Homeಕರ್ನಾಟಕಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ:...

ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್ ಆಡುತ್ತಿದೆ; ಕರಾವಳಿಯ ಎಲ್ಲ ಕೊಲೆ ತನಿಖೆ ಎನ್‌ಎಐಗೆ ವಹಿಸಲಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ರಾಜ್ಯ ಸರ್ಕಾರವು ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದಷ್ಟು ಅಸಮರ್ಥವಾಗಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ತೀವ್ರವಾಗಿ ಹರಿಹಾಯ್ದಿದ್ದು, “ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ರಾಜ್ಯ ಬಿಜೆಪಿ ಸರಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ?” ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ’’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ರಸ್ತೆಗಿಳಿದು ಕಲ್ಲು ಹೊಡೆಯಬಹುದು: ಸಂಸದ ತೇಜಸ್ವಿ ಸೂರ್ಯ ಆಡಿಯೋ ವೈರಲ್

“ಪ್ರವೀಣ್ ಹತ್ಯೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ ‘ಶಾಂತಿ ಕಾಪಾಡಿ’ ಎನ್ನುವ ಮಾತು ಬಂತಾ? ಬರಲಿಲ್ಲ. ನೆಮ್ಮದಿಗಾಗಿ ಕಿಂಚಿತ್ ಕ್ರಮ ವಹಿಸಿದಿರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು” ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“NIA ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. NIAಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ. ಇದಲ್ಲವೇ ವಿಪರ್ಯಾಸ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ರಾಜ್ಯ ಬಿಜೆಪಿ ಸರಕಾರಕ್ಕೆ ಅದು ಬೇಕಿಲ್ಲ. ಸಮರ್ಥ ಅಧಿಕಾರಿಗಳನ್ನು ನಂಬದೆ NIAಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲವೆ, ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ” ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

“ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು?” ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಸಂಬಂಧ ಬಿಜೆಪಿ ಅಧ್ಯಕ್ಷ ಕಟೀಲ್‌ರನ್ನು ತನಿಖೆಗೊಳಪಡಿಸಬೇಕು – ಸಿದ್ದರಾಮಯ್ಯ ಆಗ್ರಹ

“ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ” ಎಂದು ಕುಮಾರ ಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...