Homeಮುಖಪುಟ"ಸಿಂಹಾಸನದ ಮೇಲೆ ಕುಳಿತಿರುವ ಸರ್ವಾಧಿಕಾರಿ ಒಬ್ಬ ಹೇಡಿ.." ತಮ್ಮ ಹಿಂದಿನ ವಿಡಿಯೋ ಹಂಚಿಕೊಂಡ ಮಲಿಕ್

“ಸಿಂಹಾಸನದ ಮೇಲೆ ಕುಳಿತಿರುವ ಸರ್ವಾಧಿಕಾರಿ ಒಬ್ಬ ಹೇಡಿ..” ತಮ್ಮ ಹಿಂದಿನ ವಿಡಿಯೋ ಹಂಚಿಕೊಂಡ ಮಲಿಕ್

- Advertisement -
- Advertisement -

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಒಂದು ದಿನದ ನಂತರ ಬಿಹಾರ, ಜಮ್ಮು ಮತ್ತು ಕಾಶ್ಮೀರ, ಗೋವಾ ಮತ್ತು ಮೇಘಾಲಯ ರಾಜ್ಯಗಳ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ಸಂದರ್ಶನದ ವೀಡಿಯೊ ಕ್ಲಿಪ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಸಿಂಹಾಸನದ ಮೇಲೆ ಕುಳಿತಿರುವ ಸರ್ವಾಧಿಕಾರಿ ಒಬ್ಬ ಹೇಡಿ..” ಎಂದು ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವೈರಲ್ ವೀಡಿಯೊವೊಂದರಲ್ಲಿ, 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕೇಜ್ರಿವಾಲ್ ಅವರ ಬಂಧನದ ಭವಿಷ್ಯವನ್ನು ಮಲಿಕ್ ಕೇಳಿದ್ದಾರೆ. ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಲಿಕ್ ಅವರು, “ಸಾರ್ವತ್ರಿಕ ಚುನಾವಣೆಯ ಮೊದಲು ಕೇಜ್ರಿವಾಲ್ ಅವರನ್ನು ನೂರಕ್ಕೆ ನೂರರಷ್ಟು ಬಂಧಿಸಲಾಗುವುದು” ಎಂದು ಹೇಳಿದ್ದಾರೆ. “ದಿಲ್ಲಿ ಮಿ ತೋ ಮುಜೆ ಲಗ್ತಾ ಬ್ಯಾಂಡ್ ಕರೆಂಗೆ ಉಂಕೋ ಎಲೆಕ್ಷನ್ ಸೆ ಪೆಹ್ಲೆ (ಚುನಾವಣೆಗೆ ಮುನ್ನ ಕೇಜ್ರಿವಾಲ್ ಅವರನ್ನು ಬಂಧಿಸುತ್ತಾರೆ ಎಂದು ನಾನು ನಂಬುತ್ತೇನೆ)” ಎಂದು ಅವರು ಹೇಳಿದ್ದರು.

ಸತ್ಯಪಾಲ್ ಮಲಿಕ್ ಅವರು ತಮ್ಮ ಸಂದರ್ಶನದ ವೀಡಿಯೊವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ. ವೀಡಿಯೋಗೆ ಅಡಿಬರಹ ನೀಡಿರುವ ಅವರು, “ನಾನು ಸುಮಾರು 10 ತಿಂಗಳ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದೆ, ಈ ಮೋದಿ ಸರ್ಕಾರವು ಅರವಿಂದ್ ಕೇಜ್ರಿವಾಲ್ ಅವರನ್ನು ಚುನಾವಣೆಗೆ ಮುನ್ನ ಬಂಧಿಸುತ್ತದೆ. ಸಿಂಹಾಸನದ ಮೇಲೆ ಕುಳಿತಿರುವ ಸರ್ವಾಧಿಕಾರಿ ಒಬ್ಬ ಹೇಡಿ, ಅವರು ಸರ್ಕಾರದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಮಲಿಕ್, “ಇಂದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ, ಮೋದಿ ಸರ್ಕಾರವು ತನ್ನ ಶವಪೆಟ್ಟಿಗೆಗೆ ಕೊನೆಯ ಮೊಳೆಯನ್ನು ಹಾಕಿದೆ” ಎಂದು ಬರೆದುಕೊಂಡಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ಕೇಂದ್ರೀಯ ತನಿಖಾ ದಳ (ಸಿಬಿಐ)ವು ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ಸಂಬಂಧಿಸಿದ 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಿರು ಜಲವಿದ್ಯುತ್ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ.

ಕಳೆದ 3-4 ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಸರ್ಕಾರಿ ಏಜೆನ್ಸಿಗಳ ಮೂಲಕ ತನ್ನ ಮನೆ ಮೇಲೆ ಸರ್ವಾಧಿಕಾರಿ ದಾಳಿ ನಡೆಸುತ್ತಿದ್ದಾರೆ ಎಂದು ಮಲಿಕ್ ಆಗ ಹೇಳಿದ್ದರು. “ನನ್ನ ಚಾಲಕ ಮತ್ತು ನನ್ನ ಸಹಾಯಕರ ಮೇಲೆಯೂ ದಾಳಿ ಮಾಡಲಾಗುತ್ತಿದೆ; ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ. ನಾನೊಬ್ಬ ರೈತನ ಮಗ, ಈ ದಾಳಿಗಳಿಗೆ ನಾನು ಹೆದರುವುದಿಲ್ಲ. ನಾನು ರೈತರೊಂದಿಗೆ ಇದ್ದೇನೆ” ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು.

ಇದನ್ನೂ ಓದಿ; ‘ದೇಶಕ್ಕಾಗಿ ನನ್ನ ಜೀವನ ಸಮರ್ಪಿಸಲಾಗಿದೆ..; ಬಂಧನದ ನಂತರ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...