Homeಮುಖಪುಟಮೋದಿ ದ್ವೇಷ ಭಾಷಣದ ವಿರುದ್ಧದ ದೂರುಗಳ ಪರಿಶೀಲನೆ ಆರಂಭಿಸಿದ ಚುನಾವಣಾ ಆಯೋಗ

ಮೋದಿ ದ್ವೇಷ ಭಾಷಣದ ವಿರುದ್ಧದ ದೂರುಗಳ ಪರಿಶೀಲನೆ ಆರಂಭಿಸಿದ ಚುನಾವಣಾ ಆಯೋಗ

- Advertisement -
- Advertisement -

ಪ್ರತಿಪಕ್ಷಗಳು ಮತ್ತು ದೇಶದ ಜನರ ಒತ್ತಡದ ಹೆಚ್ಚಾದ ನಂತರ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಮಾಡಿದ ದ್ವೇಷ ಭಾಷಣದ ವಿರುದ್ಧದ ದೂರುಗಳನ್ನು ಚುನಾವಣಾ ಆಯೋಗವು ಪರಿಶೀಲಿಸಲು ಪ್ರಾರಂಭಿಸಿದೆ ಎಂದು ತಿಳಿದುಬಂದಿದೆ ಎಂದು ಮೂಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಭಾನುವಾರ ಮೋದಿ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಐ-ಎಂ ಪ್ರತ್ಯೇಕವಾಗಿ ಚುನಾವಣಾ ಸಮಿತಿಗೆ ಒತ್ತಾಯಿಸಿದ್ದವು. ಸಾರ್ವಜನಿಕರೂ ಕೂಡ ದೂರು ದಾಖಲಿಸಿದ್ದರು.

ಕಾಂಗ್ರೆಸ್ ಪಕ್ಷದ ‘ಸಂಪತ್ತಿನ ಮರುಹಂಚಿಕೆ’ ಭರವಸೆಯನ್ನು ಟೀಕೆ ಮಾಡುವ ಭರದಲ್ಲಿ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ’ ಎಂದು ಮೋದಿ ಭಾನುವಾರ ರಾಜಸ್ಥಾನದಲ್ಲಿ ಹೇಳಿದ್ದರು. ಸಾಲದ್ದಕ್ಕೆ, ‘ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮೊದಲ ಹಕ್ಕು ಇದೆ’ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು ಎಂದು ಸುಳ್ಳು ಹೇಳಿದ್ದರು.

ಪ್ರಧಾನಿ ಭಾಷಣದ ವಿರುದ್ಧದ ದೂರುಗಳನ್ನು ಚುನಾವಣಾ ಆಯೋಗ ಪರಿಶೀಲಿಸಲು ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾತನಾಡಿದ್ದ ಮೋದಿಯವರ ಭಾಷಣದ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದಯ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಒತ್ತಾಯಿಸಿದೆ. ಅವರು ‘ವಿಭಜಕ’, ‘ದುರುದ್ದೇಶಪೂರಿತ’ ಮತ್ತು ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ.

ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಎಕ್ಸ್ ಪೋಸ್ಟ್‌ ಮಾಡಿ, “ಚುನಾವಣಾ ಆಯೋಗವು ದೂರಿನ ಬಗ್ಗೆ ಗಮನಹರಿಸಿ, ಮೋದಿ ಮತ್ತು ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ. ಜತೆmo ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿದರು.

“ಇತ್ತೀಚಿನ ದೂರಿನ ಅರಿವನ್ನು ಪಡೆಯಲು ಚುನಾವಣಾ ಆಯೋಗವನ್ನು ಒತ್ತಾಯಿಸಿ, ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ತಕ್ಷಣವೇ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು. ಕೋಮು ಭಾವೋದ್ರೇಕಗಳು ಮತ್ತು ದ್ವೇಷವನ್ನು ಪ್ರಚೋದಿಸಲು ಎಫ್‌ಐಆರ್ ದಾಖಲಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ‘ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ..’; ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...