Homeಮುಖಪುಟಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆಗಳಿಗೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ”ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 8.2 ಕೋಟಿ ಪುರುಷ ಮತ್ತು 7.8 ಕೋಟಿ ಮಹಿಳಾ ಮತದಾರರು ಇರಲಿದ್ದಾರೆ. ಈ ಪೈಕಿ 60.2 ಲಕ್ಷ ಮಂದಿ ಮೊದಲ ಬಾರಿಗೆ ಮತದಾರರಾಗಿದ್ದಾರೆ” ಎಂದು ಹೇಳಿದರು.

”ಐದು ವಿಧಾನಸಭಾ ಚುನಾವಣೆಗೆ ಮುನ್ನ ನಾವು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರು, ರಾಜಕೀಯ ಪಕ್ಷಗಳ ವಕ್ತಾರರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ” ಎಂದು ಹೇಳಿದ್ದಾರೆ.

ಚುನಾವಣಾ ಆಯುಕ್ತರು ನೀಡಿರುವ ಮಾಹಿತಿಯಂತೆ ಮಿಜೋರಾಂ ವಿಧಾನಸಭೆಯ ಅವಧಿ ಡಿಸೆಂಬರ್ 17ಗೆ ಕೊನೆಗೊಳ್ಳಲ್ಲಿದ್ದು, ಛತ್ತೀಸ್ಗಢ ವಿಧಾನಸಭೆ ಅವಧಿ ಜನವರಿ 3, ಮಧ್ಯಪ್ರದೇಶ ವಿಧಾನಸಭೆ ಅವಧಿ ಜನವರಿ 8, ರಾಜಸ್ಥಾನ ವಿಧಾನಸಭೆ ಅವಧಿ ಜನವರಿ 14 ಮತ್ತು ತೆಲಂಗಾಣ  ವಿಧಾನಸಭೆ ಅವಧಿಯು ಜನವರಿ 18ಕ್ಕೆ ಕೊನೆಗೊಳ್ಳಲಿದೆ.

ನವೆಂಬರ್‌ 7 ರಿಂದ 30ರವರೆಗೆ ಚುನಾವಣೆ!
ಮಧ್ಯಪ್ರದೇಶ, ಮಿಜೋರಾಂ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಘಡದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್‌ 7 ರಿಂದ 30ರವರೆಗೆ ಮತದಾನ ನಡೆಯಲಿದೆ. ಛತ್ತೀಸ್‌ಘಡದಲ್ಲಿ ಮಾತ್ರ ಎರಡು ಹಂತದ ಮತದಾನ ಇದ್ದು, ಉಳಿದ ರಾಜ್ಯಗಳಲ್ಲಿ ಒಂದು ಹಂತದಲ್ಲಿಯೇ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್‌ ಎಂದೇ ಈ ಚುನಾವಣೆಯನ್ನು ಕರೆಯಲಾಗುತ್ತಿದ್ದು, ರಾಜಕೀಯ ಪಕ್ಷಗಳು ಎಲೆಕ್ಷನ್‌ಗೆ ಭರ್ಜರಿ ತಯಾರಿ ನಡೆಸಿವೆ.

ಮಿಜೋರಾಂನಲ್ಲಿ ನವೆಂಬರ್‌ 7ಕ್ಕೆ ಮತದಾನ ನಡೆದರೆ, ಮಧ್ಯಪ್ರದೇಶದಲ್ಲಿ ನವೆಂಬರ್‌ 17ರಂದು ಮತದಾನ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್‌ 23ಕ್ಕೆ ಮತದಾನ ನಡೆಯುತ್ತಿದ್ದು, ತೆಲಂಗಾಣದಲ್ಲಿ ನವೆಂಬರ್‌ 30ರಂದು ವೋಟಿಂಗ್‌ ನಡೆಯಲಿದೆ. ಛತ್ತೀಸ್‌ಘಡದಲ್ಲಿ ನವೆಂಬರ್‌ 7 ಮತ್ತು 17ರಂದು ಎರಡು ಹಂತಗಳಲ್ಲಿ ಜನರು ಮತ ಚಲಾಯಿಸಲಿದ್ದಾರೆ.

”ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳು, ಛತ್ತೀಸ್‌ಗಢದ- 90 ಸ್ಥಾನಗಳು, ರಾಜಸ್ಥಾನದ 200 ಸ್ಥಾನಗಳು, ತೆಲಂಗಾಣದ 119 ಸ್ಥಾನಗಳು ಮತ್ತು ಮಿಜೋರಾಂನ 90 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮತದಾರರು ಅಕ್ಟೋಬರ್ 17 ರಿಂದ ನವೆಂಬರ್ 30 ರವರೆಗೆ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ನವೀಕರಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಅಂತೆಯೇ 5 ರಾಜ್ಯಗಳಲ್ಲಿ 1.77 ಲಕ್ಷ ಮತಗಟ್ಟೆಗಳು ಮತ್ತು 1.01 ಲಕ್ಷ ಮತಗಟ್ಟೆಗಳು ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿವೆ” ಎಂದು ಅವರು ಮಾಹಿತಿ ನೀಡಿದರು.

ಚುನಾವಣೆ ನಡೆಯುವ ಈ ಐದು ರಾಜ್ಯಗಳಲ್ಲಿ 940 ಕ್ಕೂ ಹೆಚ್ಚು ಅಂತರ-ರಾಜ್ಯ ಗಡಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಆ ಮೂಲಕ ನಾವು ಯಾವುದೇ ಅಕ್ರಮ ನಗದು, ಮದ್ಯ, ಉಚಿತ ವಸ್ತುಗಳು ಮತ್ತು ಮಾದಕ ವಸ್ತುಗಳ ಗಡಿಯಾಚೆಗಿನ ಚಲನೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...