರದು”

~ಮಿಷೆಲ್ ಬ್ಯಾಚಲೆಟ್, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್

“ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಶಾಂತಿಯುತ ಸಭೆ ನಡೆಸಿ ತಮ್ಮ ಹಕ್ಕು ಚಲಾಯಿಸಿದ್ದಕ್ಕೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ಮತ್ತು ನಾಗರಿಕ ಸಮಾಜವನ್ನು ರಕ್ಷಿಸಲು ಭಾರತವು ಕಾನೂನು ಮತ್ತು ನೀತಿಯಲ್ಲಿ ಇನ್ನೂ ಹೆಚ್ಚಿನದನ್ನು ಮಾಡಲು ನಾನು ಸರ್ಕಾರವನ್ನು ಕೋರುತ್ತೇನೆ” ಎಂದು ಬ್ಯಾಚಲೆಟ್ ಹೇಳಿದರು.

ಇದನ್ನೂ ಓದಿ: ಅಜೀವಪಯಂತ ಮಾನವಹಕ್ಕುಗಳ ಹೋರಾಟಗಾರ ರೋಣ ವಿಲ್ಸನ್

ಭಯೋತ್ಪಾದನೆಯ ಆರೋಪ ಹೊರಿಸಲ್ಪಟ್ಟಿರುವ ಹಿರಿಯ ಭಾರತೀಯರಾಗಿರುವ ಕೆಥೋಲಿಕ್ ಧರ್ಮಗುರು ಸ್ಟಾನ್ ಸ್ವಾಮಿ ಸೇರಿದಂತೆ 1,500ಕ್ಕೂ ಅಧಿಕ ಜನರನ್ನು ಬಂಧಿಸಿರುವುದು ವರದಿಯಾಗಿದೆ ಎಂದು ಬ್ಯಾಚಲೆಟ್ ಉಲ್ಲೇಖಿಸಿದ್ದಾರೆ.

ಸ್ಟ್ಯಾನ್
Father Stan Swamy

ಕಳೆದ ತಿಂಗಳು ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಸಂಸ್ಥೆಯಾದ ’ಅಮ್ನೆಸ್ಟಿ ಇಂಟರ್ ನ್ಯಾಷನಲ್’  ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಸರ್ಕಾರವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದು ಮತ್ತು ತನ್ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಎಂದು ಅದು ಉಲ್ಲೇಖಿಸಿತ್ತು, ಈ ಹಿನ್ನಲೆಯಲ್ಲಿ ಬ್ಯಾಚಲೆಟ್ ಅವರ ಹೇಳಿಕೆ ಮಹತ್ವದ್ದಾಗಿದೆ.

ಟೀಕೆ ನಿರಾಕರಿಸಿದ ಭಾರತ

ಕೇಂದ್ರ ಸರ್ಕಾರ ಬ್ಯಾಚಲೆಟ್ ಟೀಕೆಗಳನ್ನು ತಿರಸ್ಕರಿಸಿದ್ದು, “ಕಾನೂನು ಉಲ್ಲಂಘನೆಯನ್ನು ಮಾನವ ಹಕ್ಕುಗಳ ನೆಪದಲ್ಲಿ ಕ್ಷಮಿಸಲಾಗುವುದಿಲ್ಲ” ಎಂದು ಹೇಳಿದೆ.

ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ವಿಶ್ವಸಂಸ್ಥೆಯೊಂದರಿಂದ ಈ ವಿಷಯದ ಬಗ್ಗೆ ಹೆಚ್ಚು ತಿಳುವಳಿಕೆಯುಳ್ಳ ಅಭಿಪ್ರಾಯವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...