ಶಿವಮೊಗ್ಗ ಜಿಲ್ಲೆಯ ಹುಣಸೋಡಿನಲ್ಲಿ 50ಕ್ಕೂ ಹೆಚ್ಚು ಡೈನಾಮೈಟ್‌ಗಳು ಸ್ಪೋಟಗೊಂಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರು ಇದರಲ್ಲಿ ಸಾವನ್ನಪ್ಪಿದ ಸುಮಾರು 8 ಕ್ಕೂ ಹೆಚ್ಚು ಕಾರ್ಮಿಕರಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಈ ಘಟನೆಯ ಕುರಿತು ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಲಾರಿಯೊಂದಕ್ಕೆ ತುಂಬಿದ್ದ ಜೆಲಿಟಿನ್ ಸ್ಫೋಟಗೊಂಡ ಪರಿಣಾಮ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಲಾರಿಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳಲ್ಲಿ, ಬಹುತೇಕ ಜೆಲಿಟಿನ್ ಕಡ್ಡಿಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಲಾರಿ ಛಿದ್ರಗೊಂಡಿದ್ದು, ಲಾರಿ ಚಾಲಕ ಮತ್ತು ಕಾರ್ಮಿಕರು ಸೇರಿದಂತೆ 8ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ
ಇದಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರ ಸುಧಾಕರ್, ಕಲ್ಲು ಗಣಿಗಾರಿಕೆಗೆ ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಜಮೀನಿನ ಮಾಲೀಕ ಅವಿನಾಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆಯಲ್ಲಿ ಸಾವನ್ನಪ್ಪಿರುವವರಿಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕುಮಾರಸ್ವಾಮಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದು, ಉನ್ನತಮಟ್ಟದ ತನಿಖೆಗೆ ಆಗ್ರಹಿಸಿದ್ದರು.
ಇದನ್ನೂ ಓದಿ: ಒತ್ತಡಕ್ಕೆ ಮಣಿದ ಸಿಎಂ ಯಡಿಯೂರಪ್ಪ: ಸಚಿವರ ಖಾತೆ ಮತ್ತೊಮ್ಮೆ ಬದಲು?