Homeಕರ್ನಾಟಕಪ್ರಬಲ ಜಾತಿಗಳನ್ನು 2 ಎ ವರ್ಗಕ್ಕೆ ಸೇರಿಸಬಾರದು: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯ

ಪ್ರಬಲ ಜಾತಿಗಳನ್ನು 2 ಎ ವರ್ಗಕ್ಕೆ ಸೇರಿಸಬಾರದು: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯ

ಸರ್ಕಾರ ಬಲಿಷ್ಠರ ನ್ಯಾಯಬದ್ಧವಲ್ಲದ ಒತ್ತಾಯಕ್ಕೆ ಮಣಿದರೆ ತಬ್ಬಲಿ ಸಮುದಾಯಗಳ ಸಾಮೂಹಿಕ ಆತ್ಮಹತ್ಯೆಗೆ ಪ್ರೇರಣೆಯಾಗುತ್ತದೆ. 102 ಜಾತಿಗಳೂ ಒಟ್ಟಾಗಿ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗುತ್ತದೆ- ಪಿ.ಆರ್‌. ರಮೇಶ್

- Advertisement -
- Advertisement -

2ಎ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಲಿಂಗಾಯತ ಸಮುದಾಯ ಆಗ್ರಹಿಸುತ್ತಿರುವ ಬೆನ್ನಲ್ಲೇ, “ಪ್ರಬಲ ಸಮುದಾಯಗಳನ್ನು ಪ್ರವರ್ಗ 2ಎ ಪಟ್ಟಿಗೆ ಸೇರ್ಪಡೆ ಮಾಡಬಾರದು” ಎಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಒತ್ತಾಯಿಸಿದೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷ ಎಂ.ಸಿ.ವೇಣುಗೋಪಾಲ್‌ ನೇತೃತ್ವದ ನಿಯೋಗ ಮಂಗಳವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.

“ಪ್ರವರ್ಗ 2ಎ ಪಟ್ಟಿಯಲ್ಲಿ 102 ಸಮುದಾಯಗಳಿದ್ದು, ಕೇವಲ ಶೇ 15ರಷ್ಟು ಮೀಸಲಾತಿ ಹಂಚಿಕೊಳ್ಳುತ್ತಿವೆ. ಪ್ರಬಲ ಸಮುದಾಯಗಳ ಒತ್ತಡ ಗಮನಿಸಿದರೆ ಸಣ್ಣಪುಟ್ಟ ಸಮುದಾಯಗಳ ಭವಿಷ್ಯ ಅತ್ಯಂತ ದಾರುಣವಾಗುವ ಸಾಧ್ಯತೆ ಇದೆ” ಎಂದು ಸಮಿತಿಯ ಗೌರವ ಸಲಹೆಗಾರ ವಿ.ಆರ್. ಸುದರ್ಶನ್ ಮತ್ತು ಸಿ.ಎಸ್. ದ್ವಾರಕನಾಥ್ ಕಳವಳ ವ್ಯಕ್ತಪಡಿಸಿದ್ದಾರೆ.

ಮನವಿ ಸ್ವೀಕರಿಸಿದ ಯಡಿಯೂರಪ್ಪ, ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು. ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಅನುದಾನ ನೀಡುವುದಾಗಿ ತಿಳಿಸಿದರು.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಪ್ರವರ್ಗ 2ಎ ಪಟ್ಟಿಗೆ ಸೇರ್ಪಡೆ ಮಾಡುವಂತೆ ಪ್ರಬಲ ಸಮುದಾಯಗಳು ಬಲ ಪ್ರದರ್ಶನ ಮಾಡುತ್ತಿವೆ. ಈಗಾಗಲೇ ಈ ಪಟ್ಟಿಯಲ್ಲಿರುವ ಅತಿ ಹಿಂದುಳಿದ ಜಾತಿಗಳು ಮೀಸಲಾತಿ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಿರುವಾಗ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದ ಈ ಸಣ್ಣಪುಟ್ಟ ಸಮುದಾಯಗಳಿಗೆ ತೊಂದರೆಯಾಗುತ್ತದೆ. ಅತಿ ಹಿಂದುಳಿದ ಜಾತಿಗಳ ಅಸ್ತಿತ್ವ ಮತ್ತು ಆಸ್ಮಿತೆಯನ್ನು ಕಾಪಾಡಬೇಕು” ಎಂದು ಹೇಳಿದರು.

ಅಧ್ಯಕ್ಷ ಎಂ.ಸಿ ವೇಣುಗೋಪಾಲ್‌ ಮಾತನಾಡಿ, “ಈ ಪಟ್ಟಿಯಲ್ಲಿರುವ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ‌ಈಗಾಗಲೇ ಸಿದ್ಧಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ವೇದಿಕೆಯ ಉಪಾಧ್ಯಕ್ಷ ಪಿ.ಆರ್‌. ರಮೇಶ್‌, “ಈ ಪಟ್ಟಿಯಲ್ಲಿರುವ ಅಸಹಾಯಕ, ಅಸಂಘಟಿತ ಜಾತಿಗಳ ಅಳಿವು-ಉಳಿವಿನ ಪ್ರಶ್ನೆ ಇದಾಗಿದೆ. ಸರ್ಕಾರ ಬಲಿಷ್ಠರ ನ್ಯಾಯಬದ್ಧವಲ್ಲದ ಒತ್ತಾಯಕ್ಕೆ ಮಣಿದರೆ ತಬ್ಬಲಿ ಸಮುದಾಯಗಳ ಸಾಮೂಹಿಕ ಆತ್ಮಹತ್ಯೆಗೆ ಪ್ರೇರಣೆಯಾಗುತ್ತದೆ. 102 ಜಾತಿಗಳೂ ಒಟ್ಟಾಗಿ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾಗುತ್ತದೆ” ಎಂದರು.


ಇದನ್ನೂ ಓದಿ: ಪಿಕೆ ಟಾಕೀಸ್: ನಿಗೂಢ ಅಥೆನ್ಸ್‌ನ ಜನಜೀವನವನ್ನು ಚಿತ್ರಿಸಿರುವ ಅದನ್ನು ಅಲೆಗರಿಯಾಗಿಸುವ ಸಿನಿಮಾಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...