Homeಮುಖಪುಟ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಮಮತಾ ಬ್ಯಾನರ್ಜಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರಬೇಕಾದರೆ ಮುಸ್ಲಿಂ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮುಸ್ಲಿಂ ಮತದಾರರಿಗೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಅವರಿಗೆ ತಿಳಿಸಲಾಗಿದೆ.

ಏಪ್ರಿಲ್ 3 ರಂದು ಹೂಗ್ಲಿಯ ತಾರಕೇಶ್ವರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತದಾರರ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂದು ನೋಟಿಸ್ ತಿಳಿಸಿದೆ.

ಇದನ್ನೂ ಓದಿ: ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ದುರುಪಯೋಗ – ಶಿವಸೇನೆ

“ವಿಶ್ವವಿದ್ಯಾಲಯದವರೆಗೆ ಕನ್ಯಾಶ್ರೀ ಎಂಬ ವಿದ್ಯಾರ್ಥಿ ವೇತನವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಿಶಶ್ರೀ ಇದೆ. ಸಾಮಾನ್ಯ ವರ್ಗಕ್ಕೆ ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನವಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನ ಸಹೋದರ ಸಹೋದರಿಯರಿಗೆ ಐಕ್ಯಶ್ರೀ ವಿದ್ಯಾರ್ಥಿ ವೇತನವಿದೆ. ನಾನು 35 ಲಕ್ಷ ಫಲಾನುಭವಿಗಳಿಗೆ 2 ಕೋಟಿ ರೂಗಳನ್ನು ನೀಡಿದ್ದೇನೆ”

“ನನ್ನ ಅಲ್ಪಸಂಖ್ಯಾತ ಸಹೋದರ ಸಹೋದರಿಯರನ್ನು ಕೈಮುಗಿದು ವಿನಂತಿಸುತ್ತಿದ್ದೇನೆ, ಬಿಜೆಪಿಯಿಂದ ಹಣವನ್ನು ಪಡೆದುಕೊಂಡ ಶೈತಾನ ವ್ಯಕ್ತಿಯ ಮಾತುಗಳನ್ನು ಕೇಳಿ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಬೇಡಿ.”

“ಅವರು ಅನೇಕ ಕೋಮುವಾದಿ ಹೇಳಿಕೆಗಳನ್ನು ನೀಡಿ ಹಿಂದೂ ಮುಸ್ಲಿಮರ ನಡುವೆ ಘರ್ಷಣೆಯನ್ನು ಪ್ರಾರಂಭಿಸುತ್ತಾರೆ. ಅವರು ಬಿಜೆಪಿಯ ಪ್ರಚಾರಕರಾಗಿದ್ದು, ಅವರ ಒಡನಾಡಿಯಾಗಿದ್ದಾರೆ. ಸಿಪಿಐ-ಎಂನ ಕಾಮ್ರೇಡರು ಮತ್ತು ಬಿಜೆಪಿಗರು ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ ನೀಡಿದ ಹಣದೊಂದಿಗೆ ಸುತ್ತಾಡುತ್ತಿದ್ದಾರೆ”

ಇದನ್ನೂ ಓದಿ: ವಾಹನಗಳಲ್ಲಿ ಏಕಾಂಗಿಯಾಗಿ ಓಡಾಡುವವರೂ ಮಾಸ್ಕ್‌ ಧರಿಸಬೇಕು – ದೆಹಲಿ ಹೈಕೋರ್ಟ್

“ದಯವಿಟ್ಟು ಅವರನ್ನು ಹಾಗೆ ಮಾಡಲು ಅನುಮತಿಸಬೇಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮಗೆ ತೀವ್ರ ಅಪಾಯವಿದೆ ಎಂಬುದನ್ನು ನೆನಪಿನಲ್ಲಿಡಿ.”

“ಬಿಜೆಪಿಯ ಮಾತು ಕೇಳಿ ಹಿಂದೂ ಮುಸ್ಲಿಂ ಎಂದು ನಿಮ್ಮ ನಡುವೆ ವಿಭಜನೆ ಮಾಡದಂತೆ ನಾನು ನನ್ನ ಹಿಂದೂ ಸಹೋದರ ಸಹೋದರಿಯರಿಗೆ ಹೇಳುತ್ತಿದ್ದೇನೆ” ಎಂದು ಮಮತಾ ಹೇಳಿದ್ದಾರೆ ಎಂದು ನೋಟಿಸ್‌ ಉಲ್ಲೇಖಿಸಿದೆ.

ಅವರ ಭಾಷಣವು ‘ಜನರ ಪ್ರಾತಿನಿಧ್ಯ ಕಾಯ್ದೆ’ ಮತ್ತು ‘ಮಾದರಿ ಸಂಹಿತೆಯ ನಿಯಮ’ಗಳನ್ನು ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...