Homeಮುಖಪುಟಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

ಕೊರೊನಾ ಕಾಲದಲ್ಲಿ ಪತ್ರಕರ್ತರ ವಜಾ ಕಾನೂನುಬಾಹಿರ : ಪಿಐಎಲ್‌ ವಿಚಾರಣೆ

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ ಪ್ರಮುಖ ಮಾಧ್ಯಮಗಳು ತಮ್ಮ ಪತ್ರಕರ್ತರ ನ್ನು ವಜಾಗೊಳಿಸಿರುವುದು ಅಥವಾ ಸಂಬಳ ಕಡಿತಗೊಳಿಸಿರುವುದರ ಕುರಿತು ಸಲ್ಲಿಸಲಾದ ಪಿಐಎಲ್‌ ಗೆ ಉತ್ತರಿಸುವಂತೆ ಬಾಂಬೆ ಹೈಕೋರ್ಟ್ ನಿನ್ನೆ ಕೇಂದ್ರ ಸರ್ಕಾರ, ಮಹಾರಾಷ್ಟ್ರ ರಾಜ್ಯ ಸರ್ಕಾರ ಸೇರಿದಂತೆ ಹತ್ತು ಮಾಧ್ಯಮಗಳಿಗೆ ನೋಟಿಸ್ ನೀಡಿದೆ.

ಮಹಾರಾಷ್ಟ್ರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್‌  ಮತ್ತು ನಾಗ್ಪುರ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಪತ್ರಕರ್ತರ ಸಂಘಗಳು ಮಾಧ್ಯಮ ಸಂಸ್ಥೆಗಳು ಕೆಲಸದಿಂದ ತೆಗೆದಿರುವುದನ್ನು ವಿರೋಧಿಸಿ ಪಿಐಎಲ್ ಸಲ್ಲಿಸಿವೆ. ವೇತನ ಕಡಿತ ಮತ್ತು ಪತ್ರಕರ್ತರ ವಜಾಗಳನ್ನು “ಕಾನೂನುಬಾಹಿರ ಮತ್ತು ಅನಿಯಂತ್ರಿತ” ಪಿಐಎಲ್‌ನಲ್ಲಿ ವಾದಿಸಲಾಗಿದೆ.

ಬಾಂಬೆ ಹೈಕೋರ್ಟ್‌‌ನ ನ್ಯಾಯಮೂರ್ತಿಗಳಾದ ಎಸ್.ಬಿ. ಶುಕ್ರೆ ಮತ್ತು ಎ.ಎಸ್. ಕಿಲೋರ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸುತ್ತಿದ್ದು ಈ ಕುರಿತು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ, ವಿದರ್ಭ ಡೈಲಿ ಪತ್ರಿಕೆಗಳು, ಲೋಕಮತ್ ಮೀಡಿಯಾ, ಟೈಮ್ಸ್ ಆಫ್ ಇಂಡಿಯಾ / ಮಹಾರಾಷ್ಟ್ರ ಟೈಮ್ಸ್, ದೈನಿಕ್ ಭಾಸ್ಕರ್, ಸಕಲ್ ಮೀಡಿಯಾ, ಇಂಡಿಯನ್ ಎಕ್ಸ್ ಪ್ರೆಸ್ / ಲೋಕ ಸತ್ತಾ, ತರುಣ್ ಭಾರತ್, ನವ ಭಾರತ್ ಮೀಡಿಯಾ ಗ್ರೂಪ್, ದೇಶೋನ್ನತಿ ಗ್ರೂಪ್ ಮತ್ತು ಪುಣ್ಯ ನಗರಿ ಗ್ರೂಪ್ ಸೇರಿದಂತೆ ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.


ಇದನ್ನೂ ಓದಿ: ನಷ್ಟದ ಜೊತೆಗೆ ಲಾಕ್‌ಡೌನ್‌ ಎಫೆಕ್ಟ್‌: TV5 ನಿಂದ 100ಕ್ಕೂ ಹೆಚ್ಚು ಪತ್ರಕರ್ತರು ಹೊರಕ್ಕೆ


COVID-19 ಕಾರಣದಿಂದಾಗಿ ವಿಧಿಸಲಾದ ಲಾಕ್‌ಡೌನ್ ಸಮಯದಲ್ಲಿಯೂ ಸಹ ಮಾಧ್ಯಮ ಸಂಸ್ಥೆಗಳ ನೌಕರರು ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ಸೇವೆಗಳನ್ನು ಕೊನೆಗೊಳಿಸುವ ಮೂಲಕ ಅಥವಾ ತಮ್ಮ ಒಪ್ಪಂದಗಳನ್ನು ನವೀಕರಿಸಲು ನಿರಾಕರಿಸುವ ಮೂಲಕ, ಮಾಧ್ಯಮ ಸಂಸ್ಥೆಗಳು ಅಮಾನವೀಯ ಮತ್ತು ಕಾನೂನುಬಾಹಿರ ಅಭ್ಯಾಸಗಳಲ್ಲಿ ತೊಡಗುತ್ತಿವೆ ಎಂದು ಪಿಐಎಲ್‌ನಲ್ಲಿ ಉಲ್ಲೇಖಿಸಲಾಗಿದೆ. ಹಲವಾರು ಪತ್ರಿಕೆ ಸಂಸ್ಥೆಗಳು ತಮ್ಮ ಉದ್ಯೋಗಿಗಳ ಸೇವೆಗಳನ್ನು ಕೊನೆಗೊಳಿಸುತ್ತಿವೆ ಅಥವಾ “ಅನಿಯಂತ್ರಿತ ರೀತಿಯಲ್ಲಿ” ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ತಮ್ಮ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಬೇಡಿ ಅಥವಾ ವೇತನ ಕಡಿತಗೊಳಿಸಬಾರದು ಎಂದು ದೇಶದ ಎಲ್ಲಾ ಕಂಪೆನಿಗಳಿಗೆ ಪ್ರಧಾನಿ ಮೋದಿಯವರು ಮನವಿ ಮಾಡಿದ್ದಾರೆ. ಆದರೆ ಅದನ್ನು ಮಾಧ್ಯಮ ಸಂಸ್ಥೆಗಳು ಗಣನೆಗೆ ತೆಗೆದುಕೊಂಡಿಲ್ಲ. ಮಾರ್ಚ್ 20 ರಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇದೇ ರೀತಿಯ ಸಲಹೆಯನ್ನು ನೀಡಿತು. ಪತ್ರಿಕೆಗಳು ಮತ್ತು ಇತರ ಮಾಧ್ಯಮ ಸಂಸ್ಥೆಗಳ ಮಾಲೀಕರ ಇಂತಹ ಕ್ರಮಗಳು “ಅಮಾನವೀಯ ಮತ್ತು ಕಾನೂನುಬಾಹಿರ”ವಾಗಿವೆ. ಭಾರತದ ಸಂವಿಧಾನದ 14, 19 ಮತ್ತು 21 ನೇ ವಿಧಿ ನಾಗರಿಕರಿಗೆ ಖಾತರಿಪಡಿಸಿದ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಪಿಐಎಲ್ ಉಲ್ಲೇಖಿಸಿದೆ.

“ಕೊರೊನಾವೈರಸ್ ಸಾಂಕ್ರಾಮಿಕ ಬಿಕ್ಕಟ್ಟನ್ನು” ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಾ ಹಲವು ಮಾಧ್ಯಮ ಸಂಸ್ಥೆಗಳು ತಮ್ಮ ಒಪ್ಪಂದವನ್ನು ಮೀರಿ ವರ್ತಿಸುತ್ತಿವೆ. ಬಲವಂತವಾಗಿ ಕೆಲಸದಿಂದ ತೆಗೆಯಲಾಗುತ್ತಿದೆ. ಅನಿಯಂತ್ರಿತ ವೇತನ ಕಡಿತ ಮಾಡಲಾಗುತ್ತಿದೆ. ಇದನ್ನು ತಡೆಯಬೇಕೆಂದು ಪಿಐಎಲ್‌ ಕೋರಿದೆ.

ಪತ್ರಕರ್ತರಿಗೆ ಸಂಭಾವನೆ ನೀಡುವ ಬಗ್ಗೆ ಮಜಿತಿಯಾ ವೇತನ ಮಂಡಳಿಯ ಶಿಫಾರಸುಗಳನ್ನು ಕೇಂದ್ರವು 2011 ರಲ್ಲಿ ಅಂಗೀಕರಿಸಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಆದರೆ ಪ್ರಸ್ತುತ ಮಾಧ್ಯಮ ಸಂಸ್ಥೆಗಳು ವರ್ಕಿಂಗ್ ಜರ್ನಲಿಸ್ಟ್ಸ್ ಆಕ್ಟ್ 1955 ಒದಗಿಸಿದ ಚೌಕಟ್ಟಿನ ಶಿಫಾರಸುಗಳನ್ನು ಉಲ್ಲಂಘಿಸಿವೆ ಎಂದು ಪಿಐಎಲ್‌ನಲ್ಲಿ ವಾದಿಸಲಾಗಿದೆ.


ಇದನ್ನೂ ಓದಿ: “ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...