Homeಕರೋನಾ ತಲ್ಲಣಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

ಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

- Advertisement -
- Advertisement -

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಬಿಜೆಪಿಯ ಸ್ಪಷ್ಟ ಅನುಪಸ್ಥಿತಿಯ ಕಾರಣಕ್ಕೆ ಸಾರ್ವಜನಿಕರಲ್ಲಿ ಪಕ್ಷದ ಬಗ್ಗೆ ಆಕ್ರೋಶ ಮತ್ತು ಅಸಮಾಧಾನ ಶುರುವಾಗಿದೆ ಎಂಬುದನ್ನು ಮನಗಂಡಿರುವ ಬಿಜೆಪಿ ಪಕ್ಷ ತನ್ನ ಎಲ್ಲ ಹಂತದ ನಾಯಕರಿಗೂ ಜನರಿಗೆ ನೆರವಾಗಲು ಸೂಚಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಷ್ಟದಲ್ಲಿರುವ ಜನರೊಂದಿಗೆ “ಅನುಭೂತಿ ಮತ್ತು ಸಹಾನುಭೂತಿ”ಯಿಂದ ವರ್ತಿಸಲು ಹೇಳಿದೆ.
ಈ ಕುರಿತು ಎಲ್ಲ ಹಂತಗಳ ನಾಯಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸುತ್ತಿರುವ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ಮುಖಂಡರಿಗೆ ಔಷಧಿಗಳ ವಿತರಣೆ, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಹೆಚ್ಚಳ, ಆಮ್ಲಜನಕ ಲಭ್ಯತೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲು ತಿಳಿಸಿದ್ದಾರೆ. ‘ಮನೆಯಿಂದ ಹೊರಬನ್ನಿ ಜನರಿಗೆ ನೆರವಾಗಿ’ ಎಂದು ನೇರವಾಗಿ ತಿಳಿಸಿದ್ದಾರೆ.

ಎರಡನೇ ಅಲೆಯು ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವಾಗ ಕೇಂದ್ರ ಸರ್ಕಾರದ ಮೇಲೆ ಆರೋಪಿಸಿ, ನಮ್ಮ ಇಮೇಜ್ ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಟೂಲ್‌ಕಿಟ್ ಹೆಸರಲ್ಲಿ ಬಿಜೆಪಿ ಟ್ವೀಟ್‌ಗಳನ್ನು ಮಾಡಲಾಗಿತ್ತು. ಕಾಂಗ್ರೆಸ್‌ನ ನಕಲಿ ಲೆಟರ್‌ಹೆಡ್ ಬಳಸಿ ಇದನ್ನು ರಚಿಸಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದ ಟ್ವೀಟರ್ ಈ ಟ್ವೀಟ್‌ಗಳನ್ನು ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಕರೆದಿತ್ತು. ಇದು ಬಿಜೆಪಿಗೆ ಮುಜುಗರ ತಂದಿತ್ತು
“ಪಕ್ಷ ಮತ್ತು ಸರ್ಕಾರದ ವಿರುದ್ಧ ನಕಾರಾತ್ಮಕ ನಿರೂಪಣೆ ಸೃಷ್ಟಿಯಾಗಿದೆ ಎಂಬುದು ನಿಜ” ಎಂದು ಬಿಜೆಪಿಯ ಹಿರಿಯ ಮುಖಂಡರು ಇಂಡಿಯನ್ ಎಕ್ಸ್‌ಪ್ರೆಸ್‌ ಎದುರು ಒಪ್ಪಿಕೊಂಡರು.

“ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತಂದ ನಂತರವೇ ನಾವು ಅದರ ವಿರುದ್ಧ ಕೆಲಸ ಮಾಡಬಹುದು. ಅನೇಕರು ತಮ್ಮ ಕುಟುಂಬ ಸದಸ್ಯರನ್ನು ಮತ್ತು ಹತ್ತಿರದವರನ್ನು ಕಳೆದುಕೊಂಡಿರುವ ಸಮಯ ಇದು. ನಾವು ಅವರ ನೋವನ್ನು ಶಮನಗೊಳಿಸುವ, ಅವರ ತೊಂದರೆಗಳನ್ನು ಸರಾಗಗೊಳಿಸುವ ಮತ್ತು ಅವರೊಂದಿಗೆ ನಿಲ್ಲುವ ಸಮಯ. ಪಕ್ಷದ ಮುಖಂಡರು ಮತ್ತು ರಾಜ್ಯದಾದ್ಯಂತದ ಕಾರ್ಯಕರ್ತರು ಜನರ ಬಗ್ಗೆ ಸಹಾನುಭೂತಿ ಹೊಂದಲು ಕೇಳಿಕೊಳ್ಳಲಾಗಿದೆ’ ಎಂದರು.

ಕೋವಿಡ್ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯತಂತ್ರದ ಭಾಗವಾಗಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಅನಾಥವಾಗಿರುವ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯಕ್ರಮವನ್ನು ಸಿದ್ಧಪಡಿಸುವಂತೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಶನಿವಾರ ಪಕ್ಷದ ಆಡಳಿತದ ರಾಜ್ಯಗಳನ್ನು ಕೇಳಿದರು. ಮೋದಿ ಸರ್ಕಾರ ಏಳು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದಾಗ ಅದನ್ನು ಮೇ 30 ರಂದು ಪ್ರಾರಂಭಿಸಬೇಕು ಎಂದು ಹೇಳಿದರು.

ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳಿಗೆ ಬರೆದ ಪತ್ರದಲ್ಲಿ, ಎನ್‌ಡಿಎ ಸರ್ಕಾರದ ವಾರ್ಷಿಕೋತ್ಸವದಂದು ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ನಡ್ಡಾ ಒತ್ತಿ ಹೇಳಿದ್ದಾರೆ. ಬದಲಾಗಿ, ಜನರಿಗೆ ಪಕ್ಷದ ಕೃತಜ್ಞತೆಯನ್ನು ವ್ಯಕ್ತಪಡಿಸಲು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ.

“ಸಂಸದರು ಮತ್ತು ಶಾಸಕರು ಆಯಾ ಪ್ರದೇಶಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರ ಅಳವಡಿಸಲಾಗಿದೆಯೇ ಎಂದು ನೋಡಬೇಕು, ಹಾಸಿಗೆಗಳ ಲಭ್ಯತೆಗಾಗಿ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಬೇಕು, ಔಷಧಿಗಳನ್ನು ವಿತರಿಸಬೇಕು ಮತ್ತು ಕಷ್ಟದ ಸಮಯದಲ್ಲಿ ಸಂತ್ರಸ್ತರಿಗೆ ನೈತಿಕ ಬೆಂಬಲವಾಗಿರಬೇಕು” ಎಂದು ಬಿಜೆಪಿ ನಾಯಕ ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...